ರಾಹುಲ್‌ ಜತೆ ಸಿದ್ದು ಮತ ಯಾತ್ರೆಗೆ ಬಿಜೆಪಿ ವ್ಯಂಗ್ಯ

Kannadaprabha News   | Kannada Prabha
Published : Aug 30, 2025, 06:37 AM IST
Siddaramaiah Rahul Gandhi

ಸಾರಾಂಶ

'ಕಾಂಗ್ರೆಸ್‌ ವಿರುದ್ಧ ಮತಗಳ್ಳತನದ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅದೇ ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಆಗಿದ್ದಾರೆ ಹಾಗೂ ಬಿಹಾರದಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ವೋಟ್‌ ಅಧಿಕಾರ್‌ ರ್‍ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ’

ನವದೆಹಲಿ: ‘1991ರ ಲೋಕಸಭಾ ಚುನಾವಣೆಯಲ್ಲಿ ಜನತಾದಳದಲ್ಲಿದ್ದ ನನ್ನನ್ನು ಮೋಸದಿಂದ ಸೋಲಿಸಿದರು’ ಎಂದು ಕಾಂಗ್ರೆಸ್‌ ವಿರುದ್ಧ ಮತಗಳ್ಳತನದ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅದೇ ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಆಗಿದ್ದಾರೆ ಹಾಗೂ ಬಿಹಾರದಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ವೋಟ್‌ ಅಧಿಕಾರ್‌ ರ್‍ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಅಮಿತ್‌ ಮಾಳವೀಯ ವ್ಯಂಗ್ಯವಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನಾಧರಿಸಿ ‘ಕನ್ನಡಪ್ರಭ’ ಪತ್ರಿಕೆ ಪ್ರಕಟಿಸಿದ್ದ ವರದಿಯನ್ನು ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಳವೀಯ ಹಂಚಿಕೊಂಡಿದ್ದಾರೆ.

ಕನ್ನಡಪ್ರಭ ವರದಿ ಟ್ವೀಟ್‌ ಮಾಡಿದ ಕೇಂದ್ರ ಬಿಜೆಪಿ

1991ರ ಲೋಕಸಭೆ ಚುನಾವಣೆಯಲ್ಲಿ ಮೋಸದಿಂದ ಸೋಲಿಸಿದರು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ‘ಕನ್ನಡಪ್ರಭ’ ರಾಷ್ಟ್ರೀಯ ಬಿಜೆಪಿ ಟ್ವೀಟ್‌ ಮಾಡಿ, ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.

ವಿಪಕ್ಷ ನಾಯಕ ಸ್ಥಾನಕ್ಕೆ ರಾಹುಲ್‌ ಗಾಂಧಿ ಅತ್ಯಂತ ಸೂಕ್ತ ಎಂದ ಜನ!

ಮೋದಿ ಸರ್ಕಾರವನ್ನು ಪ್ರತಿ ರಂಗದಲ್ಲೂ ಎದುರಿಸಲು, ವಿರೋಧ ಪಕ್ಷಗಳನ್ನು ಮುನ್ನಡೆಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಕ್ತರು ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ಹೇಳಿದೆ.ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಜನರ ಆಯ್ಕೆಗಳಲ್ಲಿ ಸೇರಿದ್ದರು, ಆದರೆ ವಿರೋಧ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿಯ ಈ ಎಲ್ಲರಿಗಿಂತ ಬೆಸ್ಟ್‌ ಎನ್ನುವ ಅಭಿಪ್ರಾಯ ಮೂಡಿಬಂದಿದೆ.

ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯನ್ನು ಜುಲೈ 1 ರಿಂದ ಆಗಸ್ಟ್ 14, 2025 ರ ನಡುವೆ ನಡೆಸಲಾಯಿತು, ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ 54,788 ವ್ಯಕ್ತಿಗಳನ್ನು ಸಮೀಕ್ಷೆ ಮಾಡಲಾಯಿತು. ಸಿವೋಟರ್‌ನ ನಿಯಮಿತ ಟ್ರ್ಯಾಕರ್ ಡೇಟಾದಿಂದ ಹೆಚ್ಚುವರಿಯಾಗಿ 1,52,038 ಸಂದರ್ಶನಗಳನ್ನು ಸಹ ವಿಶ್ಲೇಷಿಸಲಾಗಿದೆ. ಹೀಗಾಗಿ, ಈ MOTN ವರದಿಗಾಗಿ ಒಟ್ಟು 2,06,826 ಪ್ರತಿಸ್ಪಂದಕರ ಅಭಿಪ್ರಾಯವನ್ನು ಪರಿಗಣಿಸಲಾಗಿದೆ.

ಫೆಬ್ರವರಿಯಲ್ಲಿ ನಡೆದ ಹಿಂದಿನ MOTN ಸಮೀಕ್ಷೆಯಿಂದ, ವಿರೋಧ ಪಕ್ಷದ ಜವಾಬ್ದಾರಿಯನ್ನು ಮುನ್ನಡೆಸಲು ಸೂಕ್ತ ನಾಯಕನಾಗಿ ರಾಹುಲ್ ಗಾಂಧಿಯವರ ಜನಪ್ರಿಯತೆಯು ಶೇಕಡಾ 28.2 ಕ್ಕೆ ಏರಿದೆ, ಆಗ ಅದೇ ಸಂಖ್ಯೆ ಶೇಕಡಾ 23.9 ರಷ್ಟಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