ವಿಶ್ವನಾಥ್ ಫುಲ್ ಗರಂ: ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

By Suvarna NewsFirst Published Dec 1, 2020, 3:35 PM IST
Highlights

ಸಚಿವ ಸ್ಥಾನಕ್ಕೆ ಅನರ್ಹಗೊಂಡಿರುವ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
 

ಬೆಂಗಳೂರು, (ಡಿ.01): ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್‌ಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದ್ದು, ಅವರು ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ಆದೇಶಿಸಿದೆ.

ಇದರಿಂದ ಅಸಮಾಧಾನಗೊಂಡಿರುವ ವಿಶ್ವನಾಥ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದು, ಹುಣಸೂರಲ್ಲಿ ನಾನು ಸೋಲನುಭವಿಸಲು ಸಿ.ಪಿ ಯೋಗೇಶ್ವರ್ ಅವರೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವಿಶ್ವನಾಥ್‌ಗೆ ಬಿಗ್ ಶಾಕ್: ಮಂತ್ರಿಗಿರಿ ಕನಸು ಕಾಣುತ್ತಿದ್ದ ಹಳ್ಳಿಹಕ್ಕಿ ಕನಸಿಗೆ ತಣ್ಣೀರು

ಯೋಗೇಶ್ವರ್ ಅವರನ್ನ ನೂರಕ್ಕೆ ನೂರು ಸಚಿವರನ್ನಾಗಿ ಮಾಡುವುದಾಗಿ ಹೇಳಿದ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ವ್ಯಕ್ತಪಡಿಸಿದರು. ಹುಣಸೂರಿನಲ್ಲಿ ನನ್ನ ಸೋಲಿಗೆ ನೇರ ಕಾರಣ ಸಿ.ಪಿ. ಯೋಗೇಶ್ವರ್. ನನಗೆ ಟಿಕೆಟ್ ಕೊಡದೆ ಇದ್ದಕ್ಕೂ ಮುಂಚಿತವಾಗಿ ನಾನೇ ಕ್ಯಾಂಡಿಡೇಟ್ ಅಂತ ಬಿಂಬಿಸಿ ಸೀರೆ ಹಂಚಿ ಡ್ಯಾಮೇಜ್ ಮಾಡಿದ್ದ. ಅದಾದ ಬಳಿಕ ನಾನು ಅಭ್ಯರ್ಥಿ ಆದ್ಮೇಲೆ ಪಕ್ಷದಿಂದ ಚುನಾವಣೆಗೆ ಅಂತ ನನಗೆ ಬಂದಂತಹ ದೊಡ್ಡ ಮೊತ್ತದ ಹಣ ನನಗೆ ತಲುಪಲಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

 ನನಗೆ ಅಂತ ಬಂದ ಹಣವನ್ನ ಯೋಗೇಶ್ವರ್ ಹಾಗೂ ಸಂತೋಷ್ ಲಪಟಾಯಿಸಿದ್ರು. ನನ್ನ ಸೋಲಿಗೆ ಇದು ಕೂಡ ಕಾರಣ. ಇದೇ ವಿಚಾರ ಸಂಬಂಧ ಸಿಎಂ ಹಾಗೂ ಪಕ್ಷದ ಅಧ್ಯಕ್ಷರಿಗೂ ದೂರು ನೀಡಿದ್ದೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಈ ವಿಚಾರದಿಂದ ನನಗೆ ತುಂಬಾನೇ ಬೇಸರವಾಗಿದೆ ಎಂದು ವಿಶ್ವನಾಥ್ ಅಸಮಾಧಾನ ಹೊರಹಾಕಿದರು.

click me!