Ramesh Jarkiholi V/S Siddu: ಎಲ್ಲರ ಹುಬ್ಬೇರುವಂತೆ ಮಾಡಿದ ಜಾರಕಿಹೊಳಿ ಮಾತುಗಳು

Published : Dec 06, 2021, 05:04 PM IST
Ramesh Jarkiholi V/S Siddu: ಎಲ್ಲರ ಹುಬ್ಬೇರುವಂತೆ ಮಾಡಿದ ಜಾರಕಿಹೊಳಿ ಮಾತುಗಳು

ಸಾರಾಂಶ

* ಸಿದ್ದರಾಮಯ್ಯ ಪರ ರಮೇಶ್ ಜಾರಕಿಹೊಳಿ ಅಚ್ಚರಿಕೆ ಹೇಳಿಕೆ * ಎಲ್ಲರ ಹುಬ್ಬೇರುವಂತೆ ಮಾಡಿದ ಜಾರಕಿಹೊಳಿ ಮಾತು * ಸಿದ್ದರಾಮಯ್ಯನವರೇ ನಮ್ಮ ನಾಯಕ ಎಂದ ಸಾಹುಕಾರ

ಚಿಕ್ಕೋಡಿ, (ಡಿ.6): ಸಿದ್ದರಾಮಯ್ಯ ಅವರು ನಿನ್ನೆ(ಡಿ.05) ಬೆಳಗಾವಿ ವಿಧಾನಪರಿಷತ್ (Belagavi MLC Election) ಪ್ರಚಾರ ಸಭೆಗಳಲ್ಲಿ ರಮೇಶ್ ಜಾರಕಿಹೊಳಿ (Ramesh Jarkiholiವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಆದ್ರೆ, ಇದೀಗ ಅದಕ್ಕೆ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ(Siddaramaiah) ಈಗಲೂ ನಮ್ಮ ನಾಯಕರೇ ಎಂದು ಅಚ್ಚರಿ ಹೇಳಿಕೆ ನೀಡಿದರು. ಇದು ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದೆ.

ಹೌದು...ಒಬ್ರು ತಮ್ಮ ವಿರುದ್ಧ ಟೀಕೆ ಮಾಡಿದ್ರೆ, ಅವರಿಗೆ ತಿರುಗೇಟು ಕೊಡುವುದು ಸಹಜ. ಆದ್ರೆ, ರಮೇಶ್ ಜಾರಕಿಹೊಳಿ ಬೈಯಿಸಿಕೊಂಡ್ರು, ಸಿದ್ದರಾಮಯ್ಯನವರೇ ನಮ್ಮ ನಾಯಕ ಎಂದು ಹೇಳಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

Council Election Karnataka : ಬೆಳಗಾವಿ ಮತ್ತೊಂದು ಸುತ್ತಿನ ರಾಜಕೀಯ ಜಿದ್ದಾಜಿದ್ದಿನ ಸಮರಕ್ಕೆ ಸಜ್ಜು

ರಾಯಬಾಗ ಪಟ್ಟಣದಲ್ಲಿ ಪರಿಷತ್ ಪ್ರಚಾರದ ಸಭೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ,  ಸಿದ್ದರಾಮಯ್ಯನವರು ನನ್ನ ಗುರು, ಈಗಲೂ ಗುರುಗಳೇ. ಆದರೆ ಈಗ ಅವರು ಸುಳ್ಳು ಹೇಳುವುದನ್ನು ಕಲಿಯುತ್ತಿದ್ದಾರೆ. ಅವರನ್ನು ಬಹಳ ಬಹಳ ಟೀಕಿಸಲಾರೆ. ಸಿದ್ದರಾಮಯ್ಯ ಅವರು ನಮ್ಮ ಬಗ್ಗೆ ಮಾತನಾಡಿದ್ದು ಅದಕ್ಕೆ ಉತ್ತರ ಕೊಡಲು ಬಂದಿದ್ದೆ, ಆದರೆ ಅವರು ನನ್ನ ಗುರು. ಮನೆಯಲ್ಲಿ ಬಹಳ ಮಾತನಾಡಬೇಡಿ ಎಂದಾಗ ನಾನು ಟೀಕಿಸಲು ಹೋಗಲ್ಲ. ಮೊದಲಿನ ಸಿದ್ದರಾಮಯ್ಯ ನೇರ ನಿಷ್ಠುರ ಹಾಗೂ ಮಾತನಾಡಿದರೆ ಹೆದರುವಂತೆ ಇತ್ತು. ಈಗಿನ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಅದು ಬದಲಾಗಬೇಕಿದೆ ಎಂದು ಮಾರ್ಮಿಕವಾಗಿ ನುಡಿದರು.

