
ಬೆಂಗಳೂರು(ಏ.20): ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಚೊಂಬು ಜಾಹೀರಾತಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ಪಕ್ಷವೇ ಜನರಿಗೆ ಟೋಪಿ ಹಾಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹಾಯ್ದಿದ್ದರೆ, ರಾಜ್ಯದ ಕೋಟ್ಯಂತರ ಜನರಿಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದರು. ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜನರೇ ಕಾಂಗ್ರೆಸ್‌ನವರಿಗೆ ಚೊಂಬು ಕೊಟ್ಟಿದ್ದಾರೆ. ರಾಜ್ಯದ ಜನರ ಮರ್ಯಾದೆ ತೆಗೆಯುವ ಕೆಲಸವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ. ಜನರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಕೇಂದ್ರ ಸರ್ಕಾರ ನಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದೆ: ಚಲುವರಾಯಸ್ವಾಮಿ
ಅಶೋಕ್ ಮಾತನಾಡಿ, ಕಾಂಗ್ರೆಸ್ ಪಕ್ಷ 10 ಕೆ.ಜಿ. ಅಕ್ಕಿ ಎಂದು ಹೇಳಿ ಒಂದು ಕೆ.ಜಿ. ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಿದೆ ಎಂದು ತೀಕ್ಷ್ಣವಾಗಿ ಹೇಳಿದರು.
ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರು. ಎಂದು 5 ರುಪಾಯಿ ನೀಡಿಲ್ಲ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ. ಚೊಂಬು ತೆಗೆದುಕೊಂಡು ಕೇರಳಕ್ಕೆ ಹೋಗಲಿ ಎಂದು ಹರಿಹಾಯ್ದರು.
ರಾಜ್ಯದಲ್ಲಿ ಅರಾಜಕತೆ
ಕಾಂಗ್ರೆಸ್ ಪಕ್ಷ 10 ಕೆ.ಜಿ. ಅಕ್ಕಿ ಎಂದು ಹೇಳಿ ಒಂದು ಕೆ.ಜಿ. ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.