ರಾಜ್ಯದ ಅಭಿವೃದ್ಧಿ ಮರೆತು ಮುಖ್ಯಮಂತ್ರಿ ಕುರ್ಚಿಗಾಗಿ ಸಚಿವರು ಕಿತ್ತಾಟ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಿರುವಾಗಲೇ ಹೀಗೆ ನಡೆಯುತ್ತದೆ ಎಂದು ಅಂದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರನ್ನು ನೋಡಿದರೆ ಪಾಪ ಎನಿಸುತ್ತಿದೆ ಎಂದ ಸಂಸದ ಬಸವರಾಜ ಬೊಮ್ಮಾಯಿ
ಲಕ್ಷ್ಮೇಶ್ವರ(ಸೆ.10): ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಹೋರಾಟ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸಮೀಪದ ಆದ್ರಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಕುಮಾರ ಮಹಾರಾಜರ ಮೌನ ಅನುಷ್ಠಾನ ಮುಕ್ತಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಖೋಖೋ ಆಟ ನಡೆಯುತ್ತಿದೆ. ಯಾರು ಯಾವಾಗ ಔಟ್ ಆಗುತ್ತಾರೋ ಗೊತ್ತಿಲ್ಲ, ಔಟ್ ಆದ ಸ್ಥಾನವನ್ನು ಯಾರು ತುಂಬುತ್ತಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನಾಯಕರೇ ಕಾರಣ : ಬಸವರಾಜ ಬೊಮ್ಮಾಯಿ
ರಾಜ್ಯದ ಅಭಿವೃದ್ಧಿ ಮರೆತು ಮುಖ್ಯಮಂತ್ರಿ ಕುರ್ಚಿಗಾಗಿ ಸಚಿವರು ಕಿತ್ತಾಟ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಿರುವಾಗಲೇ ಹೀಗೆ ನಡೆಯುತ್ತದೆ ಎಂದು ಅಂದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರನ್ನು ನೋಡಿದರೆ ಪಾಪ ಎನಿಸುತ್ತಿದೆ ಎಂದರು.