ಸಿದ್ದರಾಮೋತ್ಸವದ ಬದಲು ಕಾಂಗ್ರೆಸ್‌ ಪಕ್ಷದ ಉತ್ಸವ ಆಗಬೇಕಿತ್ತು: ವಿಶ್ವನಾಥ್‌

By Govindaraj S  |  First Published Jul 26, 2022, 4:30 AM IST

ಸಿದ್ದರಾಮೋತ್ಸವದ ಅಗತ್ಯ ಇರಲಿಲ್ಲ, ಕಾಂಗ್ರೆಸ್ಸಿನ ಉತ್ಸವ ನಡೆಯಬೇಕಿತ್ತು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಕಾಂಗ್ರೆಸ್‌ ಬಗ್ಗೆ ಮಾತನಾಡಲಿಲ್ಲ. 


ಮೈಸೂರು (ಜು.26): ಸಿದ್ದರಾಮೋತ್ಸವದ ಅಗತ್ಯ ಇರಲಿಲ್ಲ, ಕಾಂಗ್ರೆಸ್ಸಿನ ಉತ್ಸವ ನಡೆಯಬೇಕಿತ್ತು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಕಾಂಗ್ರೆಸ್‌ ಬಗ್ಗೆ ಮಾತನಾಡಲಿಲ್ಲ. ಸ್ವತಃ ಸಿದ್ದರಾಮಯ್ಯ ಕೂಡ ಕಾಂಗ್ರೆಸ್‌ ಹೆಸರೇಳಲಿಲ್ಲ. ಬರೀ ಸಿದ್ದರಾಮಯ್ಯ ಪುಂಗಿ ಊದಿದರೇ, ಕಾಂಗ್ರೆಸ್‌ ಪುಂಗಿ ಊದುವವರು ಯಾರು ಎಂದು ಪ್ರಶ್ನಿಸಿದರು. 

ಸಿದ್ದರಾಮೋತ್ಸವದ ಬದಲು ಕಾಂಗ್ರೆಸ್ಸಿನ ಉತ್ಸವ ಆಗಬೇಕು. ಇಂದಿರಾಗಾಂಧಿ, ದೇವರಾಜ ಅರಸು ಅವರ ಸ್ಮರಣೆ ಮಾಡಬೇಕು. ಕಾಂಗ್ರೆಸ್‌ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇರಬಾರದು ಎಂದರು. ತಮ್ಮ ಪುತ್ರ ಅಮಿತ್‌ ದೇವರಹಟ್ಟಿಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿರುವ ಕುರಿತ ಪ್ರಶ್ನೆಗೆ, ಅದು ಆತನ ವೈಯಕ್ತಿಕ ನಿರ್ಧಾರ. ಅವನಿಗೂ 42 ವರ್ಷ ಆಗಿದೆ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಆಗಿದ್ದಾನೆ. ಅವನಿಗೂ ಸ್ವಂತ ನಿರ್ಧಾರ ಕೈಗೊಳ್ಳುವ ಶಕ್ತಿಯಿದೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಯ ಅಗತ್ಯವಿಲ್ಲ ಎಂದರು.

