ಎತ್ತಿನಹೊಳೆ ಯೋಜನೆ ಬೆಟ್ಟ ಅಗೆದು ಇಲಿ ಹಿಡಿದಂತೆ ಆಗಿದೆ. ಈ ಯೋಜನೆ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಗ್ರ ಅಧ್ಯಯನ ನಡೆಸುವಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರು (ಸೆ.06): ಎತ್ತಿನಹೊಳೆ ಯೋಜನೆ ಬೆಟ್ಟ ಅಗೆದು ಇಲಿ ಹಿಡಿದಂತೆ ಆಗಿದೆ. ಈ ಯೋಜನೆ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಗ್ರ ಅಧ್ಯಯನ ನಡೆಸುವಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಸಿ.ಟಿ.ರವಿ, ಆರಂಭದಲ್ಲಿ ಎತ್ತಿನಹೊಳೆ ಯೋಜನೆಯ ಉದ್ದೇಶವೇ ನಿರಂತರ ಬರದ ದವಡೆಗೆ ಸಿಲುಕಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಮತ್ತು ರಾಮನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದಾಗಿದೆ. ಆರಂಭದಲ್ಲಿ8,323 ಕೋಟಿ ರು. ಇದ್ದ ಯೋಜನಾ ಮೊತ್ತವನ್ನು ಈಗ ಪರಿಷ್ಕರಿಸಿ 23,251 ಕೋಟಿ ರು.ಗೆ ಹೆಚ್ಚಳ ಮಾಡಿದ್ದೀರಿ. ಈಗಾಗಲೇ 16,076 ಕೋಟಿ ರು. ವೆಚ್ಚಮಾಡಿದ್ದೀರಿ. ಈವರೆಗಿನ ವೆಚ್ಚದಲ್ಲಿ ಎಷ್ಟು ಹಳ್ಳಿಯ ಜನರಿಗೆ ಕುಡಿಯುವ ನೀರು, ಎಷ್ಟು ಕೆರೆಗಳಿಗೆ ನೀರು ತುಂಬಿಸುತ್ತೀರಿ ಎಂದು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
undefined
ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆ: ಡಿ.ಕೆ.ಶಿವಕುಮಾರ್
ಇದು ಅವೈಜ್ಞಾನಿಕ ಯೋಜನೆ ಅಲ್ಲವೇ?: ಕಳೆದ 10 ವರ್ಷದಲ್ಲಿ ಯೋಜನಾ ವೆಚ್ಚ8,323 ಕೋಟಿ ರು.ನಿಂದ 23,251 ಕೋಟಿ ರು.ಗೆ ಹೆಚ್ಚಳವಾಗಿದೆ. ಆದರೆ, ಇಳುವರಿ 24 ಟಿಎಂಸಿಯಿಂದ 8.5 ಟಿಎಂಸಿಗೆ ಇಳಿದಿದೆ. ಇದೊಂದು ಅವೈಜ್ಞಾನಿಕ ಪ್ರಶ್ನಿಸಿದ್ದಾರೆ.
ಇನ್ನು ಗಾಳಿಗೂ ತೆರಿಗೆ ಹಾಕ್ತಾರೆ: ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದು, ಇನ್ನು ಗಾಳಿಯ ಮೇಲೂ ಒಂದು ತೆರಿಗೆ ಹಾಕಿಬಿಟ್ಟರೆ ಔರಂಗಜೇಬನ ಅಪ್ಪಂದಿರು ಎನ್ನುವುದನ್ನು ತೋರಿಸಿದಂತೆ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು. ನಗರದಲ್ಲಿ ಬೆಂಗಳೂರು ಜಲ ಮಂಡಳಿ ದರ ಏರಿಕೆ ಮಾಡುವ ಬಗ್ಗೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಮದ್ಯದ ಬೆಲೆ, ಸ್ಟಾಂಪ್ ಡ್ಯೂಟಿ, ವಿದ್ಯುತ್ ಬಿಲ್ ಹೀಗೆ ಎಲ್ಲವನ್ನೂ ಏರಿಸಿದರು. ಈಗ ನೀರಿನ ದರವನ್ನೂ ಹೆಚ್ಚಿಸುತ್ತಿದ್ದಾರೆ. ಗಾಳಿಯ ಮೇಲೆ ಟ್ಯಾಕ್ಸ್ ಹಾಕುವುದು ಮಾತ್ರ ಉಳಿದಿದೆ. ಒಂದು ಕಡೆ ಗ್ಯಾರಂಟಿ ನೀಡಿ ಮತ್ತೊಂದು ಕಡೆ ಪಿಕ್ ಪ್ಯಾಕೇಟ್ ಮಾಡಲಾಗುತ್ತಿರುವ ರಾಜ್ಯ ಸರ್ಕಾರ 2 ಸಾವಿರ ಕೊಟ್ಟು 20 ಸಾವಿರ ಹೊಡೆಯುವತ್ತಿದೆ. ಜನವಿರೋಧಿ ಸರ್ಕಾರಕ್ಕೆ ಆಯಸ್ಸು ಕಡಿಮೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪರವಾದ ಏಕೈಕ ಪಕ್ಷ ಬಿಜೆಪಿ: ಸಂಸದ ಯದುವೀರ ಒಡೆಯರ್
ಸಿಎಂ ವಿರುದ್ಧ 50 ಕೇಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸಾಕಷ್ಟು ದಾಖಲೆಗಳಿವೆ. ಅದನ್ನಿಟ್ಟುಕೊಂಡೇ ಸದನದಲ್ಲಿ ಚರ್ಚಿಸಲು ಬಯಸಿದ್ದೆವು. ಆದ್ದರಿಂದ ಸಿಎಂ ಸಿದ್ದರಾಮಯ್ಯ ಚರ್ಚೆಗೆ ಅವಕಾಶ ಕೊಡದೆ ಪಲಾಯನ ಮಾಡಿದರು. ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರದ ಕಪ್ಪುಚುಕ್ಕೆ ಇಲ್ಲ ಎನ್ನುವ ಸಿದ್ದರಾಮಯ್ಯ ವಿರುದ್ಧ 50 ಲೋಕಾಯುಕ್ತ ಪ್ರಕರಣಗಳು ಇವೆ ಎಂದು ಆರ್‌ಟಿಇ ಅರ್ಜಿ ಸಲ್ಲಿಸಿದವರಿಗೆ ಉತ್ತರ ಸಿಕ್ಕಿದೆ ಎಂದು ತಿಳಿಸಿದರು.