
ಬೆಂಗಳೂರು(ಮಾ. 22) ಕ್ಷಿಪ್ರ ರಾಜಕೀಯ ಬೆಳವಣಿಗೆಯಾಗಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಶಾಸಕರು ದೂರು ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಬಿಎಸ್ ವೈ ಭೇಟಿಯಾಗಿ ದೂರು ನೀಡಿಡಿದ್ದಾರೆ. 30 ಕ್ಕೂ ಹೆಚ್ಚು ಬಿಜೆಪಿ ಶಾಸಕರಿಂದ ಯತ್ನಾಳ್ ವಿರುದ್ಧ ದೂರು ಸಲ್ಲಿಕೆಯಾಗಿದೆ.
ಯತ್ನಾಳ್ ಹೇಳಿಕೆಗಳು ಪಕ್ಷಕ್ಕೆ ಭಾರೀ ಮುಜುಗರ ತರುತ್ತಿವೆ. ಮುಂದೆ ತಾತೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿವೆ. ಅಲ್ಲದೇ ಉಪಚುನಾವಣೆಯನ್ನ ಎದರಿಸುತ್ತಿದ್ದೇವೆ. ಇಂಥಹ ಸಮಯದಲ್ಲಿ ಯತ್ನಾಳ್ ಬಾಯಿಗೆ ಬಂದ ಹಾಗೇ ಮಾತಮಾಡುತ್ತಿದ್ದಾರೆ. ಇದಕ್ಕೆ ನೀವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಒತ್ತಾಯ ಮಾಡಿದ್ದಾರೆ.
ರಾಸಲೀಲೆ ವಿಡಿಯೋಕ್ಕೆ ಕಾರಣ ಹೇಳಿದ ಕುಮಾರಸ್ವಾಮಿ
ಇದಲ್ಲದೇ ಕೆಲ ಸಚಿವರುಗಳ ವಿರುದ್ಧವೂ ಬಿಜೆಪಿ ಶಾಸಕರು ದೂರು ನೀಡಿದ್ದಾರೆ ಎನ್ನಲಾಗಿದೆ. ಕೆಲ ಸಚಿವರು ನಮ್ಮ ಮಾತುಗಳನ್ನ ಕೇಳುತ್ತಿಲ್ಲ ಎಂದು ಸಿಎಂ ಬಳಿ ದೂರು ಹೇಳಿಕೊಂಡಿದ್ದಾರೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದರು ನಮ್ಮ ಸಚಿವರೇ ನಮ್ಮ ಮಾತು ಕೇಳುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.
ಸಿಎಂ ಭೇಟಿ ನಂತರ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿದ್ದಾರೆ. ಮಾನ್ಯ ಮುಖ್ಯ ಮಂತ್ರಿಗಳನ್ನ 40 ಕ್ಕೂ ಹೆಚ್ಚು ಶಾಸಕರು ಭೇಟಿ ಮಾಡಿದ್ದೇವೆ. ನಮ್ಮ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು. 25ಕ್ಕೆ ಚರ್ಚೆಯನ್ನ ಮುಂದೂಡಲಾಗಿದೆ. ನಮ್ಮ ಕ್ಷೇತ್ರಗಳ ಅಭಿವೃದ್ದಿ ಕೆಲಸಗಳ ಬಗ್ಗೆ ಸಿಎಂ ಗೆ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಳು ಪ್ರಾರಂಭವಾಗಲಿವೆ ಆಗ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.
ಯತ್ನಾಳ್ ಬಗ್ಗೆ ನಾನೇನು ಹೇಳೋದಿಲ್ಲ. ಮಾನ್ಯ ಮುಖ್ಯ ಮಂತ್ರಿಗಳ ಬಗ್ಗೆ ಟೀಕೆ ಮಾಡೋದು ಎಷ್ಟರ ಮಟ್ಟಿಗೆ ಸರಿ? ಇದನ್ನ ನಾವು ವರಿಷ್ಠರ ಜೊತೆ ಚರ್ಚೆ ಮಾಡಲಾಗುತ್ತದೆ ಎಂದು ರೇಣುಕಾಚಾರ್ಯ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.