2023ಕ್ಕೆ ಒಕ್ಕಲಿಗರ ನಾಯಕರು ಯಾರು?. ಕುಮಾರಸ್ವಾಮಿ ವಿರುದ್ಧ ಗೆದ್ದ ಮೇಲೆ ನಾನು ಏಲ್ಲೊ ಇರ್ತಿನಿ. ನಾನೇ ಸಿಎಂ ಆದರೂ ಆದೆ. ಹೀಗೆ, ಸವಾಲೆಸೆದಿರುವುದು ಮಾತ್ರವಲ್ಲ 2023ರ ವಿಧಾನಸಭೆ ಚುನಾವಣೆ ಕುರಿತು ಬಿಜೆಪಿಯ ಎಂಎಲ್‌ಸಿ ಸಿ.ಪಿ.ಯೋಗೇಶ್ವರ ಭವಿಷ್ಯ ನುಡಿದಿರುವ ಆಡಿಯೋ ಬಹಿರಂಗ.
ರಾಮನಗರ(ಜ.14): ಚುನಾವಣೆ ಬಳಿಕ ನಮ್ಮ ಬಿಜೆಪಿ ಸರ್ಕಾರ ಜನಾಭಿಪ್ರಾಯದ ಮೂಲಕ ಅಧಿಕಾರಕ್ಕೆ ಬರುವುದಿಲ್ಲ. ಆದರೆ, ಚುನಾವಣೆಗೂ ಮುನ್ನವೇ ಆಪರೇಷನ್ ಕಮಲ ಮಾಡಿ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಅಮಿತ್ ಶಾ ಒಂಥರ ರೌಡಿ ರೀತಿ. ದೇವೇಗೌಡರು ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ ಮಾಡ್ತಾರೆ ಕಣಯ್ಯ. ನಾನು ಕುಮಾರಸ್ವಾಮಿ ವಿರುದ್ಧ ನಿಲ್ಲುತ್ತಿದ್ದೇನೆ. ಇದೇ ಅಶೋಕ್ ಬಂದು ಡಿ.ಕೆ.ಶಿವಕುಮಾರ್ ವಿರುದ್ಧ ನಿಲ್ಲಲಿ. ಅಶ್ವತ್ಥ್ ನಾರಾಯಣ್ ರಾಮನಗರದಿಂದ ಕುಮಾರಸ್ವಾಮಿ ಮಗನ ವಿರುದ್ಧ ನಿಲ್ಲಲಿ? 2023ಕ್ಕೆ ಒಕ್ಕಲಿಗರ ನಾಯಕರು ಯಾರು?. ಕುಮಾರಸ್ವಾಮಿ ವಿರುದ್ಧ ಗೆದ್ದ ಮೇಲೆ ನಾನು ಏಲ್ಲೊ ಇರ್ತಿನಿ. ನಾನೇ ಸಿಎಂ ಆದರೂ ಆದೆ. ಹೀಗೆ, ಸವಾಲೆಸೆದಿರುವುದು ಮಾತ್ರವಲ್ಲ 2023ರ ವಿಧಾನಸಭೆ ಚುನಾವಣೆ ಕುರಿತು ಬಿಜೆಪಿಯ ಎಂಎಲ್‌ಸಿ ಸಿ.ಪಿ.ಯೋಗೇಶ್ವರ ಭವಿಷ್ಯ ನುಡಿದಿರುವ ಆಡಿಯೋ ಬಹಿರಂಗವಾಗಿದೆ.
ಆಡಿಯೋದಲ್ಲಿ ಏನಿದೆ?
