ಸಂಪುಟ ಕಸರತ್ತು ಮಧ್ಯೆಯೇ ಶಾಸಕ ಎಸ್.ಆರ್.ವಿಶ್ವನಾಥ್‌ಗೆ ಮಹತ್ವದ ಹುದ್ದೆ

Published : Nov 24, 2020, 07:24 PM ISTUpdated : Nov 24, 2020, 07:29 PM IST
ಸಂಪುಟ ಕಸರತ್ತು ಮಧ್ಯೆಯೇ ಶಾಸಕ ಎಸ್.ಆರ್.ವಿಶ್ವನಾಥ್‌ಗೆ ಮಹತ್ವದ ಹುದ್ದೆ

ಸಾರಾಂಶ

ಯಲಹಂಕ ಕ್ಷೇತ್ರದ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಅವರಿಗೆ ಮತ್ತೊಂದು ಮಹತ್ವದ ಹುದ್ದೆ ನೀಡಲಾಗಿದೆ.

ಬೆಂಗಳೂರು, (ನ.24): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1976 ಕಲಂ 3(4)ರ ಅಡಿ ಈ ನೇಮಕ ಮಾಡಲಾಗಿದೆ. ಅಧ್ಯಕ್ಷರಾಗಿದ್ದ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ, ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.

BJP ಸಭೆಯಲ್ಲಿ ಕಾಂಗ್ರೆಸ್ ನಾಯಕ, ಚಂಡಮಾರುತ ಭೀತಿಯಲ್ಲಿ ಕರ್ನಾಟಕ; ನ.24ರ ಟಾಪ್ 10 ಸುದ್ದಿ!

ಯಲಹಂಕ ಕ್ಷೇತ್ರದ ಶಾಸಕರಾಗಿರುವ  ಎಸ್.ಆರ್.ವಿಶ್ವನಾಥ್ ಅವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಆಗಿದ್ದು, ಇದೀಗ ಬಿಡಿಎ ಅಧ್ಯಕ್ಷರಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ ಅವರಿಗೆ ಸಂಪುಟ ವಿಸ್ತರಣೆಗೂ ಮುನ್ನವೇ ಬಿಡಿಎ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಮಧಾನ ಮಾಡುವ ಯತ್ನ ಇದಾಗಿದೆ ಎನ್ನಲಾಗಿದೆ.

ಯಲಹಂಕ ಕ್ಷೇತ್ರದ ಶಾಸಕನಾಗಿರುವ ನನ್ನನ್ನು ಅಧಿಕೃತವಾಗಿ ಇಂದು "ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ" ಕ್ಕೆ ಅಧ್ಯಕ್ಷರನ್ನಾಗಿ ( Chairman, BDA )...

Posted by SR Vishwanath on Tuesday, November 24, 2020

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ - ನವದಂಪತಿಗಳಿಗೆ ಸಿಎಂ ಸಲಹೆ
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!