
ಬೆಂಗಳೂರು, ]ಫೆ.11]: ಆಪರೇಷನ್ ಕಮಲದ ಆಡಿಯೋ ಬಿಡುಗಡೆ ಮಾಡಿದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಸಿಡಿ ಅಸ್ತ್ರ ಪ್ರಯೋಗಿಸಿದೆ.
ಆಪರೇಷನ್ ಕಮಲದ್ದು ಎನ್ನಲಾದ ಆಡಿಯೋ ಬಿಡುಗಡೆ ಮಾಡಿ ರಾಜ್ಯರಾಜಕಾರಣದಲ್ಲಿ ಕೋಲಾಹಲ ಹುಟ್ಟಿಸಿದ ಬೆನ್ನಲ್ಲೇ ಬಿಜೆಪಿ, ಕುಮಾರಸ್ವಾಮಿ ಅವರ ಸಿಡಿ ಅಸ್ತ್ರ ಪ್ರಯೋಗಿಸಿದೆ.
ದೇವರ ಹೆಸರಲ್ಲಿ ಯಡಿಯೂರಪ್ಪ ದೇವದುರ್ಗ ಭೇಟಿ ರಹಸ್ಯ ಬಯಲು
2014 ರಲ್ಲಿ ಕುಮಾರಸ್ವಾಮಿ ಅವರು ವಿಜಯಪುರದ ಅಂದಿನ ಜೆಡಿಎಸ್ ಮುಖಂಡ[ಈಗ ಬಿಜೆಪಿನಲ್ಲಿದ್ದಾರೆ] ವಿಜುಗೌಡ ಅವರನ್ನು ವಿಧಾನಪರಿಷತ್ ಸದಸ್ಯ ಮಾಡುವುದಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಸಿ.ಡಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಈ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಖಾಚಾರ್ಯ ಇಂದು ಸದನದಲ್ಲಿ ಸಿ.ಡಿಯನ್ನು ಪ್ರದರ್ಶಿಸಿ, ಇದು 40 ಕೋಟಿ ರೂಪಾಯಿಯ ಸಿ.ಡಿ ಇದರ ಬಗ್ಗೆಯೂ ಚರ್ಚೆಯಾಗಲಿ ಎಂದು ಆಗ್ರಹಿಸಿದರು. ಬಳಿಕ ಸಿ.ಡಿಯನ್ನ ಸ್ಪೀಕರ್ ರಮೇಶ್ ಕುಮಾರ್ಗೆ ಹಸ್ತಾಂತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.