2023ರ ಚುನಾವಣೆಯಲ್ಲಿ ಜೆಡಿಎಸ್‌ನ 20 ಅಭ್ಯರ್ಥಿಗಳು ಸೋಲುತ್ತಾರೆ. ಇದರಲ್ಲಿ ಗುಬ್ಬಿ ಶ್ರೀನಿವಾಸ್, ಅರಸೀಕೆರೆ ಶಿವಲಿಂಗೇಗೌಡ, ಅರಕಲಗೂಡು ಎ.ಟಿ.ರಾಮಸ್ವಾಮಿ, ಬೆಂಗಳೂರಿನ ಗನ್ ಮಂಜು, ನೆಲಮಂಗಲದ ಶ್ರೀನಿವಾಸಮೂರ್ತಿ, ಮಳವಳ್ಳಿ ಅನ್ನದಾನಿ, ಮದ್ದೂರು ಡಿ.ಸಿ.ತಮ್ಮಣ್ಣಘಿ, ಮಂಡ್ಯ ಶ್ರೀನಿವಾಸ್, ಕೆ.ಆರ್.ನಗರದ ಸಾ.ರಾ.ಮಹೇಶ್ ಅವರುಗಳು ಹೀನಾಯವಾಗಿ ಸೋಲುತ್ತಾರೆ. ರಾಮನಗರದ ಮೂರು ಕ್ಷೇತ್ರದಲ್ಲಿ ಒಂದರಲ್ಲಿ ಜೆಡಿಎಸ್ ಸೋಲುತ್ತದೆ. ಇದರಲ್ಲಿ ಎಚ್.ಡಿ.ಕುಮಾರಸ್ವಾಮಿ ಇದ್ದರೂ ಇರಬಹುದು. ಉತ್ತರ ಕರ್ನಾಟದಲ್ಲಿ 5 ಜೆಡಿಎಸ್ ಎಂಎಲ್‌ಎ ಇದ್ದಾರೆ. ಇದರಲ್ಲಿ ಮೂರು ಜನ ವಾಶ್ ಔಟ್ ಆಗ್ತಾರೆ. ಬಂಡೆಪ್ಪ ಕಾಶಪ್ಪನವರ್ ಜತೆಗೆ ಇನ್ನೊಬ್ಬ ಗೆಲ್ಲಬಹುದು ಅಷ್ಟೆ.
ಉಚಿತ ವಿದ್ಯುತ್ ನೀಡಿಕೆ ಸಾಧ್ಯ: ಜನಪರ ಕೆಲಸ ಬಿಜೆಪಿಗೆ ಅಸಾಧ್ಯವಿರಬಹುದು, ಕಾಂಗ್ರೆಸ್ಸಿಗಲ್ಲ
ತುಮಕೂರು ಜಿಲ್ಲೆಯ ವೀರಭದ್ರಯ್ಯ ಅವರ ಪತ್ನಿ, ಬೇಲೂರಿನ ಲಿಂಗೇಶ್ ಸೋಲ್ತಾರೆ. ನಮ್ಮ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಗೆಲ್ಲುತ್ತಾನೆ. ಚಿಂತಾಮಣಿಯಲ್ಲಿ ಸಕತ್ ಫೈಟ್ ಇದೆ. ಅದರಲ್ಲಿ ರೆಡ್ಡಿ ಔಟ್ ಆಗ್ತಾನೆ. ಸಕಲೇಶಪುರದಲ್ಲಿ ಕುಮಾರಸ್ವಾಮಿ ಇದ್ದ. ಅಲ್ಲಿಗೆ ನಮ್ಮ ಕ್ಯಾಂಡಿಡೇಟ್ 2 ಸಾವಿರದಲ್ಲಿ ಸೋತ. ನಾನೇ ಅವನಿಗೆ ಬಿ ಫಾರಂ ನೀಡಿದ್ದೆ ಈ ಬಾರಿಯೂ ಅವನು ಔಟ್. ಇದೆಲ್ಲ ರಫ್ ಕಾಫಿ ಅಷ್ಟೆ. ಸಾ.ರಾ. ಮೇಹೇಶ್ ಸೋಲಿಗೆ ಆತನೇ ಕಾರಣ. ಆತ ಗೆದ್ದಿರುವುದೇ ಕಡಿಮೆ ಅಂತರದಿಂದ. ಅಲ್ಲಿ ಇಬ್ಬರು ಒಕ್ಕಲಿಗರು ಇದ್ದಾರೆ. ಸಾರಾ ವಿರುದ್ಧ ಕಾಂಗ್ರೆಸ್ ಗೆಲ್ಲಬಹುದು.
