* ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ
*ಮತ್ತೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಜಾರಕಿಹೊಳಿ-ಯೋಗೇಶ್ವರ್
* ಯೋಗೇಶ್ವರ್ ಬೆನ್ನಲ್ಲೇ ದೆಹಲಿಗೆ ತೆರಳಿದ ರಮೇಶ್ ಜಾರಕಿಹೊಳಿ
ಬೆಂಗಳೂರು, (ಆ.09): ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಕೆಲವ ಶಾಸಕರು ಅಸಮಾಧಾನಗೊಂಡಿದ್ರೆ, ಇನ್ನು ಕೆಲವರು ಸಚಿವರಾಗಿದ್ರೂ ಸಹ ಖಾತೆ ಬಗ್ಗೆ ಬೇಸರಗೊಂಡಿದ್ದಾರೆ.
ಹೌದು....ಎಂಟಿಬಿ ನಾಗರಾಜ್ ಹಾಗೂ ಆನಂದ್ ಸಿಂಗ್ ಖಾತೆ ಬಗ್ಗೆ ಕ್ಯಾತೆ ತೆಗೆದಿದ್ರೆ, ಅತ್ತ ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಬಿಜೆಪಿ ಶಾಸಕರು ಹೈಕಮಾಂಡ್ ಭೇಟಿಗೆ ಹೋಗುತ್ತಿದ್ದಾರೆ. ಸಿ.ಪಿ ಯೋಗೇಶ್ವರ್ ಬೆನ್ನಲ್ಲೇ ಮತ್ತೊರ್ವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿದ್ದಾರೆ.
ಕಾಂಗ್ರೆಸ್ ನಾಯಕರ ಜೊತೆ ಶೆಟ್ಟರ್ ಗೌಪ್ಯ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಜೌದು... ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಮೌನವಾಗಿದ್ದ ರಮೇಶ್ ಜಾರಕಿಹೊಳಿ ಮತ್ತೆ ಸಕ್ರಿಯರಾಗಿದ್ದು, ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ತಮ್ಮ ಕುಟುಂಬದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿರುವುದಕ್ಕೆ ಅಸಮಾಧಾನಗೊಂಡಿದ್ದಾರೆ. ಈ ಕುರಿತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚಿಸಲು ದೆಹಲಿಗೆ ತೆರಳಿರುವುದು ಮತ್ತೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
ಬೆಳಗಾವಿ ಮೂಲಕ ದೆಹಲಿಗೆ ರಮೇಶ್ ಜಾರಕಿಹೊಳಿ ದೆಹಲಿ ತಲುಪಿದ್ದು ಖಾಸಗಿ ಹೋಟೆಲ್ ನಲ್ಲಿ ಉಳಿದುಕೊಂಡಿದ್ದು, ಯೋಗೇಶ್ವರ್ ಮತ್ತು ಜಾರಕಿಹೊಳಿ ಒಟ್ಟಾಗಿ ವರಿಷ್ಠರ ಭೇಟಿಗೆ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರ ರಚನೆಯಲ್ಲಿ ಈ ಇಬ್ಬರೂ ನಾಯಕರು ಮಹತ್ವದ ಪಾತ್ರ ನಿರ್ವಹಿಸಿದ್ದರು ಎಂದು ಹೇಳಲಾಗಿತ್ತು. ಸದ್ಯ ಇಬ್ಬರೂ ನಾಯಕರು ಸಂಪುಟದಲ್ಲಿಲ್ಲ.. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಯೋಗೇಶ್ವರ್ ದೆಹಲಿ ಭೇಟಿ ಭಾರೀ ಕುತೂಹಲ ಮೂಡಿಸಿದೆ.