* ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆ
* ಬಿಜೆಪಿ ಶಾಸಕ ದಿಢೀರ್ ದೆಹಲಿಗೆ
* ಭಾರೀ ಕುತೂಹಲ ಮೂಡಿಸಿದ ಬಿಜೆಪಿ ಶಾಸಕ ದಿಲ್ಲಿ ಪ್ರವಾಸ
ಬೆಂಗಳೂರು, (ಜೂನ್.12): ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆ ನಡೆದಿಲ್ಲ ಎಂದು ಹೇಳುವ ಮೂಲಕ ನಾಯಕತ್ವದ ಊಹಾಪೋಹಗಳಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬ್ರೇಕ್ ಹಾಕಿದ್ದರು. ಆದರೆ ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕ ದಿಢೀರ್ ದೆಹಲಿಗೆ ತೆರಳಿದ್ದು, ಭಾರೀ ಕುತೂಹಲ ಮೂಡಿಸಿದೆ.
ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಹಾರಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಮಧ್ಯೆ ಶಾಸಕ ಅರವಿಂದ ಬೆಲ್ಲದ್ ದೆಹಲಿ ಭೇಟಿಯು ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಹಿನ್ನೆಲೆಯಲ್ಲಿ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿಗೆ, ಕುತೂಹಲ ಮೂಡಿಸಿದೆ ಭೇಟಿ
ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾನು ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿರು.
ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿಯಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.