ಅಧಿಕಾರಕ್ಕಾಗಿ ಬಿಜೆಪಿ ನಾಯಕರುಗಳು ನಡೆದುಕೊಂಡ ರೀತಿಯಿಂದ ಓರ್ವ ಮಹಿಳೆಗೆ ಗರ್ಭಪಾತವಾಗಿದೆ. ಅಧಿಕಾರದ ದಾಹಕ್ಕಾಗಿ ಮಹಿಳೆ ತನ್ನ ಮಗುವನ್ನೇ ಕಳೆದುಕೊಂಡಿದ್ದಾರೆ.
ಬಾಗಲಕೋಟೆ, (ನ.30): ಇತ್ತೀಚೆಗೆ ಜಿಲ್ಲೆಯ ಮಹಾಲಿಂಗಪುರದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ವೇಳೆ ಬಿಜೆಪಿಯ ಮಹಿಳಾ ಸದಸ್ಯೆಯನ್ನು ಶಾಸಕ ಸಿದ್ದು ಸವದಿ ಎಳೆದಾಡಿ ಅಮಾನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಹಲ್ಲೆಗೆ ಒಳಗಾಗಿದ್ದ ಮಹಿಳಾ ಸದಸ್ಯರ ಪೈಕಿ ಗಾಯಗೊಂಡಿದ್ದ ಚಾಂದಿನಿ ನಾಯ್ಕ ಅವರಿಗೆ ಗರ್ಭಪಾತವಾಗಿದೆ. ಎಳೆದಾಟದಲ್ಲಿ ಸದಸ್ಯೆ ಚಾಂದಿನಿ ನಾಯ್ಕ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆಗ ಗಾಯಗೊಂಡಿದ್ದ ಚಾಂದಿನಿ ನಾಯಕ್ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ಗರ್ಭಪಾತವಾಗಿದೆ.
ಮಹಿಳೆ ಜೊತೆ ಬಿಜೆಪಿ ಶಾಸಕನ ಅನುಚಿತ ವರ್ತನೆ; ವಿಡಿಯೋ ವೈರಲ್
ನ.9ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ಆ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಬಿಜೆಪಿಯ ಮೂವರು ಸದಸ್ಯೆಯರು, ತಮಗೆ ಅವಕಾಶ ಸಿಗದೇ ಇದ್ದ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಲು ಮುಂದಾಗಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಬೆಂಬಲಿಗರು ಬಿಜೆಪಿಯ ಸದಸ್ಯರಾದ ಗೋದಾವರಿ, ಚಾಂದಿನಿ ನಾಯ್ಕ ಹಾಗೂ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದರು.
ಮಹಿಳಾ ಸದಸ್ಯರನ್ನು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದ ವಿಡಿಯೋ ವೈರಲ್ ಆಗಿತ್ತು. ಈ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಎಳೆದಾಟದಲ್ಲಿ ಸದಸ್ಯೆ ಚಾಂದಿನಿ ನಾಯ್ಕ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಬಿಜೆಪಿಯ ಮೂವರು ಮಹಿಳಾ ಸದಸ್ಯರ ಮೇಲೆ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದ ಆರೋಪ ಕೇಳಿಬಂದಿದ್ದು, ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತಗೊಂಡಿತ್ತು.