ಅಳಿಯನಿಗೆ ಆಯಕಟ್ಟಿನ ಹುದ್ದೆ ಕೊಡಿಸುವಲ್ಲಿ ವಿಶ್ವನಾಥ್ ಯಶಸ್ವಿ

Published : Aug 24, 2021, 07:34 PM ISTUpdated : Aug 24, 2021, 07:37 PM IST
ಅಳಿಯನಿಗೆ ಆಯಕಟ್ಟಿನ ಹುದ್ದೆ ಕೊಡಿಸುವಲ್ಲಿ ವಿಶ್ವನಾಥ್ ಯಶಸ್ವಿ

ಸಾರಾಂಶ

* ಎಚ್.ವಿಶ್ವನಾಥ್ ಅಳಿಯನಿಗೆ ವರ್ಗಾವಣೆ ಬಂಪರ್. * ಆರೋಗ್ಯ ಇಲಾಖೆ ಮುಖ್ಯ ಇಂಜಿನಿಯರ್ ಆಗಿ ವರ್ಗಾವಣೆ. * ಹೆಚ್.ಸಿ‌ ರಮೇಂದ್ರ, ನೂತನ ಮುಖ್ಯ ಇಂಜಿನಿಯರ್ ಆಗಿ ವರ್ಗಾವಣೆ. * ವರ್ಗಾವಣೆ ಮಾಡಿಕೊಡುವಂತೆ ಪಟ್ಟು ಹಿಡಿದಿದ್ದ ಹಳ್ಳಿಹಕ್ಕಿ.

ಬೆಂಗಳೂರು, (ಆ.23): ಇಂಜಿನಿಯರ್ ಆಗಿರುವ ಅಳಿಯನಿಗೆ ಆಯಕಟ್ಟಿನ ಹುದ್ದೆ ಕೊಡಿಸುವುದರಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ಕೊನೆಗೂ ಯಶಸ್ವಿಯಾಗಿದ್ದಾರೆ.

ಹೌದು.... ವಿಶ್ವನಾಥ್ ಅಳಿಯ ಹೆಚ್.ಸಿ‌ ರಮೇಂದ್ರ ಅವರನ್ನ ಆರೋಗ್ಯ ಇಲಾಖೆ ಮುಖ್ಯ ಇಂಜಿನಿಯರ್ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು (ಆ.24) ಆದೇಶ ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ವಿಶ್ವನಾಥ್ ಅವರ ಬೇಡಿಕೆಯನ್ನು ಈಡೇರಿಸಿದ್ದಾರೆ.

ಬೆಂಗಳೂರು–ಮೈಸೂರು ದಶಪಥ ರಸ್ತೆ ಕ್ರೆಡಿಟ್: ಬಿಜೆಪಿ ನಾಯಕರಲ್ಲೇ ಕುಸ್ತಿ

ಈ ಹಿಂದೆ ಗೃಹ ಸಚಿವರಾಗಿದ್ದಾಗ ಬಸವರಾಜ್ ಬೊಮ್ಮಾಯಿ ಅವರೇ ಶಿಫಾರಸ್ಸು ಮಾಡಿದ್ದರು. ಇದೀಗ ಮುಖ್ಯಮಂತ್ರಿ ಆದ ಬಳಿಕ ಬೊಮ್ಮಾಯಿ ಅವರೇ  ವರ್ಗಾವಣೆ ಮಾಡಿಸಿ ಕೊಟ್ಟಿದ್ದಾರೆ.

ನಿನ್ನೆ (ಆ.23) ಅಷ್ಟೆ ವರ್ಗಾವಣೆ ಮಾಡಿಕೊಡುವಂತೆ ವಿಶ್ವನಾಥ್ ಅವರು ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?