
ಬೆಂಗಳೂರು(ಏ.04): ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸತ್ಯ ಹೇಳಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋತಿ ಕಿಡಿಕಾರಿದ್ದಾರೆ. ಸೋಲಿನ ಭೀತಿಯಿಂದ ಈ ರೀತಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿ, ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಸದಾಕಾಲ ಸುಳ್ಳು ಹೇಳುತ್ತಿದೆ ಎಂದು ಟೀಕಿಸಿದರು. ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಎಲ್ಲ ವಿಚಾರದ ಕುರಿತು ಸ್ಪಷ್ಟಪಡಿಸುತ್ತೇವೆ ಎಂದು ಜೋಶಿ ಹೇಳಿದರು.
Lok Sabha Election 2024: ದೇಶಾದ್ಯಂತ ‘ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ’ ಕಾರ್ಡ್: ಅಭಿಯಾನ ಶುರು
ಅಮಿತ್ ಶಾ ವಿರುದ್ಧ ಸಿಎಂ ಪದೇ ಪದೇ ಸುಳ್ಳು: ವಿಜಯೇಂದ್ರ
ಚಾಮರಾಜನಗರ : ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ಕಾಂಗ್ರೆಸ್ ಬ್ಯಾಟರಿ ಡೌನ್ ಆಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಗಾಬರಿಯಾಗಿ ಉಸಿರಾಡಲು ಕಷ್ಟ ಪಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ರಾಜ್ಯದಲ್ಲಿ ಬಂದಾಗಲೆಲ್ಲಾ ಬರಗಾಲ ಆವರಿಸುತ್ತದೆ. ಜನರು ಕಾಂಗ್ರೆಸ್‌ಗೆ ಶಾಪ ಹಾಕುತ್ತಿದ್ದಾರೆ. ರಾಜ್ಯದಲ್ಲಿ 800 ಮಂದಿ ರೈತರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರಕ್ಕೆ ಕರುಣೆಯೇ ಇಲ್ಲ. ರೈತರ ಸಮಸ್ಯೆ ಪರಿಹರಿಸುವ ಬದಲು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಅನುದಾನದ ವಿಚಾರವಾಗಿ ಅಮಿತ್ ಶಾ ವಿರುದ್ದ ಸಿಎಂ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ.
ದಿಲ್ಲಿಗೆ ಕರೆಸಿ ಭೇಟಿಯಾಗದೆ ಕಳಿಸಿದರು: ಈಶ್ವರಪ್ಪ
ಗ್ಯಾರಂಟಿಯಿಂದಾಗಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ: ಬಿಎಸ್‌ವೈ
ತುಮಕೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದ್ದು, ರಾಜ್ಯದಲ್ಲಿ ಯಾವುದೇ ಜನಪರ ಯೋಜನೆಯಾಗಲಿ, ಅಭಿವೃದ್ಧಿ ಕಾರ್ಯಗಳಾಗಲಿ ಆಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸುವ ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟೀಕಿಸಿದ್ದಾರೆ.
ತುಮಕೂರಿನಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ರೋಡ್ ಶೋನಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಮೋದಿ ಪ್ರಧಾನಿಯಾದರೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.