ಸದನದಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

By Suvarna News  |  First Published Sep 24, 2020, 7:03 PM IST

ಸದಾ ಸ್ವಪಕ್ಷದ ವಿರುದ್ಧ ಮಾತಾಡಿ ಟೀಕೆಗೆ ಗುರಿಯಾಗುವ ಬಸವರಾಜ್ ಪಾಟೀಲ್ ಯತ್ನಾಳ್ ಅವರು ಮತ್ತೆ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾಡಿದ್ದಾರೆ.


ಬೆಂಗಳೂರು, (ಸೆ.24): ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಲೂಟಿ ಹೊಡೆಯುತ್ತಿವೆ ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಎಂದು ಆಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಪ್ರಶ್ನೆ ಮಾಡಿದ್ದಾರೆ.

"

Latest Videos

undefined

ಇಂದು (ಗುರುವಾರ) ವಿಧಾನಸಭೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ ನಿರ್ಣಯ ಚರ್ಚೆಯ ಮೇಲೆ ಮಾತನಾಡಿದ ಯತ್ನಾಳ್, ತಮ್ಮ ಅನಭವವನ್ನು ಎಳೆ, ಎಳೆಯಾಗಿ ಕೇಲವೇ ನಿಮಿಷದಲ್ಲಿ ಸದನ ಮುಂದೆ ಬಿಚ್ಚಿಟ್ಟರು. ನನಗೆ ಹೀಗಾದರೆ ಜನ ಸಾಮಾನ್ಯರ ಪಾಡೇನು? ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ ತಮ್ಮ ಆಡಳಿತ ಪಕ್ಷದ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸಂತ್ರಸ್ತರು ಭಿಕ್ಷುಕರಲ್ಲ: ಕೇಂದ್ರದ ವಿರುದ್ಧ ಮತ್ತೊಮ್ಮೆ ಗುಡುಗಿದ ಯತ್ನಾಳ್

ಬಸವನಗೌಡ ಪಾಟೀಲ್ ಯತ್ನಾಳ್, ಸುರೇಶ್ ಅಂಗಡಿ ನಿಧನದಿಂದ ಆಘಾತಗೊಂಡಿದ್ದೇನೆ. ಏಮ್ಸ್ ನಂತಹ ದೊಡ್ಡ ಸಂಸ್ಥೆಯಲ್ಲಿಯೇ ಅವರ ಜೀವ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದರೆ ನಾವು ಕೋವಿಡ್ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ. ವಾರಕ್ಕೆ ಎರಡು ಬಾರಿ ಲಾಕ್ ಡೌನ್ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ತಮಗೆ ಕೊರೊನಾ ಬಂದಾಗ ಖಾಸಗಿ ಆಸ್ಪತ್ರೆಯೊಂದು 3.80 ಲಕ್ಷ ಮೂರು ದಿನಕ್ಕೆ ಬಿಲ್ ಮಾಡಿದೆ. ಶಾಸಕರಾದ ನಮಗೇ ಇಷ್ಟು ಬಿಲ್ ಮಾಡಿದ್ದರೆ ಜನಸಾಮಾನ್ಯರ ಪಾಡೇನು? ಸಿದ್ದರಾಮಯ್ಯನವರು ಹೇಳಿದಂತೆ ಬೇಕಾಬಿಟ್ಟಿಯಾಗಿ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ. ಸರ್ಕಾರ ಏನು ಮಾಡುತ್ತಿದೆ? ಇಂತಹ ಆಸ್ಪತ್ರೆಗಳ ಮೇಲೆ ಸರ್ಕಾರಕ್ಕೆ ಯಾವ ನಿಯಂತ್ರಣವಿದೆ ? ಎಂದು ಪ್ರಶ್ನಿಸಿದರು.

click me!