ಸಿದ್ದರಾಮಯ್ಯ ಜೈಲಿಗೆ ಹೋಗುತ್ತಿದ್ರು: ಸ್ಫೋಟಕ ಹೇಳಿಕೆ ಕೊಟ್ಟ ಎಂಎಲ್‌ಸಿ

Published : Dec 19, 2020, 03:10 PM ISTUpdated : Dec 19, 2020, 07:04 PM IST
ಸಿದ್ದರಾಮಯ್ಯ ಜೈಲಿಗೆ ಹೋಗುತ್ತಿದ್ರು: ಸ್ಫೋಟಕ ಹೇಳಿಕೆ ಕೊಟ್ಟ ಎಂಎಲ್‌ಸಿ

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುತ್ತಿದ್ದರು ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯರೊಬ್ಬರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.  

ಬೆಂಗಳೂರು, (ಡಿ. 19): ಅರ್ಕಾವತಿ ಕೇಸ್'ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್'ಸಿ ವಿಶ್ವನಾಥ್  ಆರೋಪಿಸಿದ್ದಾರೆ.

"

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುತ್ತಿದ್ದರು. ಅದಕ್ಕಾಗಿಯೇ ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು. ಮತ್ತೆ ಅರ್ಕಾವತಿ ಕೇಸ್ ತೆರೆದರೆ ನೀವು ಎಲ್ಲಿರುತ್ತೀರೆಂದು ತಿಳಿಯುತ್ತದೆ ಎಂದು ಕಿಡಿಕಾರಿದರು.

ಮಾಜಿ ಸಿಎಂ ಎಚ್‌ಡಿಕೆ-ಸಿದ್ದು ಜಟಾಪಟಿ: ಇಬ್ಬರಿಗೂ ಬುದ್ದಿ ಹೇಳಿದ ಕೇಂದ್ರ ಸಚಿವ

ಇದೇ ವೇಳೆ ನನ್ನನ್ನು ಯಾವ ಕಾರಣಕ್ಕೆ ಸೋಲಿಸಿದಿರಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಕಾರಣಕ್ಕೆ ಸೋಲು ಕಂಡೆ ಎಂದು ಅವರು ಆತ್ಮಾವಲೋಕನ ಮಾಡಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷವನ್ನು ಡೆಮಾಲಿಶ್ ಮಾಡಿಬಿಟ್ಟರು ಎಂದು ವ್ಯಂಗ್ಯವಾಡಿದರು. 

ಸದಾ ಬೆನ್ನಿಗೆ ಚೂರಿ ಇರೀತಿದ್ದವರಿಗೆ ಈ ನೋವು ಅರ್ಥವಾಗುತ್ತಿದೆ. ಬೇರೆಯವರ ಬೆನ್ನಿಗೆ ಚೂರಿ ಇರಿದು ಆನಂದ ಪಡುತ್ತಿದ್ದರು. ವಿಘ್ನ ಸಂತೋಷಿಗಳಾಗಿದ್ದವರಿಗೆ ಈಗ ನೋವಾಗುತ್ತಿದೆ ಎಂದು ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟರು. 

ನಿಮ್ಮದು ಮಾತ್ರ ರಕ್ತ, ಮಾಂಸ, ಮೂಳೆ. ನಮ್ಮದು ತಗಡು ಅಥವಾ ಮರಾನಾ? ನೀವು ಚೂರಿ ಇರಿಯೂವಾಗ ಅದನ್ನು ಗಮನಿಸಲೂ ಇಲ್ಲ. ನಾವು ಎಂತಹ ನೋವು ಅನುಭವಿಸಿದೆವು ಗೊತ್ತಿದೆಯಾ ಎಂದು ಪ್ರಶ್ನಿಸಿದರು.

 ಸಿದ್ದರಾಮಯ್ಯ ಚಾಮುಂಡೇಶ್ವರಿ ಬಿಟ್ಟು ಏಕೆ ಓಡಿ ಹೋದ್ರಿ? ನಿಮಗೆ ಸೋಲಿನ ಸುಳಿವು ತಿಳಿದ ಹಿನ್ನೆಲೆ ಓಡಿ ಹೋಗಿದ್ದೀರಿ. ನಿಮ್ಮ ಜನಪರ ಕಾರ್ಯ ಯೋಜನೆ ಏಕೆ ಕೈಹಿಡಿಯಲಿಲ್ಲ. ನೀವು ಚಾಮುಂಡೇಶ್ವರಿ ಕ್ಷೇತ್ರವನ್ನು ಕಡೆಗಣಿಸಿದ್ದೀರಿ. ನೀವು ಯಾರೋ ಕೆಲವು ಚಮಚಗಳ ಕೈಹಿಡಿದಿರಬಹುದು. ಅದಕ್ಕೆ ನೀವು ಬಾದಾಮಿ ಕ್ಷೇತ್ರದ ಕಡೆ‌ ಮುಖ‌ ಮಾಡಿದಿರಿ. ಯಾವ ಮತದಾರರೂ ನಿಮ್ಮನ್ನು ಸೋಲಿಸಲಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