ಭಾಗ್ಯಲಕ್ಷ್ಮಿ, ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಕಾಂಗ್ರೆಸ್ ಪಕ್ಷ ನೀಡಿದ್ದಾ: ಬೊಮ್ಮಾಯಿ ಪ್ರಶ್ನೆ

By Kannadaprabha News  |  First Published Jan 7, 2025, 12:01 PM IST

ಅಂಬೇಡ್ಕ‌ರ್ ಅವರು ಬದುಕಿದ್ದಾಗ ಕಾಂಗ್ರೆಸ್ ಹೇಗೆ ನಡೆದು ಕೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತು. ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ಕಾಂ ಗ್ರೆಸ್ ಸಂವಿಧಾನ ಹಾಗೂ ಅಂಬೇಡ್ಕರ್‌ ವಿರೋಧಿ ಎನ್ನುವುದು ಸ್ಪಷ್ಟವಾಗಿದೆ: ಸಂಸದ ಬಸವರಾಜ ಬೊಮ್ಮಾಯಿ 


ಹುಬ್ಬಳ್ಳಿ(ಜ.07): ಕಾಂಗ್ರೆಸ್‌ನವರು ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ. ನೀವು (ಬಿಜೆಪಿ) ಏನು ಮಾಡಿದ್ದೀರಿ ಎಂದು ಕೇಳುತ್ತಾರೆ. ನಾವು ರೈತರ ಪಂಪ್‌ಸೆಟ್ ಗಳಿಗೆ ಉಚಿತ ವಿದ್ಯುತ್, ಭಾಗ್ಯಲಕ್ಷಿ ಹಾಗೂ ರೈತರ ಮಕ್ಕಳಿಗೆ ವಿದ್ಯಾ ನಿಧಿ ಯೋಜನೆ ಜಾರಿ ಮಾಡಿದ್ದೇವೆ. ಇವೆಲ್ಲವನ್ನು ಕಾಂಗ್ರೆಸ್ ಕೊಟ್ಟದೆಯಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಂಬೇಡ್ಕರ್‌ವಿರೋಧಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿ ಭಟನೆ ನಡೆಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಅಂಬೇಡ್ಕ‌ರ್ ಅವರು ಬದುಕಿದ್ದಾಗ ಕಾಂಗ್ರೆಸ್ ಹೇಗೆ ನಡೆದು ಕೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತು. ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ಕಾಂ ಗ್ರೆಸ್ ಸಂವಿಧಾನ ಹಾಗೂ ಅಂಬೇಡ್ಕರ್‌ ವಿರೋಧಿ ಎನ್ನುವುದು ಸ್ಪಷ್ಟವಾಗಿದೆ. ತಾವು ಮಾಡಿರುವ ಅಪರಾಧವನ್ನು ಮುಚ್ಚಿ ಹಾಕಿಕೊಳ್ಳಲು ಶಾ ಹೇಳಿಕೆ ತಿರುಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅಂಬೇಡ್ಕರ್ ಬಗ್ಗೆ ಗೌರವ ಇದ್ದರೆ, ಮೊದಲು ಅಂಬೇ ಡ್ಕರ್‌ಗೆ ಅವರ ಹಿರಿಯರು ಮಾಡಿರುವ ಅಪಮಾ ನಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ ಎಂದರು.

Tap to resize

Latest Videos

ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್‌ ಸಮಾವೇಶ: ಬಸವರಾಜ ಬೊಮ್ಮಾಯಿ

ಜನ ವಿರೋಧಿ ತೀರ್ಮಾನ: 

ಬಸ್ ಪ್ರಯಾಣ ದರ ಏರಿಕೆ ಜನ ವಿರೋಧಿ ತೀರ್ಮಾನ, ಜನರೇ ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಅವರು ಶಕ್ತಿ ಯೋಜನೆ ಮಾಡಿ ಅದಕ್ಕೆ ನೀಡಬೇಕಾದ ಹಣ ಸರಿಯಾಗಿ ನೀಡು ತ್ತಿಲ್ಲ ಎಂದ ಅವರು, ಕೋವಿಡ್ ಸಂದ ರ್ಭದಲ್ಲಿ ತೊಂದರೆ ಆದಾಗ ಸಾರಿಗೆ ಸಂಸ್ಥೆಗೆ ಯಡಿಯೂರಪ್ಪ ಸರ್ಕಾರ ಸಹಾಯ ಮಾಡಿತ್ತು. ಇವರು ಡೀಸೆಲ್ ದುಡ್ಡು ಕಟ್ಟಲು ಆಗದ ಪರಿಸ್ಥಿತಿಗೆ ತಂದಿದ್ದಾರೆ. ಅವರು ಗ್ಯಾರಂಟಿ ಯೋಜನೆಗಳಿಗೆ ಸರಿಯಾಗಿ ಸಂಪ ನ್ಯೂಲ ಕ್ರೋಡೀಕರಣ ಮಾಡಲಾಗದೇ ಜನರ ಮೇಲೆ ತೆರಿಗೆ ಭಾರ ಹಾಕುತ್ತಿದ್ದಾರೆ ಎಂದರು. 

ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ಹಿಡಿತ ಕಳೆದುಕೊಂಡಿದೆ: ಬೊಮ್ಮಾಯಿ

ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದ್ದು, ಸಚಿವರು, ಶಾಸಕರು ಅಧಿಕಾರಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ

ವಿತಂಡವಾದ:

ರೈಲ್ವೆ ಪ್ರಯಾಣ ದರ ಏರಿಕೆಗೂ ಬಸ್ ಪ್ರಯಾಣ ದರ ಹೆಚ್ಚಳಕ್ಕೂ ಹೋಲಿಕೆ ಮಾಡಿ ವಿತಂಡವಾದ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಲಿ. ರಾಜ್ಯದಲ್ಲಿ ರಸ್ತೆ ಗುಂಡಿಗಳು ಬಿದ್ದಿವೆ. ಚಂದ್ರನ ಮೇಲೂ ಗುಂಡಿಗಳಿವೆ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಕೇಳಿ ಬಂದಿರುವ ಆರೋಪದ ಕುರಿತು ಸೂಕ್ತ ತನಿಖೆಯಾಗಲಿ ಎಂದರು.

• ಬಸ್ ಪ್ರಯಾಣ ದರ ಏರಿಕೆ ಜನ ವಿರೋಧಿ ತೀರ್ಮಾನ, ಜನರೇ ಆಕ್ರೋಶ ಹೊರಹಾಕುತ್ತಿದ್ದಾರೆ. ಶಕ್ತಿ ಯೋಜನೆ ಮಾಡಿ ಅದಕ್ಕೆ ಸರಿಯಾಗಿ ಹಣ ನೀಡುತ್ತಿಲ್ಲ 
• ರೈಲ್ವೆ ಪ್ರಯಾಣ ದರ ಏರಿಕೆಗೂ ಬಸ್ ಪ್ರಯಾಣ ದರ ಹೆಚ್ಚಳಕ್ಕೂ ಹೋಲಿಕೆ ಮಾಡಿ ವಿತಂಡವಾದ ಸರಿಯಲ್ಲ. 
• ಅಂಬೇಡ್ಕರ್‌ಬಗ್ಗೆ ಗೌರವ ಇದ್ದರೆ, ಅವರ ಹಿರಿಯರು ಮಾಡಿರುವ ಅಪಮಾನಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ

click me!