ಸಿಎಂ ಸಿದ್ದರಾಮಯ್ಯ ಸಮಾಜವಾದಿ ಅಲ್ಲ, ಮಜಾವಾದಿ: ಎನ್.ರವಿಕುಮಾರ್ ಲೇವಡಿ

By Kannadaprabha News  |  First Published Jul 15, 2024, 12:45 AM IST

ಸಿಎಂ ಸಿದ್ದರಾಮಯ್ಯ ಸಮಾಜವಾದಿ ಆಗಿರದೇ, ಮಜಾವಾದಿ ಆಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ.


ದಾವಣಗೆರೆ (ಜು.15): ಸಿಎಂ ಸಿದ್ದರಾಮಯ್ಯ ಸಮಾಜವಾದಿ ಆಗಿರದೇ, ಮಜಾವಾದಿ ಆಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾವಾದಿಯಾಗಿದ್ದಾರೆ. ತಮ್ಮನ್ನು ತಾವು ಸಮಾಜವಾದಿಯೆಂದು ಸಿದ್ದರಾಮಯ್ಯ ಬಿಂಬಿಸಿಕೊಳ್ಳುತ್ತಿದ್ದರಷ್ಟೇ ಎಂದರು. ಮೂಡಾ ಹಗರಣದಿಂದ ಸಿದ್ದರಾಮಯ್ಯ ಮಜಾವಾದಿಯೆಂಬುದು ಬಹಿರಂಗವಾಗಿದೆ. ಸಿದ್ದರಾಮಯ್ಯನವರ ನಿಜವಾದ ಬಣ್ಣವೂ ಬಯಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಸೇರಿ ಹಲವರ ಬಂಧನವಾಗಿದೆ. 

ಹಗರಣದಲ್ಲಿ 94 ಕೋಟಿ ಹಣವನ್ನು700 ಖಾತೆಗೆ ಹಾಕಲಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರವು ವ್ಯವಸ್ಥಿತವಾಗಿ ಲೂಟಿ ಮಾಡುತ್ತಿದೆ ಎಂದು ಅವರು ದೂರಿದರು.ಇದೊಂದು ಲೂಟಿ ಸರ್ಕಾರವಾಗಿದ್ದು, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಒಂದು ವೇಳೆ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದಿದ್ದರೆ ಇದೇ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿರಲಿಲ್ಲವೇ? ಅದೇ ರೀತಿ ಈಗ ಜನರೂ ಸಹ ಮುಡಾ ಸೈಟ್‌ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಧ್ವನಿ ಎತ್ತುತ್ತಿದ್ದಾರೆ. ವಿಪಕ್ಷದಲ್ಲಿರುವ ನಾವು ಸಹ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿದ್ದೇವೆ ಎಂದು ಅವರು ಹೇಳಿದರು.

Latest Videos

undefined

ಪಂಚಮಸಾಲಿಗೆ 2 ಎ ಮೀಸಲಾತಿಗೆ ನಿರಾಣಿ ಒತ್ತಾಯ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಸಚಿವರಿದ್ದಾಗಲೇ ನಾವು ಹೋರಾಟ ಮಾಡಿದ್ದು, ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ 2ಎ ಮೀಸಲಾತಿಗಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 14 ತಿಂಗಳು ಕಳೆಯುತ್ತಿವೆ. ಈಗಲಾದರೂ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕೆಲಸ ಆಗಬೇಕು. ಪಂಚಮಸಾಲಿ ಸಮಾಜ ಬಾಂಧವರ ಅಪೇಕ್ಷೆ ಇದೆ. ಆದಷ್ಟು ಬೇಗನೆ ರಾಜ್ಯ ಸರ್ಕಾರ ಮೀಸಲಾತಿ ಘೋಷಣೆ ಮಾಡಲಿ ಎಂದು ಅವರು ಆಗ್ರಹಿಸಿದರು.

ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯ ನಿರತರಾಗಿದ್ದಾರೆ: ಕೇಂದ್ರ ಸಚಿವ ವಿ.ಸೋಮಣ್ಣ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರು. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರು, ಶಾಸಕರ ಬಂಧನವಾಗಿದೆ. ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು. ತನಿಖೆ ಮುಗಿದು, ತಪ್ಪಿತಸ್ಥ ಅಲ್ಲವೆಂದರೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿ ಎಂದು ಅವರು ಕಿವಿಮಾತು ಹೇಳಿದರು. ಮೈಸೂರಿನ ಮೂಡಾ ನಿವೇಶನ ಹಗರಣ ಸ್ಪಷ್ಟವಾಗಿದೆ. ವಾಲ್ಮೀಕಿ ನಿಗಮದ ಹಣಕಾಸು ಹಗರಣ ಹಾಗೂ ಮೂಡಾ ಹಗರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆಗೆ ಸಹಕರಿಸಲಿ ಎಂದು ಮುರುಗೇಶ ನಿರಾಣಿ ಒತ್ತಾಯಿಸಿದರು.

click me!