ಜಗದ್ಗುರುಗಳು 3ನೇ ಕಣ್ಣು ಬಿಟ್ಟರೆ ಭಸ್ಮವಾಗುತ್ತೇವೆ: ರೇಣುಕಾಚಾರ್ಯ ಹೀಗೆ ಹೇಳಿದ್ದು ಯಾರಿಗೆ?

By Suvarna NewsFirst Published Jul 9, 2021, 5:19 PM IST
Highlights

* ಸಚಿವ ಸಿಪಿ.ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಮತ್ತೆ ಕಿಡಿ
* ಯೋಗೇಶ್ವರ್‌ಗೆ ರೇಣುಕಾಚಾರ್ಯ  ವ್ಯಂಗ್ಯವಾಗಿ ತಿರುಗೇಟು 
* ಅವರು ನಮಗೆ ಜಗದ್ಗುರುಗಳಿದ್ದ ಹಾಗೇ ಎಂದ ರೇಣುಕಾಚಾರ್ಯ

ಬೆಂಗಳೂರು, (ಜುಲೈ.09): ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ, 7 ಮಿನಿಸ್ಟರ್ ಮನೆ ಪಡೆಯಲು ಮತ್ತು ಕಾರಿನಲ್ಲಿ ಒಡಾಡಲು ನನ್ನ ಕೊಡುಗೆಯಿದೆ ಎಂದು ಎಂದಿದ್ದ ಯೋಗೇಶ್ವರ್‌ಗೆ ರೇಣುಕಾಚಾರ್ಯ  ವ್ಯಂಗ್ಯವಾಗಿ ತಿರುಗೇಟು ಕೊಟ್ಟಿದ್ದಾರೆ. 

ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ,  ಅವರು ನಮಗೆ ಜಗದ್ಗುರುಗಳಿದ್ದ ಹಾಗೇ. ನಮ್ಮ ಕ್ಷೇತ್ರದ ಅಭಿವೃದ್ಧಿಯಾಗಿದೆ ಅಂದರೆ, ನಾನು ಶಾಸಕನಾಗಿದ್ದೇನೆ ಅಂದರೆ, ಹಿಂದೆ ಅಬಕಾರಿ ಸಚಿವನಾಗಿದ್ದೇನೆ ಅಂದ್ರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ ಅಂದ್ರೆ ಅದಕ್ಕೆಲ್ಲ ಆ ಜಗದ್ಗುರುಗಳೇ ಕಾರಣ. ಪಕ್ಷ ಕಟ್ಟುವಲ್ಲಿ ಅವರ ಪಾತ್ರ ಬಹಳಷ್ಟು ದೊಡ್ಡದಿದೆ. ಹೀಗಾಗಿ ಅವರು ತುಂಬಾ ದೊಡ್ಡವರು. ಅವರ ಆಶೀರ್ವಾದಿಂದ ನಾನು 7 ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದೇನೆ ಎಂದು ವ್ಯಂಗ್ಯವಾಡಿದರು.

'ನಾನು ಮಾತನಾಡಿದ್ರೆ ಎಚ್‌ಡಿಕೆ ಹಗಲು, ರಾತ್ರಿ ಡಿಕೆಶಿ ಸಿಎಂ ಮನೆಗೆ ಹೋಗ್ತಾರೆ' 

ಅವರ ಮೇಲೆ ಟೀಕೆ ಮಾಡಿದರೆ ಅವರ ಮೂರನೇ ದೃಷ್ಟಿ ನನ್ನ ಮೇಲೆ ಬಿಳುತ್ತದೆ. ಅವರ ಮೂರನೇ ಕಣ್ಣು ಬಿಟ್ಟರೆ ನಾನು ಭಸ್ಮವಾಗಿ ಬಿಡುತ್ತೇನೆ. ಅವರ ಆಶೀರ್ವಾದದಿಂದ ನಾನು ಕಾರಿನಲ್ಲಿ ಒಡಾಡುತ್ತಿದ್ದೇನೆ. ಅವರನ್ನು ನಾನು ಪರಮಾತ್ಮ ಸ್ಥಾನದಿಂದ ನೋಡುತ್ತಿದ್ದೇನೆ. ಹೀಗಾಗಿ ಅವರ ಕೆಂಗಣ್ಣಿಗೆ ಗುರಿಯಾಗಲು ನಾನು ಇಷ್ಟಪಡುವುದಿಲ್ಲ ಎಂದರು.

ಚುನಾವಣಾ ಬಂದಾಗ ರಾಜಕಾರಣ ಮಾಡುವುದು ಸಹಜ. ಆದರೆ ನಮ್ಮಲ್ಲಿ ನಾವೇ ಪ್ರತಿಪಕ್ಷಗಳಾಗಿಬಿಟ್ಟಿದ್ದೇವೆ. ಇದರ ಬಗ್ಗ ನನಗೆ ಸಾಕಷ್ಟು ನೋವಾಗಿದೆ. ಮುಂದೆ ಸಹಾ ಅವರ ಆಶೀರ್ವಾದ ನಮ್ಮ ಮೇಲೆ ಇರಲಿ. ಆದರೆ ಅವರಿಗೆ ಒಂದೇ ಒಂದು ಮಾತುಗಳನ್ನ ಹೇಳುತ್ತೇನೆ, ನಾವು ನಿಮ್ಮನ್ನ ಗುರುಗಳು ಅಂತ ಒಪ್ಪಿಕೊಳ್ಳುತ್ತೇನೆ ಆದರೆ ಚನ್ನಪಟ್ಟಣದಲ್ಲಿ ಯಾಕೆ ಜನ ತಿರಸ್ಕರಿಸಿದರು ಎಂದು ಅತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕುಟುಕಿದರು.

click me!