ಹೊನ್ನಾಳಿ ತಾ. ಯಕ್ಕನಹಳ್ಳಿ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ/ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಹಿನ್ನಲೆ/ ಕೇವಲ ಅದೆಲ್ಲಾ ಊಹಾಪೋಹಗಳು ಯಾರು ರಾಜೀನಾಮೆ ನೀಡೋದಿಲ್ಲ/ ಅಮಿತ್ ಶಾ, ಅರುಣ್ ಸಿಂಗ್ ರವರು ಈಗಾಗಲೇ ಮಾತನಾಡಿದ್ದಾರೆ/ ಎಲ್ಲಾ ಸಮಸ್ಯೆಗಳು ಬಗೆಹರಿಯಲಿದೆ
ದಾವಣಗೆರೆ(ಏ. 02) ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿಗೆ ಅರ್ಥವಿಲ್ಲ ಕೇವಲ ಅದೆಲ್ಲಾ ಊಹಾಪೋಹಗಳು ಯಾರು ರಾಜೀನಾಮೆ ನೀಡೋದಿಲ್ಲ ಎಂದು ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.
ಅಮಿತ್ ಶಾ, ಅರುಣ್ ಸಿಂಗ್ ರವರು ಈಗಾಗಲೇ ಮಾತನಾಡಿದ್ದಾರೆ. ಎಲ್ಲಾ ಸಮಸ್ಯೆಗಳು ಬಗೆಹರಿಯಲಿದೆ. ಹತ್ತರಂದು ರಾಜ್ಯ ಉಸ್ತುವಾರಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಲ್ಕು ಗೋಡೆಯ ಮಧ್ಯ ಕೂತು ಸಮಸ್ಯೆ ಬಗೆಹರಿಸಲಾಗುವುದು. ಈಗಾ ಏನಿದ್ರೂ, ಉಪಚುನಾವಣೆಯನ್ನು ಗೆಲ್ಲುವ ಕಡೆ ಒಟ್ಟಾಗಿ-ಒಂದಾಗಿ ನಾವೆಲ್ಲ ಹೋಗುತ್ತಿವೆ. ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
'ನೀವು ಸಿಎಂ ಆಗಿರಿ ಉಳಿದ ಎಲ್ಲ ಖಾತೆಯ ಜವಾಬ್ದಾರಿ ವಿಜಯೇಂದ್ರಗೆ ಕೊಡಿ'
ತಮ್ಮ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಯಡಿಯೂರಪ್ಪಮ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಚಿವ ಕೆಎಸ್ ಈಶ್ವರಪ್ಪ ಪತ್ರ ಬರೆದಿದ್ದರು. ರಾಜ್ಯಪಾಲರಿಗೂ ಪತ್ರ ಬರೆದಿದ್ದು ದೊಡ್ಡ ಸುದ್ದಿಗೆ ಕಾರಣವಾಗಿತ್ತು.
ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಬಿಜೆಪಿಯಲ್ಲಿ ಕಾಣಿಸಿಕೊಂಡ ಭಿನನ್ಮತ ಹಲವು ಪ್ರಶ್ನೆಗಳನ್ನು ಎತ್ತಿತ್ತು.