ಕಾಂಗ್ರೆಸ್ ಔತಣಕೂಟದಲ್ಲಿ ಬಿಜೆಪಿ ಶಾಸಕರು! ಬಿಜೆಪಿ ನಾಯಕರಲ್ಲೇ ಭಿನ್ನಾಭಿಪ್ರಾಯ!

By Kannadaprabha News  |  First Published Dec 15, 2023, 7:05 AM IST

ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬೆನ್ನಲ್ಲೇ ಆಯೋಜಿಸಲಾಗಿದ್ದ ಆ ಪಕ್ಷದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಿದ್ದರ ಬಗ್ಗೆ ಬಿಜೆಪಿ ನಾಯಕರಲ್ಲೇ ಭಿನ್ನ ಅಭಿಪ್ರಾಯ ಹೊರಬಿದ್ದಿದೆ.


ಸುವರ್ಣಸೌಧ (ಡಿ.15): ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬೆನ್ನಲ್ಲೇ ಆಯೋಜಿಸಲಾಗಿದ್ದ ಆ ಪಕ್ಷದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಿದ್ದರ ಬಗ್ಗೆ ಬಿಜೆಪಿ ನಾಯಕರಲ್ಲೇ ಭಿನ್ನ ಅಭಿಪ್ರಾಯ ಹೊರಬಿದ್ದಿದೆ.

ಪಕ್ಷದ ಶಾಸಕರಾದ ಎಸ್.ಟಿ.ಸೋಮಶೇಖರ್ ಸೇರಿದಂತೆ ಇತರರು ಯಾವುದೇ ರೀತಿಯ ಶಿಸ್ತು ಉಲ್ಲಂಘನೆ ಮಾಡಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದರೆ, ಇದೊಂದು ಗಂಭೀರ ವಿಷಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Tap to resize

Latest Videos

ಚೂರು ವ್ಯತ್ಯಾಸವಾದರೂ ಡ್ಯಾಂ ಕೀಲಿ ಕೈ ಕೇಂದ್ರದ ಕೈಗೆ: ಅದನ್ನೆಲ್ಲ ಬಹಿರಂಗ ಹೇಳಬೇಡಪ್ಪ ಎಂದು ಡಿಕೆಶಿ ಬಾಯ್ಮುಚ್ಚಿಸಿದ ಸಿಎಂ

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ನಾಯಕರು ಊಟಕ್ಕೆ ಕರೆದಿದ್ದರು. ಅದಕ್ಕಾಗಿ ಹೋಗಿದ್ದೆವು ಎಂದು ಹೇಳಿದ್ದಾರೆ. ಆ ದೃಷ್ಟಿಯಿಂದ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಲು ಸಾಧ್ಯ ವಿಲ್ಲ, ಅವರು ಬುಧವಾರದ ಬಿಜೆಪಿಯ ಧರಣಿಯಲ್ಲೂ  ಕೂಡ ಭಾಗವಹಿಸಿದ್ದರು. ನಮ್ಮ ಸಭೆಗಳಿಗೂ ಬಂದಿದ್ದರು.

ಕಳೆದ ಮೂರು ತಿಂಗಳಿನಿಂದ ಇಂತಹ ಘಟನೆಗಳು ನಡೆಯುತ್ತಿವೆ. ಏನೇ ಇದ್ದರೂ ಮತ್ತೊಮ್ಮೆ ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಇನ್ನು ವಿಜಯೇಂದ್ರ ಮಾತನಾಡಿ, ಶಾಸಕರು ಭೋಜನ ಕೂಟಕ್ಕೆ ಹೋಗಿರುವ  ಮಾಹಿತಿ ತಿಳಿಯಿತು. ಇದು ಗಂಭೀರ ವಿಷಯ. ಈ ಬಗ್ಗೆ ಅವರ ಜೊತೆ ಚರ್ಚಿಸುವೆ ಎಂದರು.

ಕಾಂಗ್ರೆಸ್ ಶಾಸಕಾಂಗ ಸಭೆಗೆ ಹೋಗಿಲ್ಲ, ಊಟಕ್ಕೆ ಹೋಗಿದ್ದೆ: ಸೋಮಶೇಖರ್

ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆದ ಔತಣಕೂಟಕ್ಕೆ ಮಾತ್ರ ಹೋಗಿದ್ದೇನೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ.ಸೋಮಶೇಖ‌ರ್ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಬಿಜೆಪಿ ಭದ್ರಕೋಟೆಯಾಗಲಿ : ಬಿ.ವೈ.ವಿಜಯೇಂದ್ರ ಕರೆ

ಈ ನಡುವೆ ಔತಣಕೂಟದಲ್ಲಿ ಭಾಗಿಯಾಗಿದ್ದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾ‌ರ್ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, 'ನಿನ್ನೆ ರಾತ್ರಿ 8ರಿಂದ 10ಗಂಟೆವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆಗಿದ್ದೆ. ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದೆ. ಶಿವಕುಮಾರ್ ಕೂಡ ನನಗೆ ಊಟಕ್ಕೆ ಆಹ್ವಾನ ಕೊಟ್ಟಿದ್ದರು. ಹಾಗಾಗಿ ರಾತ್ರಿ 11ಕ್ಕೆಹೋಗಿ ಸುಭ ಕೋರಿ ಬಂದೆ' ಎಂದರು. 'ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ. ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡವಿದೆ. ಬಿಜೆಪಿಗೆ ಯಾವುದೇ ತರಹದ ಮುಜುಗುರವಾಗುವ ಕೆಲಸ ನಾನು ಮಾಡಲ್ಲ ಎಂದರು.

click me!