ಸಿಎಂರಿಂದ ಭಂಡತನ ಪ್ರದರ್ಶನ, ಆಪಾದನೆ ಬಂದ ಮೇಲೆ ಮರಳಿ ಕೊಡೋ ಚಾಳಿ ಬೆಳೆಸಿಕೊಂಡ ಸಿದ್ದು: ದೊಡ್ಡನಗೌಡ ಪಾಟೀಲ್

By Girish Goudar  |  First Published Oct 2, 2024, 5:24 PM IST

ನಾವು ಯಾವುದೇ ಕಾರಣಕ್ಕೂ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡಲ್ಲ. ಸಿದ್ದರಾಮಯ್ಯ ರಾಜೀನಾಮೆ ನೀಡೋವರಗೆ ಬಿಜೆಪಿ ಹೋರಾಟ ನಿರಂತರವಾಗಿರುತ್ತದೆ ಎಂದ ವಿಧಾನಸಭೆ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್ 
 


ಕೊಪ್ಪಳ(ಅ.02):  ಸಿಎಂ ಸಿದ್ದರಾಮಯ್ಯ ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ. ಆಪಾದನೆ ಬಂದ ಮೇಲೆ ಮರಳಿ ಕೊಡೋ ಚಾಳಿ ಬೆಳೆಸಿಕೊಂಡಿದ್ದಾರೆ. ಈ ಹಿಂದೆ ಹ್ಯಾಬ್ಲೋಟ್ ವಾಚ್ ಪಡೆದು ಮರಳಿಸಿದ್ದರು. ಇದೀಗ ಸೈಟ್‌ ಅನ್ನು ಮರಳಿ ನೀಡಿದ್ದಾರೆ. ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್ ಒತ್ತಾಯಿಸಿದ್ದಾರೆ. 

ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೊಡ್ಡನಗೌಡ ಪಾಟೀಲ್ ಅವರು, ನಾವು ಯಾವುದೇ ಕಾರಣಕ್ಕೂ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡಲ್ಲ. ಸಿದ್ದರಾಮಯ್ಯ ರಾಜೀನಾಮೆ ನೀಡೋವರಗೆ ಬಿಜೆಪಿ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದ್ದಾರೆ. 

Tap to resize

Latest Videos

undefined

ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ: ಶರಣು ಸಲಗರ್

ಜನಾರ್ದನ ರೆಡ್ಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಇದೇ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ದರು. ಆದ್ರೆ ಅವರ ಪ್ರಕರಣವನ್ನು ಸಿಬಿಐಗೆ ನೀಡಲು ವಿರೋಧ ಮಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ. 

ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ಗೆ ನೋಟಿಸ್ ನೀಡಿದ್ದೇವೆ. ಯತ್ನಾಳ್‌ ಹೇಳಿಕೆಗಳು ಪಕ್ಷಕ್ಕೆ ಮುಜುಗರವಾಗುತ್ತಿರೋದು ಸತ್ಯ. ಸೂಕ್ತ ಸಮಯದಲ್ಲಿ ಪಕ್ಷ ಅವರ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದು ದೊಡ್ಡನಗೌಡ ಪಾಟೀಲ್‌ ತಿಳಿಸಿದ್ದಾರೆ. 

click me!