
ಬೆಂಗಳೂರು, (ಜೂನ್.23): ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಫೋನ್ ಕದ್ದಾಲಿಕೆ ಬಾಂಬ್ ಸಿಡಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.
ಇನ್ನು ಈ ಫೋನ್ ಕದ್ದಾಲಿಕೆ ಬಗ್ಗೆ ನೀಡಿರುವ ದೂರನ್ನ ವಾಪಸ್ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವುದಕ್ಕೆ ಇದೀಗ ಸ್ವತಃ ಅರವಿಂದ ಬೆಲ್ಲದ್ ಸ್ಪಷ್ಟನೆ ಕೊಟ್ಟಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಬೆಲ್ಲದ್‌ಗೆ ಕರೆ ಮಾಡಿದ್ದು ಯುವರಾಜ್ ಅಲ್ಲ!
ನನ್ನ ಫೋನ್ ಟ್ಯಾಪ್ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆ ನಡೆಯುತ್ತಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದಿದ್ದಾರೆ.
ಅಲ್ಲದೇ ಕೆಲವು ಮಾಧ್ಯಮಗಳಲ್ಲಿ ನಾನು ಕೊಟ್ಟಿದ್ದ ದೂರನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂಬ ಸುದ್ದಿಗಳು ಪ್ರಕಟವಾಗುತ್ತಿವೆ. ಅಂತಹ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನನ್ನ ದೂರವಾಣಿ ಟ್ಯಾಪ್ ಆಗಿರುವ ಕುರಿತು ಸಂಪೂರ್ಣ ತನಿಖೆಯಾಗಿ ಸತ್ಯ ಹೊರಬರಬೇಕಿದೆ. ಹೀಗಾಗಿ ದೂರು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಟ್ವೀಟ್ ಮಾಡಿದ್ದಾರೆ.
ನನ್ನ ದೂರವಾಣಿ ಕದ್ದಾಲಿಕೆ ಆಗುತ್ತಿದೆ. ದೂರವಾಣಿ ಕರೆ ಆಧರಿಸಿ ನನ್ನನ್ನು ಗಮನಿಸಲಾಗುತ್ತಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಬಗ್ಗೆ ಶಾಸಕ ಬೆಲ್ಲದ್ ಗೃಹ ಇಲಾಖೆ, ಸ್ಪೀಕರ್‌ಗೆ ಅವರು ದೂರು ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.