ಮೈಸೂರು ಭಾಗದಲ್ಲಿ ನಾವು, ದೇವೇಗೌಡರು ಅಂಡರ್ ಸ್ಟ್ಯಾಂಡಿಂಗ್ ಮಾಡಿದ್ದೊ ನನ್ನ ಅಭಿಪ್ರಾಯದ ಪ್ರಕಾರ ಬಿಜೆಪಿ ಸರ್ಕಾರ ಬರೋದಿಲ್ಲ. ಜನಾಭಿಪ್ರಾಯದ ಮೂಲಕವೂ ಬಿಜೆಪಿ ಬರೋದಿಲ್ಲ ಆದರೆ, ನಾವು ಬಿಜೆಪಿ ಸರ್ಕಾರ ರಚನೆ ಮಾಡ್ತಿವಿ. ಮಾವಿನ ಹಣ್ಣನ್ನು ಮರೆದಲ್ಲೇ ಹಣ್ಣು ಮಾಡೋಕೊ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡೋಕು ವ್ಯತ್ಯಾಸ ಇದೆ. ನಾವು ಎರಡಕ್ಕೂ ರೆಡಿ ಇದ್ದಿವಿ. ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ, ಸಿದ್ದರಾಮಯ್ಯ ಅವರಿಗೆ ಪಟ್ಟ ಕಟ್ಟೋಕೆ ಅವರ ಲೀಡರ್‌ಗಳಿಗೆ ಇಷ್ಟ ಇಲ್ಲ ಡಾ.ಪರಮೇಶ್ವರ್ ಸಹ ಇದ್ದರಲಿ ಒಬ್ಬರು.
ಡಿ.ಕೆ.ಶಿವಕುಮಾರ್ ಸ್ಟ್ರೈಟ್ ಫಾರ್ವಡ್. ಅವರು ನಾನೇ ಸಿಎಂ ಆಗಬೇಕು ಎನ್ನುತ್ತಿದ್ದಾರೆ. ಇದಕ್ಕೆ ನಮ್ಮದೇನು ಸಮಸ್ಯೆ ಇಲ್ಲ. ಡಿಕೆಶಿ, ಸಿದ್ದರಾಮಯ್ಯ ಅವರಿಬ್ಬರೂ ನೇರ ಸ್ಪರ್ಧಿಗಳು. ನಾವು ಸಂಕ್ರಾಂತಿ ಆದ ಮೇಲೆ ಬಹಳ ಡೆವಲ್ಪ್‌ಮೆಂಟ್ ಮಾಡ್ತಿವೆ. ಮೈಸೂರು ಭಾಗದಲ್ಲಿ ಕಾಂಗ್ರಸಿಗರು ಬಹಳ ಮಂದಿ ನಮ್ಮ ಪಕ್ಷಕ್ಕೆ ಬರುತ್ತಾರೆ. ಅವರಿಂದ ನಾಲ್ಕೈದು ಕ್ಷೇತ್ರದಲ್ಲಿ ನಮಗೆ ಪ್ಲಸ್ ಆಗುತ್ತೆ. ಮಂಡ್ಯ, ಕೋಲಾರದಿಂದ ಒಬ್ಬರು ನಮ್ಮ ಕಡೆಗೆ ಬರ್ತಾರೆ. ಎಳೆಂಟು ಬಾರಿ ಸೆಂಟ್ರಲ್ ಮಿನಿಸ್ಟರ್ ಆಗಿದ್ದವರು ಬರ್ತಾರೆ. ನಮ್ಮ ಬಳಿ ಎಲ್ಲ ಮಾಹಿತಿ ಇದೆ. ನಾಳೆ ನಾಡಿದ್ದು ಕ್ಲಾರಿಟಿ ಸಿಗುತ್ತೆ. ಎಲೆಕ್ಷನ್ ಬಳಿಕ ಆಪರೇಷನ್ ಕಮಲ ಮಾಡೋದಿಲ್ಲ ಎಲೆಕ್ಷನ್‌ಗೂ ಮೊದಲೇ ಆಪರೇಷನ್ ಕಮಲ ಮಾಡ್ತಿವಿ.
