ಬೆಡ್ ಸ್ಕ್ಯಾಮ್‌ಗೆ ಬಿಜೆಪಿ ನಾಯಕರೇ ಕಿಂಗ್ ಪಿನ್‌ಗಳು: ದಿನೇಶ್ ಗುಂಡೂರಾವ್ ಗಂಭೀರ ಆರೋಪ

Published : May 08, 2021, 03:44 PM ISTUpdated : May 08, 2021, 03:46 PM IST
ಬೆಡ್ ಸ್ಕ್ಯಾಮ್‌ಗೆ ಬಿಜೆಪಿ ನಾಯಕರೇ ಕಿಂಗ್ ಪಿನ್‌ಗಳು: ದಿನೇಶ್ ಗುಂಡೂರಾವ್ ಗಂಭೀರ ಆರೋಪ

ಸಾರಾಂಶ

ಒಂದೆಡೆ ಕೊರೋನಾ ಅಟ್ಟಹಾಸಕ್ಕೆ ಜನರು ನರಳಾಡುತ್ತಿದ್ದರೆ, ಮತ್ತೊಂದೆಡೆ ಬೆಂಗಳೂರಿನಲ್ಲಿ  ಬೆಡ್ ಬ್ಲಾಕಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮೇಲೆ ಕಾಂಗ್ರೆಸ್ ನಾಯಕ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, (ಮೇ.08): ಬೆಡ್ ಬುಕಿಂಗ್ ಹಗರಣದಲ್ಲಿ ಬಿಜೆಪಿ ನಾಯಕರೇ ಕಿಂಗ್ ಪಿನ್ ಗಳು. ಬಳಿಕ ನಾಟಕ ಮಾಡುವವರು ಸಹ ಅವರೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೇಜಸ್ವಿ ಸೂರ್ಯ ಕಪಟ ನಾಟಕ ಸೂತ್ರದಾರ. ಅಲ್ಲಿ ಇರುವವರನನ್ನು ಖಾಲಿ ಮಾಡಿಸಬೇಕು. ತಮ್ಮ ಬೆಂಬಲಿಗರನ್ನು ಅಲ್ಲಿ ತಂದು ಕೂರಿಸಬೇಕೆಂದು ಈ ರೀತಿ ಮಾಡಿದ್ದಾರೆ. ಪುಡಿ ರೌಡಿಗಳ ರೀತಿ ಇವರ ಬೆಂಬಲಿಗರು ವಿಡಿಯೋ ಮಾಡಿದ್ದಾರೆ ಎಂದು ಕಿಡಿಕಾರಿದರು.

ಐಎಎಸ್  ಅಧಿಕಾರಿ ಮೇಲೆ ಹಲ್ಲೆಗೆ ಮುಂದಾದವರ ಮೇಲೆ ಎಫ್‌ಐಆರ್ ದಾಖಲಿಸಿ

ತೇಜಸ್ವಿ ಸೂರ್ಯ ಮತ್ತೆ ಅಲ್ಲಿಗೆ ಹೋಗಿ ವಿಡಿಯೋ ಆಫ್ ಮಾಡಿ ಕ್ಷಮಾಪಣೆ ಕೇಳಿದ್ದಾರೆ. ಇವರು ಸಂಸದರಾಗುವುದಕ್ಕೆ ನಾಲಾಯಕ್, ಇವರೆಲ್ಲರನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರೌಡಿ ಶಾಸಕರು ಮತ್ತು ಪುಡಿ ರೌಡಿಗಳ ಕಾರ್ಯಕರ್ತರಿಂದ ಈ ಘಟನೆ ನಡೆದಿದೆ. ಐಎಎಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದಕ್ಕೆ ಹೋಗಿದ್ದಾರೆ. ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳಿಗೆ ರಕ್ಷಣೆ ಕೊಡಬೇಕು. ಕೂಡಲೇ ನ್ಯಾಯಾಂಗ ತನಿಖೆಗೆ ವಹಿಸಬೇಕು. ಬಿಜೆಪಿ ನಾಯಕರು ಮಾಡಿದ ಕೆಲಸ ಪ್ರತಿಯೊಬ್ಬ ರಾಜಕಾರಣಿಗೂ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?