ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಕೊರೋನಾ: ಇವರ ಜತೆ ಪ್ರಚಾರ ಮಾಡಿದ್ದ ಶಾಸಕಗೂ ಸೋಂಕು

By Suvarna News  |  First Published Apr 14, 2021, 9:11 PM IST

ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರ ಬೆನ್ನಲ್ಲೇ ಇವರ ಜೊತೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕರೊಬ್ಬರಿಗೆ ಸೋಂಕು ತಗುಲಿದೆ.


ಬೆಂಗಳೂರು, (ಏ.14): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ನರಸಿಂಹ ನಾಯಕ ರಾಜುಗೌಡ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಾಥಮಿಕ ವರದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಅಂತಹ ಗಂಭೀರ ಲಕ್ಷಣಗಳಿಲ್ಲ. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆದಷ್ಟು ಬೇಗ ಗುಣಮುಖನಾಗಿ ಜನ ಸೇವೆಗೆ ಮರಳುತ್ತೇನೆ. ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಆತಂಕಗೊಳ್ಳುವ ಅಗತ್ಯವಿಲ್ಲ. ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್‌ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

Tap to resize

Latest Videos

ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡರಿಗೆ ಕೊರೋನಾ: ಆತಂಕದಲ್ಲಿ ಬಿಜೆಪಿ ನಾಯಕರು..!

ಅಲ್ಲದೇ ತಾಲೂಕಿನ ದೇವತ್ಕಲ್‌ ಗ್ರಾಮದಲ್ಲಿ ಏ.17ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಗದಿಯಂತೆ ನಡೆಯಲಿದ್ದು, ಕಂದಾಯ ಸಚಿವ ಆರ್‌. ಅಶೋಕ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮಸ್ಕಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಗೌಡ ಪಾಟೀಲ್ ಅವರಿಗೆ ಕೊರೋನಾ ಸೊಂಕು ಕಾಣಿಸಿಕೊಂಡಿದ್ದು, ಇವರ ಜೊತೆ ರಾಜುಗೌಡ ಸಹ ಚುನಾವನೆ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

click me!