ಸಿದ್ದರಾಮಯ್ಯ ಕೋಲಾರದಿಂದ ಸೋಲ್ತಾರೆ ಎಂದು ನಾನು ಹೋಳೋದಿಲ್ಲ. ಮುಖ್ಯಮಂತ್ರಿಯಾಗಿದ್ದವರನ್ನು ನನ್ನ ಬಾಯಿಂದ ಸೋಲ್ತಾರೆ ಅಂತಾ ಏಕೇ ಹೇಳಲಿ? ಸಿದ್ದರಾಮಯ್ಯ ಗೆಲ್ಲಲಿ. ಅವರು ಗೆಲುವೆ ಅವರಿಗೆ ತೊಂದರೆ, ಅವರು ಗೆದ್ದರಷ್ಟೆ ಸಿಎಂ ಆಗೋದು? ಅವರ ಕೊನೆ ಪ್ರಯತ್ನ. ಕಾಂಗ್ರೆಸ್‌ನಲ್ಲಿ ಪಾಪುಲರ್ ಲೀಡರ್ ಎಂದರೆ ಸಿದ್ದರಾಮಯ್ಯ.
ಸಿದ್ದು ಮತ್ತೆ 2 ಕಡೆ ಸ್ಪರ್ಧೆ ಮಾಡ್ತಾರಾ?: ದೇವಿಯ ಸೂಚನೆ ಪಾಲಿಸ್ತಾರಾ ಸಿದ್ದರಾಮಯ್ಯ?
ನಾನು ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡ್ತಿದ್ದಿನಿ. ಅಶೋಕ್ ಡಿ.ಕೆ.ಶಿವಕುಮಾರ್ ವಿರುದ್ದ ನಿಲ್ಲಲಿ. ಅಶ್ವತ್ಥ್ ನಾರಾಯಣ್ ಕುಮಾರಸ್ವಾಮಿ ಮಗನ ವಿರುದ್ಧ ನಿಲ್ಲಲಿ? ಇದೊಂದು ಹೋರಾಟ ಆಗ್ಲಿ. ನಾನು ಸೋತರೂ ನನ್ನ ಮಂತ್ರಿ ಮಾಡ್ಲಿಲ್ಲವಾ? ಹಂಗೇ ಅವರನ್ನು ಮಂತ್ರಿ ಮಾಡ್ತಾರೆ.
ಅಮಿತ್ ಶಾ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯ ಬೇಡ ಅಂತಾ. ಅಮಿತ್ ಶಾ ಒಂಥಾರ ರೌಡಿಸಂ ಕಣಯ್ಯ. ಪಾರ್ಟಿ ವಿರುದ್ಧ ಯಾರಾದರೂ ಮಾತನಾಡಿದರೆ ಅಷ್ಟೆ ಅವರ ಕಥೆ. ನಮ್ಮನೆಲ್ಲ ಮೊನ್ನೆ ಕರೆದು ಅವರು ಮಾತನಾಡಿದ್ದಾರೆ. ಪಾರ್ಟಿ ವಿರುದ್ಧ ಯಾರ್ಯಾರು ದ್ರೋಹ ಮಾಡ್ತಿದ್ದೀರಾ ಎಂದು ಗೊತ್ತು ಎಂದು ನೀಟಾಗಿ ಹೇಳಿದ್ದಾರೆ. ಇದೆಲ್ಲ ಹೊಂದಾಣಿಕೆ ಅಂತಾ ಜನರಲ್ಲಿ ಚರ್ಚೆಯಾಗುತ್ತಿದೆ. ಒಟ್ಟಿನಲ್ಲಿ ಏನೇ ಆಗ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತೆ ಅಂತ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.