ಸಿಎಂ ರಾಜಕೀಯ ಕಾರ್ಯದರ್ಶಿಗೆ ಕೊರೋನಾ: ಬಿಎಸ್‌ವೈ ಸೇರಿದಂತೆ ಹಲವು ಸಚಿವರಿಗೆ ಆತಂಕ

By Suvarna News  |  First Published Sep 11, 2020, 2:18 PM IST

ಸಿಎಂ ರಾಜಕೀಯ ಕಾರ್ಯದರ್ಶಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿ ಇತರೆ ಸವರಿಗೆ ಆತಂಕ ಶುರುವಾಗಿದೆ.


ಬೆಂಗಳೂರು, ಸೆ.11) : ಬೆಂಗಳೂರಿನ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್‌ಗೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ.

 ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿದ್ದು ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.

Tap to resize

Latest Videos

ಸಿಎಂ ಲಂಚ್‌ ಮೀಟಿಂಗ್: ಹೋಟೆಲ್‌ನಲ್ಲಿ ಆಪ್ತರ ಜತೆ ಬಿಎಸ್‌ವೈ ಮಹತ್ವದ ಚರ್ಚೆ

ಸಿಎಂ ಸೇರಿ ಹಲವರಿಗೆ ಆತಂಕ

ಹೌದು.. ವಿಶ್ವನಾಥ್ ಅವರಿಗೆ ಕೊರೋನಾ ಸೋಂಕು ತಗುಲಿರುವುದರಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವರಾದ ಆರ್. ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಇತರೆ ನಾಯಕರುಗಳಿಗೆ ಕೊರೋನಾ ಆತಂಕ ಶುರುವಾಗಿದೆ.

ಯಾಕಂದ್ರೆ ಮೊನ್ನೇ ಅಷ್ಟೇ ವಿಶ್ವನಾಥ್ ಅವರು ಬೆಂಗಳೂರಿನ ಜಯನಗರದ ಮಯ್ಯಾಸ್ ಹೋಟೆಲ್‌ ಹೋಗಿ ಸಿಎಂ ಬಿಎಸ್‌ವೈ ಸೇರಿದಂತೆ ಇತರೆ ಸಚಿವರಗಳ ಜತೆ ಭೋಜನ ಮಾಡಿದ್ದರು.
 

click me!