
ಬೆಂಗಳೂರು, (ಮೇ.30): RSS ನವರು ಭಾರತೀಯ ಮೂಲದವರಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರೆಲ್ಲ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ಮಾಡ್ತಿದ್ದಾರೆ.
ಆರ್ ಎಸ್ ಎಸ್ ಭಾರತೀಯರಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ನೀಡುವ ಮೂಲಕ ಕೋಟ್ಯಂತರ ಜನರ ಭಾವನೆಗೆ ದಕ್ಕೆ ತಂದಿದ್ದಾರೆ. ಸಿದ್ದರಾಮಯ್ಯನವರಿಗೆ RSS ಬಗ್ಗೆ ಸತ್ಯ ತಿಳಿದುಕೊಳ್ಳಬೇಕು ಅಂದ್ರೆ ಆರ್ ಎಸ್ ಎಸ್ ಶಾಖೆಗೆ ಬಂದು ತಿಳಿದಿಕೊಳ್ಳಲಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿಯ ಕುಡಚಿಯ ಶಾಸಕ ಪಿ ರಾಜೀವ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಶುರು ಮಾಡಿದ್ದು ಬ್ರಿಟಿಷ್ ಅಧಿಕಾರಿ ಎ ಓ ಹ್ಯೂಮ್ ಆರ್ ಎಸ್ ಎಸ್ ಹುಟ್ಟಿದ್ದು ಈ ಮಣ್ಣಿನಲ್ಲಿ ಸಿದ್ದರಾಮಯ್ಯ ನನ್ನ ಹೆಸರಲ್ಲೆ ರಾಮ ಇದ್ದಾನೆ ಅಂತ ಆಗಾಗ ಹೇಳುತ್ತಾರೆ ಆದರೆ ಅವರು ಅವಕಾಶಕ್ಕೆ ತಕ್ಕಂತೆ ಮಾತನಾಡುವ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದರು.
ನಾನು ಮಾತ್ರವಲ್ಲ, ನೀವೂ ದ್ರಾವಿಡರೇ: ಸಿಎಂ ಬೊಮ್ಮಾಯಿಗೆ ಸಿದ್ದು ತಿರುಗೇಟು
ಆಗ ವೀರಶೈವ ಲಿಂಗಾಯತ, ಈಗ ಆರ್ಯ ದ್ರಾವಿಡ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ವೀರಶೈವ, ಲಿಂಗಾಯತ ಅಂತ ಮಾಡಿ ಸಮಾಜ ಒಡೆಯೋಕೆ ಹೋಗಿ ಕೈ ಸುಟ್ಟು ಕೊಂಡಿದ್ದಿರಾ ಈಗ ಆರ್ಯ, ದ್ರಾವಿಡ ಅಂತ ಒಡೆದು ಮತ್ತೊಮ್ಮೆ ಕೈ ಸುಟ್ಟುಕೊಳ್ಳುತ್ತಿದ್ದಿರಾ ಎಂದು ಸಿದ್ದರಾಮಯ್ಯಗೆ ಮಾತಿಗೆ ತಿರುಗೇಟು ನೀಡಿದರು.
ಅಂಬೇಡ್ಕರ್‌ರವರ ಹೂ ಈಸ್ ಶೂದ್ರ ( who is shudra) ಪುಸ್ತಕವನ್ನ ಓದಬೇಕು, ಅಂಬೇಡ್ಕರ್ ಬರೆದಿರುವ ಪುಸ್ತಕದಲ್ಲಿ ಆರ್ಯ ದ್ರಾವಿಡ ಅಂತ ಬರೆದಿಲ್ಲ ಆರ್ ಎಸ್ ಎಸ್ ಶಾಖೆಯಲ್ಲಿ ಜಾತಿಯತೆ ನಡೆಯಲ್ಲ. ಮೆಕಾಲೆ ಶಿಕ್ಷಣ ಪದ್ದತಿ ದೇಶದ ಸಂಸ್ಕೃತಿಯನ್ನು ಹಾಳು ಮಾಡಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕುರ್ಚಿ ವ್ಯಾಮೋಹದಿಂದ ಒಡೆದು ಆಳುವ ಪ್ರಯತ್ನ ಮಾಡುತ್ತಿದ್ದಾರೆ, ಸಿದ್ದರಾಮಯ್ಯನವರು ಸಿಎಂ ಕುರ್ಚಿ ಆಸೆಯನ್ನು ಬಿಡಬೇಕು ವಯಸ್ಸಿನಲ್ಲಿ ನಾನು ಚಿಕ್ಕವನಾದ್ರೂ ಸಿದ್ದರಾಮಯ್ಯನವರಿಗೆ ಈ ಮಾತು ಹೇಳುತ್ತಿದ್ದೇನೆ ಎಂದರು...
