
ಬೆಂಗಳೂರು, (ಫೆ.02): ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸಂಪುಟಕ್ಕೆ ಸೇರ್ಪಡೆಗೂ ಮುನ್ನವೇ ಆಹ್ವಾನ ಪತ್ರಿಕೆಯಲ್ಲಿ ಸಚಿವರಾಗಿ ಮಿಂಚುತ್ತಿದ್ದಾರೆ.
ವೀರಶೈವ-ಲಿಂಗಾಯತ ಯುವಕ ಸೇವಾ ಟ್ರಸ್ಟ್ ಇಂದು (ಭಾನುವಾರ) ಕೆಂಗೇರಿ ಉಪಚನಗರದ ಕೊಮ್ಮಘಟ್ಟ ಬಳಿ ಡಾ. ಶಿವಕುಮಾರ್ ಸ್ವಾಮೀಜಿ ಅವರ 1ನೇ ವರ್ಷದ ಪುಣ್ಯತಿಥಿ ಸಮಾರಂಭವನ್ನು ಹಮ್ಮಿಕೊಂಡಿದೆ.
10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!
ಈ ಸಮಾರಂಭದಲ್ಲಿ ಬಿ.ವೈ. ವಿಜಯೇಂದ್ರ ಮುಖ್ಯ ಅತಿಥಿಗಳಾಗಿದ್ದಾರೆ. ಆದ್ರೆ, ಟ್ರಸ್ಟ್‌ನವರು ಆಹ್ವಾನ ಪತ್ರಿಕೆಯಲ್ಲಿ ಎಸ್.ಟಿ.ಸೋಮಶೇಖರ್ ಅವರ ಹೆಸರ ಮುಂದೆ ಸಚಿವರು, ಕರ್ನಾಟಕ ಸರ್ಕಾರ ಎಂದು ನಮೂದಿಸಿದ್ದಾರೆ.
ಈ ಮೂಲಕ ರಾಜ್ಯ ಸಚಿವ ಸಂಪುಟ ಸೇರ್ಪಡೆಗೂ ಮುನ್ನವೇ ಆಹ್ವಾನ ಪತ್ರಿಕೆಯಲ್ಲಿ ಸೋಮಶೇಖರ್ ಸಚಿವರಾಗಿದ್ದಾರೆ. ನೂತನ 10 ಶಾಸಕರು ಹಾಗೂ 2 ಮೂಲ ಬಿಜೆಪಿ ಶಾಸಕರುಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ.
ಆದ್ರೆ, ಯಾರಿಗೆಲ್ಲ ಸಚಿವ ಸ್ಥಾನ ಸಿಗುತ್ತೆ ಎನ್ನುವುದು ಮಾತ್ರ ಹೇಳಿಲ್ಲ. ಈ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ದಿನವಾದ ಗುರುವಾರವೇ ತಿಳಿಯಲಿದೆ.
ಫೆಬ್ರವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ವಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.