'ನಿರಾಣಿ ಮುಖ್ಯಮಂತ್ರಿ ಆಗಿಸುವ ಸಂಕಲ್ಪ ಮಾಡಿ'

By Kannadaprabha News  |  First Published Mar 21, 2023, 9:30 PM IST

ಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಅಧಿಕಾರ ತರುವ ನಿಟ್ಟಿನಲ್ಲಿ ನಾವು ಮುಂದಾಗಬೇಕಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 7 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ನಾವೇಲ್ಲರೂ ಶ್ರಮಿಸಬೇಕಾಗಿದೆ: ಚನ್ನಮ್ಮ ಪಾಟೀಲ 


ಬೀಳಗಿ(ಮಾ.21): ಬೀಳಗಿ ಮತಕ್ಷೇತ್ರದಲ್ಲಿ ಮತ್ತೆ ನಿರಾಣಿ ಅವರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದಾರೆ. ಈ ಸಲ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಶಾಸಕರನ್ನಾಗಿ ಮಾಡಿ ಮುಖ್ಯಮಂತ್ರಿಯನ್ನಾಗಿ ಮಾಡಲು ಸಂಕಲ್ಪ ತೊಡಬೇಕಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಮ್ಮ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಜಿಲ್ಲಾ ಘಟಕ ಮತ್ತು ಬೀಳಗಿ ಘಟಕದ ವತಿಯಿಂದ ಹಮ್ಮಿಕೊಂಡ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಅಧಿಕಾರ ತರುವ ನಿಟ್ಟಿನಲ್ಲಿ ನಾವು ಮುಂದಾಗಬೇಕಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 7 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ನಾವೇಲ್ಲರೂ ಶ್ರಮಿಸಬೇಕಾಗಿದೆ.

Tap to resize

Latest Videos

undefined

ಕಾಂಗ್ರೆಸ್‌ ಗ್ಯಾರಂಟಿ- 4 'ಯುವನಿಧಿ' ಘೋಷಣೆ: ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಭತ್ಯೆ

ರಾಜ್ಯ ಮಹಿಳಾ ಉಪಾಧ್ಯಕ್ಷೆ ಶರಮ್ಮ ಕಾಮರಡ್ಡಿ ಮಾತನಾಡಿ, ಸಚಿವರಾದ ಮುರುಗೇಶ ನಿರಾಣಿ ಅವರು ಬೀಳಗಿ ಮತಕ್ಷೇತ್ರದಲ್ಲಿ ಅಷ್ಟೇಯಲ್ಲ ರಾಜ್ಯದಲ್ಲಿ ತಮ್ಮದೆಯಾದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿಯೊಬ್ಬ ಮತದಾರರ ಮನೆಮನೆಗೆ ತೆರಳಿ ತಿಳಿಸಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಹಣಮಂತ ಆರ್‌.ನಿರಾಣಿ ಅಧ್ಯಕ್ಷೆ ವಹಿಸಿ ಮಾತನಾಡಿ, ಮಹಿಳೆಯರು ಅಬಲೆಯರಲ್ಲ ಅವರು ಕೂಡಾ ಸಬಲೆಯರು. ತೋಟಿಲು ತೂಗುವ ಕೈಗಳು ಜಗತ್ತನ್ನು ಆಳಬಹುದು. ಕೃಷಿ, ಶೈಕ್ಷಣಿಕ ಕ್ಷೇತ್ರದಲ್ಲಿ, ವಾಹನ ಚಲಾವಣೆಯಲ್ಲಿ, ವಿಮಾನ ನಡೆಸುವುದರಲ್ಲಿ ಅಲ್ಲದೇ ಅಂತರಿಕ್ಷದಲ್ಲಿ ಹಾರಾಡುವ ಶಕ್ತಿ ಸಾರ್ಮಾಥ್ಯವನ್ನು ನಮ್ಮ ಮಹಿಳೆಯರು ಪಡೆದುಕೊಂಡಿದ್ದು ಈ ದೇಶದಲ್ಲಿ ಹೊಸ ಮನ್ವಂತರಕ್ಕೆ ನಾಂದಿಯಾಗಿದೆ. ಮಹಿಳೆಯರು ಮನಸ್ಸು ಮಾಡಿದರೆ ಬೇಕಾಗಿದ್ದನ್ನು ಸಾಧಿಸ ಬಲ್ಲಳು ಎಂದರು.

ಸಚಿವ ಮುರುಗೇಶ ನಿರಾಣಿ ಅವರ ಧರ್ಮ ಪತ್ನಿ ಕಮಾಲಾ ನಿರಾಣಿ ಮಾತನಾಡಿದರು. ಪ್ರೇಮಾಕ್ಕ ಅಂಗಡಿ ಮಹಿಳೆಯರ ಕುರಿತು ಉಪನ್ಯಾಸ ನೀಡಿದರು. ಮಹಿಳಾ ಜಿಲ್ಲಾಧ್ಯಕ್ಷ ಸವಿತಾ ಹೊಸೂರ, ತಾಲೂಕು ಮಹಿಳಾ ಅಧ್ಯಕ್ಷೆ ಮಹಾದೇವಿ ಮೈಸೂರ, ವಿಜಯಲಕ್ಷ್ಮೀ, ಗೌರಮ್ಮ ಸಂಕಿನಮಠ, ಜಿಪಂ ಮಾಜಿ ಅಧ್ಯಕ್ಷ ಹೂವಪ್ಪ ರಾಠೋಡ, ಮಂಡಳ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ವಿಜಯಲಕ್ಷ್ಮೀ ಪಾಟೀಲ, ಕಾವೇರಿ ರಾಠೋಡ ಹಾಗೂ ಇನ್ನೂ ಅನೇಕರು ಪಾಲ್ಗೊಂಡಿದ್ದರು.

click me!