'ಶಾದಿಭಾಗ್ಯ' ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ ಎಂದ ಬಿಜೆಪಿ ಶಾಸಕ

Published : Mar 09, 2020, 05:13 PM ISTUpdated : Mar 09, 2020, 05:22 PM IST
'ಶಾದಿಭಾಗ್ಯ' ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ ಎಂದ ಬಿಜೆಪಿ ಶಾಸಕ

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಶಾದಿಭಾಗ್ಯ’ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರದ್ದುಪಡಿಸಿದೆ. ಇದನ್ನ ಬಿಜೆಪಿ ಶಾಸಕ ಸ್ವಾಗತಿಸಿದ್ದು, ಶಾದಿಭಾಗ್ಯ ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರು, (ಮಾ.09): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಶಾದಿಭಾಗ್ಯ’ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪನವರ ಬಿಜೆಪಿ ಸರ್ಕಾರ ರದ್ದುಪಡಿಸಿದೆ.

ಈ ಕ್ರಮವನ್ನ ವಿಜಯಪುರ ನಗರ ಬಿಜೆಪಿ ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದು, ಪಾಕಿಸ್ತಾನ ಇಂಥಹ ಯೋಜನೆ ನೀಡುತ್ತಿದೆ. ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಗುಡುಗಿದರು.

ಸಿದ್ದು ಜಾರಿಗೆ ತಂದಿದ್ದ ‘ಶಾದಿ ಭಾಗ್ಯ’ ಸ್ಥಗಿತ!

ಶಾದಿಭಾಗ್ಯ ರದ್ದು ಪಡಿಸಿರುವುದು ಉತ್ತಮ ಕೆಲಸ,  ನಾನು ಇದನ್ನು  ಸ್ವಾಗತಿಸುತ್ತೇನೆ,  ಭಾರತ ಜಾತ್ಯಾತೀತ ರಾಷ್ಟ್ರ, ಹೀಗಾಗಿ ಅಲ್ಪ ಸಂಖ್ಯಾತರ ಓಲೈಕೆ ಮಾಡುವುದರಲ್ಲಿ ಅರ್ಥವಿಲ್ಲ ಎಂದರು. 

ಭಾರತದ ಎಲ್ಲಾ ಜನರಿಗೂ  ಸರಿಸಮಾನದ ನಾಗರಿಕ ಸಂಹಿತೆ ತರಬೇಕು.  ಭಾರತದಲ್ಲಿರುವ ಹಿಂದೂಗಳಿಗೆ ಏನನನ್ನೂ ನೀಡಬಾರದೇ?  ಜಾತ್ಯಾತೀತ ಎಂದರೇ ಎಲ್ಲವನ್ನೂ ಅಲ್ಪ ಸಂಖ್ಯಾತರಿಗೆ ನೀಡುವುದು ಎಂದರ್ಥವೇ ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ, ಕ್ರೈಸ್ತ, ಜೈನ್‌, ಸಿಖ್‌ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೇರಿದ ಯುವತಿಯರ ಮದುವೆಗೆ 50 ಸಾವಿರ ರೂ. ನೀಡುವ ಯೋಜನೆ ಇದಾಗಿದೆ.

ಶಾದಿಭಾಗ್ಯ ರದ್ದು ಮಾಡಿ ಇದರ ಬದಲಿಗೆ ರಾಜ್ಯ ಸರ್ಕಾರವೇ ಸಮೂಹಿಕ ವಿವಾಹ ಮಾಡುವ ಯೋಜನೆಯನ್ನ ಜಾರಿಗೆ ತಂದಿದೆ. ಸರ್ಕಾರ ನಡೆಸಿ ಕೊಡುವ ಈ ಸಾಮೂಹಿಕ ವಿವಾಹದಲ್ಲಿ ಎಲ್ಲಾ ವರ್ಗದವರಿಗೂ ಅವಕಾಶ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