* ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ
* ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಬಿಜೆಪಿ ಶಾಸಕ
* ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಎಂ.ಪಿ. ರೇಣುಕಾಚಾರ್ಯ ಹೇಳಿಕೆ
ದಾವಣಗೆರೆ, (ಸೆ.25): ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು (ಸೆ.25) ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಹಲವಾರು ಜನ ಬಿಜೆಪಿಗೆ ಬರಲು ಸಾಲಿನಲ್ಲಿ ನಿಂತಿದ್ದಾರೆ. ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಸಿದ್ದರಾಗಿದ್ದಾರೆ. ಇಷ್ಟರಲ್ಲೆ ಎಲ್ಲ ಬದಲಾಗಲಿದೆ. 2023 ಕ್ಕೆ ಕಾಂಗ್ರೆಸ್ ಧೂಳಿಪಟವಾಗುತ್ತೆ ಎಂದು ಭವಿಷ್ಯ ನುಡಿದರು.
ಆಪರೇಷನ್ ಹಸ್ತ: ಕಾಂಗ್ರೆಸ್ ಕಣ್ಣಿಟ್ಟಿರುವ ಬಿಜೆಪಿ, ಜೆಡಿಎಸ್ ಶಾಸಕರು ಯಾರು-ಯಾರು..?
ಇನ್ನು ಇದೇ ವೇಳೆ ಇದೇ ಸೆ.27ಕ್ಕೆ ಕರೆ ನೀಡಲಾಗಿರುವ ಭಾರತ್ ಬಂದ್ ಬಗ್ಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಭಾರತ್ ಬಂದ್ ಯಾವ ಪುರುಷಾರ್ಥಕ್ಕೆ? ಜನರು ಈ ಫೇಕ್ ರೈತರ ಹೋರಾಟವನ್ನು ಬೆಂಬಲಿಸುವುದಿಲ್ಲ. ಇದಕ್ಕೆ ನಕಲಿ ಕಾಂಗ್ರೆಸ್ ಬೆಂಬಲವಾಗಿ ನಿಂತಿದೆ ಎಂದು ಕಿಡಿಕಾರಿದರು.
ಬಿಜೆಪಿ ಕೇಂದ್ರ, ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ರೈತರು ಸೇರಿ ಎಲ್ಲ ವರ್ಗಗಳ ಅಭಿವೃದ್ಧಿಗೆ ಕಾರ್ಯಕ್ರಮ ನೀಡಿದೆ. ನೊಂದವರಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಬಿಜೆಪಿ ಹಾಗೂ ಮೋದಿ ವರ್ಚಸ್ಸು ಕಂಡು ಕಾಂಗ್ರೆಸ್ ಹೋರಾಟದ ಹುನ್ನಾರ ನಡೆಸಿದ್ದು, ಈ ಹೋರಾಟಕ್ಕೆ ಯಾವ ಜನರೂ ಬೆಂಬಲಿಸಲ್ಲ ಎಂದರು.