Tap to resize

Latest Videos

ಕಾಂಗ್ರೆಸ್ ಇತಿಹಾಸದಲ್ಲಿ ವ್ಯಕ್ತಿ ಉತ್ಸವ ನೋಡಿಲ್ಲ: ಹೆಚ್.ವಿಶ್ವನಾಥ್

ಸಿದ್ದರಾಮೋತ್ಸಕ್ಕೆ ಕೈಜೋಡಿಸಿದ ವಿಶ್ವನಾಥ್ ಪುತ್ರ: ವಿಶ್ವನಾಥ್ ಅವರ ಪುತ್ರ ವಿಶ್ವನಾಥ್ ಪುತ್ರ ಅಮಿತ್, ಸಿದ್ದರಾಮೋತ್ಸವಕ್ಕೆ ಜನರನ್ನ ಸೇರಿಸುವ ಹೊಣೆ ಹೊತ್ತಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಹಾಗೂ ತಮ್ಮ ತಂದೆ ರಾಜಕೀಯ ಬದ್ಧ ವೈರಿಗಳು. ಆದರೂ ಸಹ ಇದೀಗ ಅಮಿತ್ ಸಿದ್ದರಾಮೋತ್ಸವಕ್ಕ ಕೈಜೋಡಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಕುರುಬ ಸಮುದಾಯದ ಪ್ರಮುಖ ಮುಖಂಡರು ಮೈಸೂರಿನಲ್ಲಿ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆ ನಡೆಸಿದರು. ಈ ಸಭೆಯಲ್ಲಿ ವಿಶ್ವನಾಥ್ ಪುತ್ರ   ಅಮಿತ್ ಭಾಗಿಯಾಗಿದ್ದು, ಸಿದ್ದರಾಮೋತ್ಸವಕ್ಕೆ ಜನರನ್ನ ಸೇರಿಸುವ ಹೊಣೆ ಅಮಿತ್ ಹೊತ್ತಿಕೊಂಡಿದ್ದಾರೆ.

ನಾನು ಜಿಲ್ಲಾ ಪಂಚಾಯಿತಿ ಚುನಾವಣೆ ಗೆಲ್ಲಲು ಸಿದ್ದರಾಮಯ್ಯ ಕಾರಣ.ನನ್ನ ಪರ ಪ್ರಚಾರಕ್ಕೆ ಬಂದು ನನ್ನನ್ನು ಗೆಲ್ಲಿಸಿದ್ರು. ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ. ನಾವು ಮತ್ತಷ್ಟು ಹೊಳಪು ನೀಡುವ ಕೆಲಸ ಮಾಡಬೇಕು. ಶಾಸಕ ಹೆಚ್ ಪಿ ಮಂಜುನಾಥ್, ಮುಖಂಡ ರವಿಶಂಕರ್ ಜೊತೆಗೂಡಿ ಹೆಚ್ಚಿನ ಜನರನ್ನ ಸೇರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಅಂದಿನ ಋಉಣ ತೀರಿಸಿಲು ಮುಂದಾಗಿದ್ದಾರೆ. ಆಗಸ್ಟ್ 3 ರಂದು  ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬದ ನಿಮಿತ್ತ ಅಮೃತ ಮಹೋತ್ಸವ ಹೆಸರಿನಲ್ಲಿ ದಾವಣಗೆರೆಯಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

ವಿಶ್ವನಾಥ್‌ ವಿಶ್ವಕ್ಕೇ ಪ್ರಶ್ನೆ ಕೇಳ್ತಾರೆ, ಸಲಹೆ ಕೊಡ್ತಾರೆ: ಸಚಿವ ಎಸ್‌.ಟಿ.ಸೋಮಶೇಖರ್‌ ವ್ಯಂಗ್ಯ

ಸಿದ್ದರಾಮಯ್ಯನವರ ಆಪ್ತ ಶಾಸಕರು, ನಾಯಕರು ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಕಾಂಗ್ರೆಸ್‌ನಲ್ಲಿ ಆಕ್ಷೇಪ ವ್ಯಕ್ತವಾಗುತ್ತಿವೆ. ಮಾಜಿ‌ ಸಿಎಂ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಆಚರಿಸುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಹೆಚ್.ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹುಟ್ಟುಹಬ್ಬ ಕಾರ್ಯಕರ್ತರ ಉತ್ಸವವಾಗಬೇಕು. ಆದರೆ ವ್ಯಕ್ತಿ ಪೂಜೆಯ ಉತ್ಸವವಾಗಬಾರದು. ಯಾವುದೇ ಉತ್ಸವವಾದರೂ‌ ಪಕ್ಷದ ಚೌಕಟ್ಟಿನೊಳಗೇ ಆಗಬೇಕು ಎಂದಿದ್ದರು.

click me!