
ಬೆಂಗಳೂರು (ನ.21): ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸುತ್ತಿರುವುದನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಕೇಂದ್ರದ ಮೋದಿ ಸರಕಾರವೇ ಡಿಜಿಟಲೀಕರಣದ ಹೆಸರಿನಲ್ಲಿ 5.80 ಕೋಟಿ ರೇಷನ್ ಕಾರ್ಡ್ ರದ್ದುಪಡಿಸಿದೆ. ಬಿಜೆಪಿ ನಾಯಕರೇಕೆ ಈಗ ಗಪ್-ಚುಪ್ ಆಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪ್ರಶ್ನಿಸಿದ್ದಾರೆ.
ತಮ್ಮ ಈ ಎಕ್ಸ್ ಸಂದೇಶದಲ್ಲಿ ಅವರು ರಾಜ್ಯ ಬಿಜೆಪಿಯ ವಿಜಯೇಂದ್ರ, ಅಶೋಕ, ಬಸನಗೌಡ ಪಾಟೀಲ ಯತ್ನಾಳ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರನ್ನು ಟ್ಯಾಗ್ ಮಾಡಿದ್ದಾರೆ.
ರಾಜ್ಯ ಬಿಜೆಪಿ ಇಬ್ಭಾಗವಾಗಿದೆ. ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ ಮತ್ತು ಅವರ ತಂಡ ಪ್ರಯತ್ನಿಸುತ್ತಿದೆ. ಈಗ ವಿನಾ ಕಾರಣ ಪಡಿತರ ಚೀಟಿ ಹೆಸರಿನಲ್ಲಿ ಗದ್ದಲ ಸೃಷ್ಟಿಸುತ್ತಿದ್ದಾರೆ. ಬಿಪಿಎಲ್ ಪಡಿತರ ಚೀಟಿಯು ನಿಜವಾದ ಬಡವರಿಗೆ ಸಿಗಬೇಕು. ಹೀಗಾಗಿಯೇ ರಾಜ್ಯ ಸರ್ಕಾರವು ಶ್ರೀಮಂತರು, ತೆರಿಗೆ ಪಾವತಿದಾರರು ಮತ್ತು ಸರಕಾರಿ ಅಧಿಕಾರಿಗಳ ಬಳಿ ಇರುವ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುತ್ತಿದೆ. ರಾಜ್ಯ ಬಿಜೆಪಿ ನಾಯಕರು ಇದರ ವಿರುದ್ಧ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ' ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅನ್ನಭಾಗ್ಯ ನಡೆಸಲು ಆಗದೆ ಬಿಪಿಎಲ್ ಕಾರ್ಡ್ ರದ್ದು: ಜಗದೀಶ ಶೆಟ್ಟರ್
ಮುಂದುವರೆದು, ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ವಿಜಯೇಂದ್ರ, ಅಶೋಕ, ಯತ್ನಾಳ ಅವರಿಗೆ ದೆಹಲಿಗೆ ಹೋಗಿ ಪ್ರಧಾನಿ ಮನೆಯ ಎದುರು ಧರಣಿ ಕೂರುವ ಧೈರ್ಯ ಇದೆಯೇ?' ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.