ವಿಪಕ್ಷ ನಾಯಕ ಆಯ್ಕೆ ವಿಳಂಬದಿಂದ ಮುಜುಗರವಾಗಿದೆ: ಬಿಜೆಪಿ ಶಾಸಕ..!

Published : Jul 09, 2023, 01:00 AM IST
ವಿಪಕ್ಷ ನಾಯಕ ಆಯ್ಕೆ ವಿಳಂಬದಿಂದ ಮುಜುಗರವಾಗಿದೆ: ಬಿಜೆಪಿ ಶಾಸಕ..!

ಸಾರಾಂಶ

ಇಷ್ಟೊತ್ತಿಗಾಗಲೇ ಶಾಸಕಾಂಗ ನಾಯಕನ ಆಯ್ಕೆಯಾಗಬೇಕಿತ್ತು, ಶೀಘ್ರವೇ ಪ್ರತಿಪಕ್ಷ ನಾಯಕನ ಆಯ್ಕೆ ಆಗುತ್ತದೆ: ರವಿಕುಮಾರ್‌

ಬೆಂಗಳೂರು(ಜು.09):  ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಲ್ಲಿನ ವಿಳಂಬದಿಂದಾಗಿ ಪಕ್ಷಕ್ಕೆ ಮುಜುಗರವಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಬೇಸರ ವ್ಯಕ್ತಪಡಿಸಿದ್ದಾರೆ. ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ ಆಗಿದೆ ನಿಜ. ಇಷ್ಟೊತ್ತಿಗಾಗಲೇ ಪ್ರತಿಪಕ್ಷ ನಾಯಕನ ಆಯ್ಕೆ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಆಯ್ಕೆಯಾಗಿಲ್ಲ. ಶೀಘ್ರದಲ್ಲಿಯೇ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

ನಾಯಕನನ್ನು ಆಯ್ಕೆ ಮಾಡಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವಲ್ಲಿ ನಮ್ಮ ಪಕ್ಷ ಹಿಂದೆ ಸರಿದಿಲ್ಲ. ಸರ್ಕಾರದ ವಿರುದ್ಧ ಸದನದೊಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತಿದ್ದೇವೆ. ಬಜೆಟ್‌ನಲ್ಲಿ ಬಿಜೆಪಿ ಸರ್ಕಾರದ ಯೋಜನೆಗಳನ್ನು ಕೈ ಬಿಡುವ ಮೂಲಕ ಬಡವರ ವಿರೋಧಿ ಸರ್ಕಾರ ಎಂಬುದನ್ನು ಕಾಂಗ್ರೆಸ್‌ ಸಾಬೀತುಪಡಿಸಿದೆ. ನಾವು ಬಡವರ ಪರ ಮಾಡಿದ ಕೆಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಬಿಟ್ಟು ಅನ್ಯಾಯ ಮಾಡಿದೆ. ಬಜೆಟ್‌ ಮಂಡನೆ ವೇಳೆ ದ್ವೇಷದ ರಾಜಕಾರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಟೀಕಿಸಿದರು.

9 ವರ್ಷ ಪೂರೈಸಿದ ಮೋದಿ ಸರ್ಕಾರ: ಜೂ.22ರಿಂದ 7 ತಂಡಗಳಲ್ಲಿ ರಾಜ್ಯ ಬಿಜೆಪಿ ನಾಯಕರ ಪ್ರವಾಸ

ಜೈನಮುನಿಯ ಹತ್ಯೆ ಖಂಡನೀಯ. ಭಾನುವಾರ ಬಿಜೆಪಿಯ ಮುಖಂಡರು ಅಲ್ಲಿಗೆ ಭೇಟಿ ನೀಡಲಿದ್ದಾರೆ. ಬಿಜೆಪಿ ರಾಜ್ಯದ ಯಾವುದೇ ಸಮಾಜದ ಜನರ ಸುರಕ್ಷತೆಯ ಪರ ಇದ್ದು, ಯಾವಾಗಲೂ ಅವರ ಪರ ನಿಲ್ಲಲಿದೆ ಎಂದರು.

ಹೋರಾಟ ನಿಲ್ಲಿಸಿಲ್ಲ

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಇಷ್ಟೊತ್ತಿಗಾಗಲೇ ಆಗಬೇಕಿತ್ತು. ಕಾರಣಾಂತರಗಳಿಂದ ಆಯ್ಕೆಯಾಗಿಲ್ಲ. ಈ ವಿಳಂಬದಿಂದ ಪಕ್ಷಕ್ಕೆ ಮುಜುಗರವಾಗಿದೆ. ಆದಾಗ್ಯೂ ಸರ್ಕಾರದ ವಿರುದ್ಧದ ಹೋರಾಟದಿಂದ ಹಿಂದೆ ಸರಿದಿಲ್ಲ ಅಂತ ಬಿಜೆಪಿ ಎಂಎಲ್‌ಸಿ ಎನ್‌. ರವಿಕುಮಾರ್‌ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