ನಾನು ಕೋಲ್ಹಾಪೂರ ಮಹಾಲಕ್ಷ್ಮಿ ದೇವಿಯ ಮೇಲೆ ಆಣೆ ಮಾಡಿ ಹೇಳ್ತೀನಿ. ವಿವೇಕರಾವ್ ಪಾಟೀಲ್ ಕಾಂಗ್ರೆಸ್ ಪಕ್ಷದ ಸದಸ್ಯರು. ಕಳೆದ ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ವಿವೇಕರಾವ್ ಪಾಟೀಲ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೂಡುವಂತೆ ಕೇಳಿಕೊಂಡಿದ್ದೆ. ಆದರೆ ವೀರಕುಮಾರ್ ಪಾಟೀಲ್ ಅವರಿಗೆ ಟಿಕೆಟ್ ನೀಡಿದರು.

ವಿವೇಕರಾವ್ ಪಾಟೀಲ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಬಂದರು. ನಂತರ ಸಿದ್ದರಾಮಯ್ಯನವರು ವಿವೇಕರಾವ್ ಪಾಟೀಲ್ ಗೆ ನಮ್ಮ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುವಂತೆ ನನ್ನ ಬಳಿ ಹೇಳಿದ್ದರು. ಆದರೆ ವಿವೇಕರಾವ್ ಪಾಟೀಲ್‍ಗೂ ಕಾಂಗ್ರೆಸ್‍ಗೂ ಸಂಬಂಧವಿಲ್ಲ ಅಂತ ಸುಳ್ಳು ಹೇಳುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಹೇಳಿದ್ದೇನು?
ಕಾಂಗ್ರೆಸ್‌ನಿಂದ ಕುರುಬರಿಗೆ ಮೂರು ಜನರಿಗೆ ಟಿಕೆಟ್ ಕೊಟ್ಟಿದ್ದೇವೆ. ನೀವು ಎಷ್ಟು ಜನರಿಗೆ ಟಿಕೆಟ್ ಕೊಟ್ಟಿದ್ದೀರಿ, ನೀವು ಆಡಿದ್ದೇ ಆಟ ಅಂದುಕೊಂಡಿದ್ದೀರಾ ರಮೇಶ್ ಜಾರಕಿಹೊಳಿ‌. ರಾಜಕೀಯ ಅಂದ ಮೇಲೆ ಸಿದ್ದಾಂತದ ಮೇಲೆ ಮಾಡುವುದು. ಸ್ವಾರ್ಥಕ್ಕಾಗಿ, ಹೆದರಿಸಿ, ಬೆದರಿಸಿ ರಾಜಕಾರಣ ಮಾಡುವುದಲ್ಲ ಸರಿಯಲ್ಲ ಎಂದು ವಾಗ್ವಾಳಿ ನಡೆಸಿದ್ದರು.

