ಭ್ರಷ್ಟಾಚಾರದಲ್ಲಿ ಮುಳುಗಿದ ಸಿದ್ದರಾಮಯ್ಯ ಸರ್ಕಾರ: ಈರಣ್ಣ ಕಡಾಡಿ

By Kannadaprabha NewsFirst Published Oct 20, 2024, 11:27 AM IST
Highlights

ವಾಲ್ಮೀಕಿ ನಿಗಮದ ಹಣವನ್ನು ಮಾಜಿ ಸಚಿವ ನಾಗೇಂದ್ರ ಅವರು ಸ್ವಂತಕ್ಕೆ ಹಾಗೂ ಕುಟುಂಬಕ್ಕಾಗಿ ಬಳಸಿಕೊಂಡಿದ್ದಾರೆ. ವಿಮಾನ ಪ್ರಯಾಣದ ಟಿಕೆಟ್, ಪೆಟ್ರೋಲ್ ಡೀಸೆಲ್ ಖರೀದಿ, ಮನೆ ವಿದ್ಯುತ್ ಶುಲ್ಕ, ಮನೆ ಕೆಲಸದವರ ವೇತನ, ಈ ಹಗರಣದ ಹಣದಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿದ್ದು, ಇದನ್ನು ಸಾಕ್ಷಿ ಸಹಿತ ಇ.ಡಿ ದೃಢೀಕರಿಸಿದೆ ಎಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ 

ಬೆಳಗಾವಿ(ಅ.20):  ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಣವನ್ನು ಮಾಜಿ ಸಚಿವ ನಾಗೇಂದ್ರ ಅವರು ಸ್ವಂತಕ್ಕೆ ಹಾಗೂ ಕುಟುಂಬಕ್ಕಾಗಿ ಬಳಸಿಕೊಂಡಿದ್ದಾರೆ. ವಿಮಾನ ಪ್ರಯಾಣದ ಟಿಕೆಟ್, ಪೆಟ್ರೋಲ್ ಡೀಸೆಲ್ ಖರೀದಿ, ಮನೆ ವಿದ್ಯುತ್ ಶುಲ್ಕ, ಮನೆ ಕೆಲಸದವರ ವೇತನ, ಈ ಹಗರಣದ ಹಣದಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿದ್ದು, ಇದನ್ನು ಸಾಕ್ಷಿ ಸಹಿತ ಇ.ಡಿ ದೃಢೀಕರಿಸಿದೆ ಎಂದರು. 

2024ರ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಮತ್ತು ರಾಯಚೂರು ಲೋಕಸಭಾ ಚುನಾವಣೆಗೆ ನಿಗಮದ ಹಣ ಬಳಕೆ ಆಗಿರುವುದು ಉಲ್ಲೇಖವಾಗಿದೆ ಎಂದ ಅವರು, ಕಳಪೆ ಕಾಮಗಾರಿಯಿಂದಾಗಿ ರೈಲ್ವೆ ಮೇಲ್ಸೇತುವೆ ಹಾಳಾಗಿರುವ ಕುರಿತು ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು. ರೈಲ್ವೆ ಮೇಲ್ಸೇತುವೆ ಕಳಪೆ ಕಾಮಗಾರಿ ಕುರಿತು ಮಾಹಿತಿ ಇರಲಿಲ್ಲ. ಇದೀಗ ಗಮನಕ್ಕೆ ಬಂದಿದ್ದು, ತನಿಖೆ ನಡೆಸಿ ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ರೈಲ್ವೆ ಇಲಾಖೆಗೆ ಸೂಚನೆ ನೀಡಲಾಗುವುದು. ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

Latest Videos

ಮುಡಾ ಹಗರಣ: ಇಡಿ ತನಿಖೆವರೆಗೂ ಕಾಯ್ದು ನೋಡೋಣ ಯಾವುದೇ ಅರ್ಜೆಂಟ್‌ ಇಲ್ಲ, ಸಚಿವ ಜಾರಕಿಹೊಳಿ

ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ, ಬಳ್ಳಾರಿ ಲೋಕಸಭೆ ಚುನಾವಣೆಗೆ ₹20 ಕೋಟಿ ವೆಚ್ಚ ಮಾಡಲಾಗಿದೆ. ₹15.82 ಕೋಟಿಯಲ್ಲಿ ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಹಂಚಲು ಮದ್ಯ ಖರೀದಿಗೆ ₹4 ಕೋಟಿ ಮತ್ತು ಓಡಾಟಕ್ಕೆ ₹50 ಲಕ್ಷ ವೆಚ್ಚ ಮಾಡಲಾಗಿದೆ. ಮೈಸೂರು ಮುಡಾ ಹಗರಣ, ₹187 ಕೋಟಿ ವಾಲ್ಮೀಕಿ ನಿಗಮ ಹಗರಣ, ಸಿದ್ದಾರ್ಥ್ ವಿಹಾರ ಟ್ರಸ್ಟ್ ಹಗರಣ, ವಕ್ಫ್ ಬೋರ್ಡ್ ಹಗರಣ ಮತ್ತು ಇನ್ನೂ ಹಲವು ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಭಿವೃದ್ಧಿಯನ್ನೇ ಮರೆತಿದೆ ಎಂದು ದೂರಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಸ್.ಸಿದ್ದನಗೌಡರ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ಹನುಮಂತ ಕೊಂಗಾಲಿ, ಸುಭಾಸ ಸಣ್ಣವೀರಪ್ಪನವರ, ವಿಠ್ಠಲ ಸಾಯಣ್ಣವರ, ವೀರಭದ್ರ ಪೂಜಾರಿ ಇತರರು ಇದ್ದರು. 

click me!