
ವಿಜಯಪುರ(ನ.01): ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನೋವಿದೆ. ಅದನ್ನ ಪಕ್ಷದ ಹಿರಿಯರು ಸರಿಪಡಿಸುತ್ತಾರೆ. ಒಂದು ಕಾಲದಲ್ಲಿ ರೆಡ್ಡಿ ಅವರಿಂದ ಬಿಜೆಪಿಗೆ ಅನಕೂಲಮಾಡಿಕೊಂಡು ಸಿಎಂ ಆಗಿದ್ದಾರೆ. ಯಾರು ರೆಡ್ಡಿ ಅವರ ಅನಕೂಲದಿಂದ ಸಿಎಂ ಆಗಿದ್ದಾರೋ ಅವರು ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗಬೇಕಿದೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ವಿಜಯಪುರ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಹಾಗೂ ಸಂಫುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಮಂಗಳವಾರ) ನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಯತ್ನಾಳ್ ಅವರು, ನಾನಂತೂ ಸಚಿವನಾಗಲು ಆಕಾಂಕ್ಷಿಯಲ್ಲಾ, ಯಾರಾದರೂ ಒಬ್ಬ ಒಳ್ಳೆಯವರನ್ನಾ ಉಸ್ತುವಾರಿ ಮಾಡಿ ಎಂದು ಬೊಮ್ಮಾಯಿ ಅವರಿಗೆ ಹೇಳಿದ್ದೇವೆ. ನನಗಂತೂ ವೈಯುಕ್ತಿವಾಗಿ ಸಚಿವನಾಗಬೇಕೆಂದಿಲ್ಲಾ, ಯಾರನ್ನಾದರೂ ಉಸ್ತುವಾರಿಯನ್ನಾಗಿ ಹಾಕಿದರೂ ಸ್ವಾಗತಿಸುತ್ತೇನೆ. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂಬ ನಿರೀಕ್ಷೆ ಮಾಡಲ್ಲ ಅಂತ ಯತ್ನಾಳ್ ಹೇಳಿದ್ದಾರೆ.
ನನ್ನ ಬಳಿಯೂ ರೆಕಾರ್ಡಿಂಗ್ ಇದೆ, ಅದನ್ನು ತೆಗೆದರೆ ನಿಮ್ಮದೆಲ್ಲವೂ ಬಂದ್: ಯತ್ನಾಳ್ ಬಾಂಬ್..!
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಸಚಿವ ಸಂಪುಟ ವಿಸ್ತರಣೆ ಮಾಡುವ ಆಸಕ್ತಿಯಿಲ್ಲ, ಸಂಪುಟ ವಿಸ್ತರಣೆ ವಿಚಾರದಲ್ಲಿ ಅಸಮಾಧಾನ ಭಿನ್ನಮತ ಬೇಡ, ಆರಾಮಾಗಿ ಆರು ತಿಂಗಳು ಕಳೆಯಬೇಕೆಂದುಕೊಂಡಿದ್ದಾರೆ ಅಂತ ಹೇಳಿದ್ದಾರೆ.
ಬಣಜಿಗ ಸಮಾಜದ ಬಗ್ಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಯತ್ನಾಳ್ ಅವರು, ಕೆಲವು ಜನರು ಉದ್ದೇಶಪೂರ್ವಕವಾಗಿಯೇ ಮಾಡುತ್ತಾರೆ. ಹೀಗೆಲ್ಲ ಮಾಡಿಕೊಂಡು ಹೋದರೆ ಅವರ ಜನಪ್ರತಿನಿಧಿಗಳು ಕಡಿಮೆಯಾಗುತ್ತಾರೆ. ಅದನ್ನು ಗಂಭೀರವಾಗಿ ತಿಳಿದುಕೊಳ್ಳಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಮುಂದೆ ಅವರ ಮಹಾನ್ ಮೇರುನಾಯಕನೂ ಔಟ್ ಆದರೆ ಆಶ್ಚರ್ಯವಿಲ್ಲ ಅಂತ ಯತ್ನಾಳ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.