* ಮತ್ತೋರ್ವ ಬಿಜೆಪಿ ನಾಯಕನಿಂದ ಕೋವಿಡ್ ನಿಯಮ ಉಲ್ಲಂಘನೆ
* ಮುಚ್ಚಿದ್ದ ದೇವಸ್ಥಾನದ ಬಾಗಿಲು ತೆರೆಸಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಶಾಸಕ
* ಜಗಳೂರು ಬಿಜೆಪಿ ಶಾಸಕ ಎಸ್ ವಿ ರಾಮಚಂದ್ರಪ್ಪ ನಡೆಗೆ ಆಕ್ರೋಶ
ದಾವಣಗೆರೆ, (ಮೇ.25): ಒಂದೆಡೆ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಲಾಕ್ಡೌನ್ ಜಾರಿಗೊಳಿಸಿ ದೇವಸ್ಥಾನಗಳೂ ಸೇರಿದಂತೆ ಧಾರ್ಮಿಕ ಕ್ಷೇತ್ರಗಳ ಬಾಗಿಲು ಮುಚ್ಚಿಸಲಾಗಿದೆ. ಇತ್ತ ಜಗಳೂರು ಶಾಸಕ ಮುಚ್ಚಿದ್ದ ದೇವಸ್ಥಾನದ ಬಾಗಿಲು ತೆರೆಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹೌದು... ಜಗಳೂರು ಬಿಜೆಪಿ ಶಾಸಕ ಎಸ್ ವಿ ರಾಮಚಂದ್ರಪ್ಪ ಅವರು ಕುಟುಂಬ ಸಮೇತರಾಗಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮಾಡ್ರಳ್ಳಿ ಗ್ರಾಮದ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಅವರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು, ಶಾಸಕರ ನಡೆಗೆ ಜಗಳೂರು ಕ್ಷೇತ್ರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳ್ಳಿಗಳಲ್ಲಿ ಕೊರೋನಾ ಕಂಟ್ರೋಲ್‌ಗೆ ಮುಂದಾದ ಸಿಎಂ ಬಿಎಸ್‌ವೈ!
ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯವಾ..? ಲಾಕ್ಡೌನ್ನಲ್ಲಿ ದೇವಸ್ಥಾನಗಳು ಬಂದ್ ಇದ್ದರೂ ಪೂಜೆಗೆ ಅವಕಾಶ ನೀಡಿದ್ದು ಯಾರು..? ಎಂದು ಜನರು ಪ್ರಶ್ನಿಸಿದ್ದಾರೆ.
ಇನ್ನು ಕೊರೊನಾ ನಿಯಮ ಉಲ್ಲಂಘಿಸಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ. ವೈ ವಿಜಯೇಂದ್ರ ನಂಜನಗೂಡಿನಲ್ಲಿ ಪೂಜೆ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.