
ಬೆಂಗಳೂರು (ನ.21): ಮುಖ್ಯಮಂತ್ರಿಗಳ ನೂತನ ಸರ್ಕಾರಿ ಗೃಹ ಪ್ರವೇಶದ ಔತಣಕೂಟದಲ್ಲಿ ಬಿಜೆಪಿ ಶಾಸಕರು(BJP MLAs) ಪಾಲ್ಗೊಂಡಿರುವುದಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BJP State President BY VIjayendra) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಪಕ್ಷದ ಯಾರೆಲ್ಲ ಶಾಸಕರು ಭಾಗವಹಿಸಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ, ನಮ್ಮ ಶಾಸಕರು ಭಾಗವಹಿಸಿರುವುದನ್ನು ವೈಯಕ್ತಿಕವಾಗಿ ನಾನು ಒಪ್ಪುವುದಿಲ್ಲ. ಈ ಬಗ್ಗೆ ಶಾಸಕರೊಂದಿಗೆ ಮಾತನಾಡುತ್ತೇನೆ ಎಂದರು. ಬಿಜೆಪಿ ಶಾಸಕರಾದ ಎಸ್.ಆರ್.ವಿಶ್ವನಾಥ್, ಗಾಲಿ ಜನಾರ್ದನರೆಡ್ಡಿ ಮತ್ತಿತರರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.
ಕುಮಾರಕೃಪ ಅತಿಥಿಗೃಹ(Kumarakrupa Guest House)ದ ನವೀಕರಣಕ್ಕೆ ಸುಮಾರು 100 ಕೋಟಿ ರು. ವೆಚ್ಚ ಮಾಡಲಾಗಿದೆ ಎಂಬ ಮಾಹಿತಿ ಇದೆ. ಟೆಂಡರ್ ಪ್ರಕ್ರಿಯೆ ನಡೆಸದೇ ಹಣ ದುರ್ಬಳಕೆ ಮಾಡಲಾಗಿದೆ ಎಂಬ ಆರೋಪಗಳಿವೆ ಎಂದು ಇದೇ ವೇಳೆ ವಿಜಯೇಂದ್ರ ಹೇಳಿದರು.
ಅತಿಥಿಗೃಹದ ಹೆಸರು ಬದಲಿಸಿ ‘ಗಂಗಾ’ (Gangaa) ಎಂದು ನಾಮಕರಣ ಮಾಡಲಾಗಿದೆ. ಕ್ಯಾಬಿನೆಟ್‌ನಲ್ಲಿ ಚರ್ಚಿಸದೇ ನವೀಕರಣ ಮಾಡಲಾಗಿದೆ ಎಂಬ ವಿಚಾರವೂ ಕೇಳಿಬರುತ್ತಿದೆ. ನವೀಕರಣಕ್ಕೆ ಎಷ್ಟು ಕೋಟಿ ರು. ವೆಚ್ಚವಾಗಿದೆ ಎಂಬುದನ್ನು ಮುಖ್ಯಮಂತ್ರಿಗಳೇ ಬಹಿರಂಗಪಡಿಸಬೇಕು. ಗುತ್ತಿಗೆದಾರರಿಗೆ ಎರಡು ಕೋಟಿ ರು. ಬಿಲ್ ಮಾಡಿಕೊಡುವಂತೆ ಕರೆ ಮಾಡಿ ಸೂಚಿಸಲಾಗಿದೆ ಎಂಬ ಮಾಹಿತಿಯೂ ನನ್ನ ಗಮನಕ್ಕೆ ಬಂದಿದೆ. ಬರಗಾಲದ ಸಂದರ್ಭದಲ್ಲಿ ಇಂತಹ ದುಂದುವೆಚ್ಚದ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.