ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಹೆಚ್ಚಿನ ಸೀಟುಗಳನ್ನು ಗೆಲ್ಲುವ ಕನಸ್ಸನ್ನು ಕಾಣುತ್ತಿದ್ದಾರೆ: ಶಿವನಗೌಡ ನಾಯಕ
ರಾಯಚೂರು(ಅ.09): ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೂರು ಸೀಟುಗಳನ್ನು ಗೆದ್ದರೆ ತಾವು ಅರ್ಧ ಮೀಸೆ ಬೋಳಿಸಿಕೊಳ್ಳುವುದಾಗಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಹೇಳಿದ್ದಾರೆ
ಇದೇ ಅ.11 ರಂದು ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಹೆಚ್ಚಿನ ಸೀಟುಗಳನ್ನು ಗೆಲ್ಲುವ ಕನಸ್ಸನ್ನು ಕಾಣುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 40, ಜೆಡಿಎಸ್ 20 ಸ್ಥಾನಗಳನ್ನು ದಾಟುವುದಿಲ್ಲ, ಟಿವಿ ಸರ್ವೇನಂತೆ ನಾವೇ ಕೆಲ್ಲುತ್ತೇವೆ ಎಂದು ಕಾಂಗ್ರೆಸ್ ಭ್ರಮೆಯಲ್ಲಿದ್ದಾರೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಣವನ್ನು ಜೋಡಿಸಿಕೊಳ್ಳುವುದಕ್ಕಾಗಿಯೇ ತೆಲಂಗಾಣಕ್ಕೆ ಹೋಗಿಬಂದಿದ್ದಾರೆ. ಅವರ ಹಾಗೂ ಕಾಂಗ್ರೆಸ್‌ನ ಗಿಮಿಕ್‌ಗಳು ನಡೆಯುವುದಿಲ್ಲ ಎಂದರು.
undefined
ನೀರು ಬಂದಿಲ್ಲಂದ್ರೆ ಪುರಸಭೆ ಅಧ್ಯಕ್ಷಗೆ ಹೊಡೀರಿ ಎಂದ ಕಾಂಗ್ರೆಸ್ ಶಾಸಕ ಡಿ.ಎಸ್.ಹೊಲಗೇರಿ!
ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸುವುದಕ್ಕಾಗಿ ವಿಜಯ ಸಂಕಲ್ಪ ಯಾತ್ರೆಯನ್ನು ಕೈಗೊಂಡು ಎಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಪ್ರತಿಯೊಬ್ಬ ಕಾರ್ಯಕರ್ತರು ಶ್ರಮವಹಿಸಿ ಯಾತ್ರೆ ಯಶಸ್ವಿಗೆ ಸಹಕರಿಸಬೇಕು, ಮುಂದೆಯೇ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಬಿಜೆಪಿ ವಿಯ ಸಂಕಲ್ಪ ಯಾತ್ರೆಯು ಜಿಲ್ಲೆಯಿಂದಲೆಯೇ ಆರಂಭವಾಗುತ್ತಿದ್ದು, ವಾಲ್ಮೀಕಿ ಸೇರಿದಂತೆ ಎಲ್ಲ ಸಮಾಜದವರು ಪರಿಶ್ರಮ ಪಟ್ಟು ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್,ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಜಿಲ್ಲಾಧ್ಯಕ್ಷ ರಮಾನಂದ ಯಾದವ್ ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು,ಕಾರ್ಯಕರ್ತರು, ಮುಖಂಡರು ಇದ್ದರು.