ಲೋಕಸಭೆ ಚುನಾವಣೆ 2024: ಬಿಜೆಪಿ ನಾಯಕರಿಂದ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಸಭೆ

By Kannadaprabha News  |  First Published Mar 26, 2024, 9:48 AM IST

ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಬಿ. ಶ್ರೀರಾಮುಲು,ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ದಾವಣಗೆರೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ್ತಿತರರು ಕುಮಾರ ಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

ಬೆಂಗಳೂರು(ಮಾ.26):  ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಬಿಜೆಪಿ ನಾಯಕರು ಹಾಗೂ ಅಭ್ಯರ್ಥಿಗಳು ಸೋಮವಾರ ಸರಣಿ ರೂಪದಲ್ಲಿ ಭೇಟಿ ಮಾಡಿದರು.

ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಬಿ. ಶ್ರೀರಾಮುಲು,ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ದಾವಣಗೆರೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ್ತಿತರರು ಕುಮಾರ ಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

Tap to resize

Latest Videos

ಲೋಕಸಭೆ ಚುನಾವಣೆ 2024: ಬಿಜೆಪಿ ಜತೆ ಮೈತ್ರಿ ಯಶಸ್ಸಿಗೆ ಜೆಡಿಎಸ್‌ ಅಷ್ಟಸೂತ್ರ..!

ಕುಮಾರಸ್ವಾಮಿ ಅವರು ಚೆನ್ನೈಯಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾನುವಾರವಷ್ಟೇ ಬೆಂಗಳೂರಿಗೆ ವಾಪಸಾಗಿ ದ್ದರು. ಇದೀಗ ಮುಂದಿನ ಮೂರ್ನಾಲ್ಕು ದಿನಗಳ ಕಾಲ ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ರಾಜಕೀಯ ಚಟುವಟಿಕೆಗಳನ್ನೂ ತಮ್ಮ ಮನೆಯಿಂದಲೇ ನಿಭಾಯಿಸಲಿದ್ದಾರೆ.

click me!