ಆರ್.ಎಸ್.ಎಸ್ ಸಂಘಟನೆ ದೇಶ ದ್ರೋಹಿ ಸಂಘಟನೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ರಾಜೀವ್,ಉಗ್ರಗಾಮಿಗಳಿಗೆ ಪೊಲೀಸರು ಸಮಾಜ ರಕ್ಷಕರಾಗಿ ಕಾಣ್ತಾರಾ? ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು...
ಅಷ್ಟಕ್ಕೂ ಸಿದ್ದರಾಮಯ್ಯ ಹೇಳಿದ್ದೇನು?
ರೋಹಿತ್ ಚಕ್ರತೀರ್ಥ ಎನ್ನುವ ಒಬ್ಬನಿಗೆ ಮಕ್ಕಳ ಪಠ್ಯ ಪುಸ್ತಕ ರೂಪಿಸುವ ಜವಾಬ್ದಾರಿ ನೀಡಲಾಗಿದೆ. ಇದಕ್ಕಿಂತ ಮೂರ್ಖತನವನ್ನು ನಾನು ನೋಡಿಲ್ಲ. ಈತ ಹೆಡಗೇವಾರ್‌ಗಿಂತ ಒಂದು ಹೆಜ್ಜೆ ಮುಂದಿದ್ದಾನೆ. ಅಪ್ರತಿಮ ದೇಶಭಕ್ತ ಭಗತ್‌ಸಿಂಗ್ ಪಠ್ಯವನ್ನು ತೆಗೆದು ಹೆಡಗೇವಾರ್ ಭಾಷಣ ಹಾಕಿದ್ದಾನೆ. ಭಗತ್‌ಸಿಂಗ್ ಗಿಂತ ದೇಶಭಕ್ತ ಬೇಕಾ? ಇದನ್ನು ಯಾರಾದರೂ ಪ್ರಶ್ನಿಸಿದರೆ ದೇಶ ಬಿಟ್ಟು ಹೋಗಿ ಎನ್ನುತ್ತಾರೆ. ಯಾರು ದೇಶ ಬಿಟ್ಟು ಹೋಗಬೇಕಾದವರು?
ಆರ್‌ಎಸ್‌ಎಸ್ ಈ ದೇಶದ್ದಾ ? ಅವರೇನು ದ್ರಾವಿಡರಾ ? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ ? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು. ಈ ಬಗ್ಗೆ ನಾನು ಮಾತನಾಡುವುದಿಲ್ಲ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಚರಿತ್ರೆ ಗೊತ್ತಿಲ್ಲದವರು ಭವಿಷ್ಯ ರೂಪಿಸಲಾರರು” ಎಂದು ಹೇಳಿದ್ದರು. ಆರ್ ಎಸ್ ಎಸ್ ನವರಿಗೆ ನಿಜವಾದ ಚರಿತ್ರೆ ಮತ್ತು ಇತಿಹಾಸದ ಬಗ್ಗೆ ಬಹಳ ಭಯ ಇದೆ. ನಿಜವಾದ ಚರಿತ್ರೆ ದೇಶದ ದುಡಿಯುವ ವರ್ಗಗಳು, ಶ್ರಮಿಕರು ಮತ್ತು ದ್ರವೀಡರು ಅರಿತುಕೊಂಡರೆ ಏನಾಗಬಹುದು ಎನ್ನುವುದು ಅವರಿಗೆ ಗೊತ್ತಿದೆ. ಈ ಕಾರಣಕ್ಕೇ ಇತಿಹಾಸವನ್ನು ತಿರುಚುತ್ತಾರೆ. ಪಠ್ಯ ಪುಸ್ತಕಗಳ ಸಮಿತಿಗೆ ಚಕ್ರತೀರ್ಥನಂತವರನ್ನು ಹಾಕುವುದೇ ಈ ಉದ್ದೇಶಗಳಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.