ಬಿಜೆಪಿ ಶಾಸಕ ಕೊರೋನಾ ವಿರುದ್ಧ ಹೋರಾಡಿ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದ್ರೂ ಇನ್ನು ಏಳು ದಿನ ಕ್ವಾರಂಟೈನ್ ಆಗಲಿದ್ದಾರೆ,
ಬೆಳಗಾವಿ, (ಆ.02): ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರು ಕೊರೋನಾ ವೈರಸ್‌ನಿಂದ ಗುಣಮುಖರಾಗಿದ್ದು, ಇಂದು (ಭಾನುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೋವಿಡ್-19 ಸೋಂಕಿಗೆ ದೃಢವಾಗಿದ್ದ ಶಾಸಕ ಅನಿಲ್ ಬೆನಕೆ ಸಂಪೂರ್ಣ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಳಗಾವಿ: ಕೊರೋನಾ ಲಕ್ಷಣ, ಹೋಂ ಕ್ವಾರಂಟೈನ್‌ನಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ
ಇತ್ತೀಚೆಗೆ ಅನಿಲ್ ಬೆನಕೆ ಅವರಿಗೆ ಕೋವಿಡ್ ಸೋಂಕು ದೃಡಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆಗಾಗಿ ಕೆಎಲ್ ಇ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ವೇಳೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆ ಸಿಬ್ಬಂದಿಗೆ ಸನ್ಮಾನಿಸಿದರು.
ಬಳಿಕ ಪ್ರತಿಕ್ರಿಯಿಸಿರುವ ಅವರು, ಆಸ್ಪತ್ರೆ ವೈದ್ಯರು, ವೈದ್ಯಕೀಯ ತಂಡದವರಿಂದ ಗುಣಮುಖವಾಗಿದ್ದೇನೆ. 7 ದಿನಗಳ ಕಾಲ ಮನೆಯಲ್ಲಿ ಪ್ರತ್ಯೇಕವಾಗಿರಲು ವೈದ್ಯರು ಸಲಹೆ ನೀಡಿದ್ದಾರೆ. ಅದನ್ನು ಪಾಲಿಸುವೆ. ಸಾರ್ವಜನಿಕರು ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.