Basavaraj Bommai: ಸಿಎಂ ಬೊಮ್ಮಾಯಿ ಬದಲಾವಣೆ ಸುದ್ದಿ, ಅಚ್ಚರಿ ಹೇಳಿಕೆ ನೀಡಿದ ಬಿಜೆಪಿ ಶಾಸಕ

By Suvarna News  |  First Published Dec 28, 2021, 4:00 PM IST

* ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಸುದ್ದಿ
* ಅಚ್ಚರಿ ಹೇಳಿಕೆ ನೀಡಿದ ಬಿಜೆಪಿ ಶಾಸಕ
* ಬಿಜೆಪಿ ಶಾಸಕ ಸಲಹೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ


ಬೆಂಗಳೂರು, (ಡಿ.28): ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಬದಲಾವಣೆ ಮಧ್ಯೆ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ಮಹತ್ವದ ಪಡೆದುಕೊಂಡಿದೆ.

ಇಂದಿನಿಂದ (ಡಿ.28) ಎರಡು ದಿನಗಳ ಹುಬ್ಬಳ್ಳಿಯಲ್ಲಿ(Hubballi) ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಗಳಿವೆ. ಇದರ ನಡುವೆ ಬಿಜೆಪಿ ಶಾಸಕರೊಬ್ಬರು ಸಿಎಂ ಬೊಮ್ಮಾಯಿ ವಿಶ್ರಾಂತಿ ಪಡೆಯುವುದು ಒಳ್ಳೆಯದು ಎಂದು ಅಚ್ಚರಿ ಸಲಹೆ ನೀಡಿದ್ದಾರೆ.

Tap to resize

Latest Videos

Karnataka BJP: ಇದೀಗ ಬಂದ ಸುದ್ದಿ, ಬೊಮ್ಮಾಯಿ ನಾಯಕತ್ವ ಬದಲಾವಣೆ ಬಗ್ಗೆ ಉಸ್ತುವಾರಿ ಸ್ಪಷ್ಟನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಲು ನೋವಿನ ಕಾರಣದಿಂದ 20 ದಿನ ವಿಶ್ರಾಂತಿ(Rest) ತೆಗೆದುಕೊಳ್ಳಲಿ ಎಂದು ಆಡಳಿತ ಪಕ್ಷದ ಶಾಸಕ ಎಂ ಪಿ ಕುಮಾರಸ್ವಾಮಿ(M.P. Kumaraswamy) ಅವರು ಬಹಿರಂಗವಾಗಿಯೇ ಸಲಹೆ ನೀಡಿದ್ದಾರೆ.

ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬೊಮ್ಮಾಯಿ 20 ದಿನ ವಿಶ್ರಾಂತಿ ತೆಗೆದುಕೊಂಡರೆ ಆಡಳಿತ ಚುರುಕಾಗುತ್ತದೆ. ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡರೆ ಕಾಲು ನೋವಿನಿಂದ ಗುಣಮುಖರಾಗಬಹುದು. ಎಲ್ಲೂ ಹೊರಗಡೆ ಓಡಾಡಬಾರದು, ಮನೆಯಿಂದಲೆ ಕಚೇರಿ ಕೆಲಸ ಮಾಡಲಿ ಎಂದರು.

ಬೊಮ್ಮಾಯಿ ಪ್ರತಿಕ್ರಿಯೆ
ಸಿಎಂ ವಿಶ್ರಾಂತಿ ಪಡೆದು ಕೆಲಸ‌ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿಯೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಎಂ.ಪಿ ಕುಮಾರಸ್ವಾಮಿಗೆ ನನ್ಮೇಲೆ ಬಹಳ ಪ್ರೀತಿ ಇದೆ. ವರ್ಷಪೂತಿ ದಿನಾಲು 15 ಗಂಟೆ ಕೆಲಸ ಮಾಡೊ ಸಂಕಲ್ಪ ಮಾಡಿದ್ದಿನಿ. 2023 ಕ್ಕೆ ಬಿಜೆಪಿ ಅಧಿಕಾರಕ್ಕೆ ತರೋದೆ ನನ್ನ ಗುರಿ. ಈಗಿನಿಂದಲೇ ಅದನ್ನ ಸ್ಟಾಟ್೯ ಮಾಡುತ್ತೇನೆ. ಅರುಣ್ ಸಿಂಗ್ ಸೇರಿದಂತೆ ಕೇಂದ್ರ ವರಿಷ್ಟರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ‌. ಅವರಿಗೆ ಅದಕ್ಕಾಗಿ ಧನ್ಯವಾದ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೆವೆ ಎಂದು ಹೇಳಿದರು.

ಅರುಣ್ ಸಿಂಗ್ ಹೇಳಿದ್ದೇನು?
ಬಹಳ ದಿನಗಳಿಂದ ಬಹು ಚರ್ಚಿತ ವಿಷಯವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆಯನ್ನು ನೀಡಿದ್ದಾರೆ. ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಯಡಿಯೂರಪ್ಪನವರ ವಿಚಾರದಲ್ಲೂ ಅರುಣ್ ಸಿಂಗ್ ಇದೇ ಮಾತನ್ನು ಹೇಳಿತ್ತಾ ಬಂದಿದ್ದರು. ಆದ್ರೆ, ಕೊನೆಗೆ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆಯಲಾಯ್ತು. ಹಾಗಾಗಿ, ಬೊಮ್ಮಾಯಿ ಬದಲಾವಣೆ ಇಲ್ಲ ಎನ್ನುವ ಅರುಣ್ ಸಿಂಗ್ ಹೇಳಿಕೆ ಸುಳ್ಳಾದರೂ ಆಗಬಹುದು.
 

click me!