ವಿವೇಕರಾವ್ ಪಾಟೀಲ್‌ಗೆ ಸಿದ್ದರಾಮಯ್ಯ ಟಿಕೆಟ್ ಕೊಡದೇ ಮೋಸ ಮಾಡಿದ್ರು ಅಂತಾ ರಮೇಶ್ ಜಾರಕಿಹೊಳಿ‌ ಹೇಳ್ತಿದ್ದಾರೆ. ನಮ್ಮ ಅಭ್ಯರ್ಥಿ ವಿರುದ್ಧ ವಿವೇಕರಾವ್ ಪಾಟೀಲ್ ನನ್ನ ನಿಲ್ಲಿಸಿ ಗೆಲ್ಲಿಸಿದ್ರು. ಗೆದ್ದ ಬಳಿಕ ವಿವೇಕರಾವ್ ಪಾಟೀಲ್ ನಮ್ಮ ಪಕ್ಷಕ್ಕೆ ಬರಲಿಲ್ಲ. ಪಕ್ಷಕ್ಕೆ ಬರದೇ ಇರುವವರಿಗೆ ಟಿಕೆಟ್ ಕೊಡಬೇಕಾ. ವಿವೇಕರಾವ್ ಪಾಟೀಲ್ ಅವರು ರಮೇಶ್ ಜಾರಕಿಹೊಳಿ‌ ಪಾಲೋವರ್. ನಿಮಗೆ ಅಷ್ಟೊಂದು ಪ್ರೀತಿ ಇದ್ದಿದ್ರೇ ತಮ್ಮನ ಬದಲು ವಿವೇಕರಾವ್ ಪಾಟೀಲ್‌ನನ್ನೇ ನಿಲ್ಲಿಸಬೇಕಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಬೆಳಗಾವಿಯಲ್ಲಿ ರಾಜಕೀಯ ಜಿದ್ದಾಜಿದ್ದಿ
 
 ಗಡಿ ಜಿಲ್ಲೆ ಬೆಳಗಾವಿ ಮತ್ತೊಂದು ಸುತ್ತಿನ ರಾಜಕೀಯ (Politics) ಜಿದ್ದಾಜಿದ್ದಿನ ಸಮರಕ್ಕೆ ಸಜ್ಜಾಗುತ್ತಿದೆ. ದ್ವಿ ಸದಸ್ಯ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ (BJP), ಕಾಂಗ್ರೆಸ್ (Congress) ಮತ್ತು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ (Lakhan Jarkiholi) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಬಿಜೆಪಿಯ  ಮಹಾಂತೇಶ ಕವಟಗಿಮಠ, ಕಾಂಗ್ರೆಸ್‌ನ ಚನ್ನ ರಾಜ್ ಹಟ್ಟಿಹೊಳಿ, ಎಎಪಿಯ ಶಂಕರ ಹೆಗಡೆ, ಪಕ್ಷೇತರ ಅಭ್ಯರ್ಥಿಗಳಾದ ಲಖನ್ ಜಾರಕಿಹೊಳಿ, ಕಲ್ಮೇಶ ಗಾಣಗಿ ಮತ್ತು ಶಂಕರ ಕುಡ ಸೋಮಣ್ಣವರ ಅಂತಿಮವಾಗಿ ಚುನಾವಣಾ ಕಣದಲ್ಲಿದ್ದಾರೆ. ಎರಡು ಸ್ಥಾನಗಳಿದ್ದರೂ ಕೈ, ಬಿಜೆಪಿ ತಲಾ ಒಂದೇ ಸ್ಥಾನಕ್ಕೆ ಸ್ಪರ್ಧಿಸಿವೆ. ಇನ್ನು ಬಿಜೆಪಿಯಿಂದ ಟಿಕೆಟ್ ಸಿಗದ್ದಕ್ಕೆ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ರಾಗಿ ಸ್ಪರ್ಧಿಸಿರುವುದರಿಂದ ಎರಡೂ ಪಕ್ಷಗಳಿಗೆ ಮತ ವಿಭಜನೆ ಆತಂಕವೂ ಎದುರಾಗಿದೆ. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೇಲೆ ಪ್ರಬಲ ಹಿಡಿತ ಹೊಂದಿರುವ ಜಾರಕಿಹೊಳಿ ಸಹೋದರರು ಇಲ್ಲಿ ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸನ್ನೂ ಹೊಂದಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