ಘರ್‌ ವಾಪಸಿ: ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ, ಸಚಿವ ಪ್ರಿಯಾಂಕ್‌ ಖರ್ಗೆ

By Kannadaprabha News  |  First Published Aug 20, 2023, 2:30 AM IST

ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಯಾವುದೇ ಕಂಡಿಷನ್‌ ಇಲ್ಲದೆ ಕಾಂಗ್ರೆಸ್‌ಗೆ ಬಂದರೆ ಅವರಿಗೆ ಸ್ವಾಗತ ಕೋರಲಾಗುವುದು. ನಾವು ಆಪರೇಷನ್‌ ಹಸ್ತ ಮಾಡಲು ಹೊರಟಿಲ್ಲ. ಬಿಜೆಪಿ, ಜೆಡಿಎಸ್‌ ಒಡೆಯುವುದು ನಮ್ಮ ಉದ್ದೇಶವಲ್ಲ. ಯಾರ ಅಸ್ತಿತ್ವ ಏನು ಎನ್ನುವುದನ್ನು ಜನರೇ ತೋರಿಸಿದ್ದಾರೆ ಎಂದು ತಿಳಿಸಿದ ಪ್ರಿಯಾಂಕ್‌ ಖರ್ಗೆ 


ಬೆಂಗಳೂರು(ಆ.20): ಹೈದರಾಬಾದ್‌ ಕರ್ನಾಟಕದಲ್ಲಿನ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲು ಸಿದ್ಧರಾಗಿದ್ದು, ಅವರೆಲ್ಲರೂ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಘರ್‌ ವಾಪಸಿ ಮಾಡಲು ಹೋದರೆ ಬಿಜೆಪಿ ಮತ್ತು ಜೆಡಿಎಸ್‌ನ ಅರ್ಧದಷ್ಟು ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಆಪರೇಷನ್‌ ಹಸ್ತ ತಡೆಗೆ ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರಿಯಾಂಕ್‌ ಖರ್ಗೆ ನೀಡಿರುವ ಹೇಳಿಕೆ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಯಾವುದೇ ಕಂಡಿಷನ್‌ ಇಲ್ಲದೆ ಕಾಂಗ್ರೆಸ್‌ಗೆ ಬಂದರೆ ಅವರಿಗೆ ಸ್ವಾಗತ ಕೋರಲಾಗುವುದು. ನಾವು ಆಪರೇಷನ್‌ ಹಸ್ತ ಮಾಡಲು ಹೊರಟಿಲ್ಲ. ಬಿಜೆಪಿ, ಜೆಡಿಎಸ್‌ ಒಡೆಯುವುದು ನಮ್ಮ ಉದ್ದೇಶವಲ್ಲ. ಯಾರ ಅಸ್ತಿತ್ವ ಏನು ಎನ್ನುವುದನ್ನು ಜನರೇ ತೋರಿಸಿದ್ದಾರೆ ಎಂದು ತಿಳಿಸಿದರು.

Tap to resize

Latest Videos

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಗುತ್ತಿಗೆದಾರರು ಭ್ರಷ್ಟಾಚಾರ ಆರೋಪ ಮಾಡಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಸಚಿವ ಚೆಲುವರಾಯಸ್ವಾಮಿ ಅವರ ಬಳಿ ಕೆಲವರು ಸಂಪರ್ಕದಲ್ಲಿರಬಹುದು. ಹೈದರಾಬಾದ್‌ ಕರ್ನಾಟಕ ಭಾಗದ ಹಲವು ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಅವರ ಅಸ್ತಿತ್ವ ಕಾಪಾಡಿಕೊಂಡು ಹೋದರೆ ಸಾಕು. ಘರ್‌ ವಾಪಸಿ, ಆಪರೇಷನ್‌ ಹಸ್ತ ಅಂತ ಹೋದರೆ ಬಿಜೆಪಿ ಮತ್ತು ಜೆಡಿಎಸ್‌ನ ಅರ್ಧದಷ್ಟುಶಾಸಕರು ಖಾಲಿಯಾಗುತ್ತಾರೆ ಎಂದರು.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯಲ್ಲಿ ಈಗ ನಾಯಕರಾಗಲು ಯಾರೂ ತಯಾರಿಲ್ಲ. ಚುನಾವಣೆಗೂ ಮುನ್ನ ಯಡಿಯೂರಪ್ಪ ಅವರನ್ನೇ ನಾಯಕರನ್ನಾಗಿಸಿದ್ದರೆ ಹಲವು ನಾಯಕರು ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಸೇರುತ್ತಿರಲಿಲ್ಲ. ಚುನಾವಣೆ ಬಂದಾಗ ಮಾತ್ರ ಬಿಜೆಪಿ ನಾಯಕರಿಗೆ ಯಡಿಯೂರಪ್ಪ ಅವರ ನೆನಪಾಗುತ್ತದೆ. ಅವರ ಹೆಗಲ ಮೇಲೆ ಕೈ ಹಾಕಿ ಮಾತನಾಡುತ್ತಾರೆ. ಯಡಿಯೂರಪ್ಪ ಅವರಿಗೆ ಕಣ್ಣೀರು ಹಾಕಿಸಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದನ್ನು ಎಲ್ಲರೂ ನೋಡಿದ್ದಾರೆ. ಬಿಜೆಪಿ ಈಗ ಮುಳುಗುತ್ತಿರುವ ಹಡಗು ಅಷ್ಟೇ ಎಂದು ಹೇಳಿದರು.

click me!