ಕುಮಾರಸ್ವಾಮಿ ಭೇಟಿಯಾದ ಬಿಜೆಪಿ ನಾಯಕರು: ಕಾಲು ಮುಟ್ಟಿ ಎಚ್‌ಡಿಕೆ ಆಶೀರ್ವಾದ ಪಡೆದ ಪ್ರತಾಪ್ ಸಿಂಹ

By Kannadaprabha News  |  First Published Jan 13, 2024, 8:01 AM IST

ಮರ ಕಡಿದ ಪ್ರಕರಣದಲ್ಲಿ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಪರವಾಗಿ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದರು. ಹಾಗಾಗಿ ಖುದ್ಧು ಭೇಟಿಯಾಗಿ ಪ್ರತಾಪ್ ಸಿಂಹ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ, ನೂತನ ಸಂಸತ್ ಭವನದಲ್ಲಿ ದುಷ್ಕರ್ಮಿಗಳು ಸ್ಮೋಕ್ ಬಾಂಬ್ ಎಸೆದ ಪ್ರಕರಣ ಹಾಗೂ ಮೈಸೂರು - ಕೊಡಗು ಕ್ಷೇತ್ರ ಟಿಕೆಟ್ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ರಾಮನಗರ(ಜ.13):  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅ‍ವರನ್ನು ಬಿಜೆಪಿ ನಾಯಕರು ಶುಕ್ರವಾರ ಭೇಟಿ ಮಾಡಿ ಚರ್ಚೆ ನಡೆಸಿದರು. ಬಿಡದಿ ಸಮೀಪದ ಕೇತಗಾನಹಳ್ಳಿಯ ತೋಟದ ಮನೆಗೆ ಬೆಳಗ್ಗೆ ಆಗಮಿಸಿದ ಕೊಡಗು - ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕುಮಾರಸ್ವಾಮಿಯವರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಇಬ್ಬರು ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯವಾಗಿ ಮಾತುಕತೆ ನಡೆಸಿದರು.

ಮರ ಕಡಿದ ಪ್ರಕರಣದಲ್ಲಿ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಪರವಾಗಿ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದರು. ಹಾಗಾಗಿ ಖುದ್ಧು ಭೇಟಿಯಾಗಿ ಪ್ರತಾಪ್ ಸಿಂಹ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ, ನೂತನ ಸಂಸತ್ ಭವನದಲ್ಲಿ ದುಷ್ಕರ್ಮಿಗಳು ಸ್ಮೋಕ್ ಬಾಂಬ್ ಎಸೆದ ಪ್ರಕರಣ ಹಾಗೂ ಮೈಸೂರು - ಕೊಡಗು ಕ್ಷೇತ್ರ ಟಿಕೆಟ್ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Tap to resize

Latest Videos

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಚ್‌ಡಿಕೆ ಭೇಟಿ ಮಾಡುತ್ತಿರುವ ಬಿಜೆಪಿ ಪ್ರಮುಖರು: ಯಾಕೆ?

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಪ್ರತಾಪ ಸಿಂಹ, ‘ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದ ತಿಳಿಸಿದೆ ಎಂದು ಬರೆದುಕೊಂಡಿದ್ದಾರೆ.
ಮಧ್ಯಾಹ್ನದ ವೇಳೆಗೆ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಜೀವರಾಜ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮುಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.

ಜೆಡಿಎಸ್, ಎನ್ ಡಿಎ ಮೈತ್ರಿಕೂಟದ ಭಾಗವಾಗಿದೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಬಿಜೆಪಿ ನಾಯಕರಾದ ವಿ.ಸೋಮಣ್ಣ, ಸಿ.ಟಿ.ರವಿ ಸೇರಿದಂತೆ ಇತರೆ ನಾಯಕರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

click me!