ಕರ್ನಾಟಕದಲ್ಲಿ ಭ್ರಷ್ಟಾಚಾರದ ಅಂಗಡಿ ಓಪನ್‌: ನಳಿನ್‌ ಕುಮಾರ್‌

Published : Aug 07, 2023, 01:00 AM IST
ಕರ್ನಾಟಕದಲ್ಲಿ ಭ್ರಷ್ಟಾಚಾರದ ಅಂಗಡಿ ಓಪನ್‌: ನಳಿನ್‌ ಕುಮಾರ್‌

ಸಾರಾಂಶ

ಭ್ರಷ್ಟಾಚಾರದಿಂದಾಗಿ ಜನರು ಯಾವುದೇ ಸರ್ಕಾರಿ ಕಚೇರಿಗೆ ಹೋಗುವಂತಿಲ್ಲ. ಅಧಿಕಾರಿಗಳಿಗೆ ಇಂತಿಷ್ಟು ಕೋಟಿ ನೀಡಬೇಕೆಂಬ ಟಾರ್ಗೆಟ್‌ ನೀಡಿರುವ ದೂರುಗಳು ಕೇಳಿಬರುತ್ತಿವೆ. ಪ್ರತಿ ಹುದ್ದೆ ಮತ್ತು ಅಧಿಕಾರಿಗಳ ವರ್ಗಾವಣೆಗೆ ದರ ನಿಗದಿಪಡಿಸಲಾಗಿದೆ: ನಳಿನ್‌ ಕುಮಾರ್‌ ಕಟೀಲ್‌ 

ಮಂಗಳೂರು(ಆ.07):  ರಾಜ್ಯದ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿವೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಅಂಗಡಿ ತೆರೆದಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ಕುಮಾರಸ್ವಾಮಿ ಸರಿಯಾಗಿಯೇ ಹೇಳಿದ್ದಾರೆ. ಭ್ರಷ್ಟಾಚಾರದಿಂದಾಗಿ ಜನರು ಯಾವುದೇ ಸರ್ಕಾರಿ ಕಚೇರಿಗೆ ಹೋಗುವಂತಿಲ್ಲ. ಅಧಿಕಾರಿಗಳಿಗೆ ಇಂತಿಷ್ಟು ಕೋಟಿ ನೀಡಬೇಕೆಂಬ ಟಾರ್ಗೆಟ್‌ ನೀಡಿರುವ ದೂರುಗಳು ಕೇಳಿಬರುತ್ತಿವೆ. ಪ್ರತಿ ಹುದ್ದೆ ಮತ್ತು ಅಧಿಕಾರಿಗಳ ವರ್ಗಾವಣೆಗೆ ದರ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದರು.

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು: ನಳಿನ್‌ ಕುಮಾರ್‌ ಕಟೀಲ್‌

ಕಾಮಗಾರಿಗಳಿಗೆ ಹಿನ್ನಡೆ:

ರಾಜ್ಯದ ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಅಲ್ಲದೆ, ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಎಂದರು. ಗ್ಯಾರಂಟಿ ಯೋಜನೆ ಜಾರಿಯಿಂದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವುದು ಕಷ್ಟಎಂದು ಉಪಮುಖ್ಯಮಂತ್ರಿಯೇ ಹೇಳಿದ್ದಾರೆ. ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಏನಾಯಿತು ಎಂಬುದನ್ನು ಈಗಾಗಲೇ ನೋಡಿದ್ದೇವೆ. ಸಿದ್ದರಾಮಯ್ಯ ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ನಳಿನ್‌ ಕುಮಾರ್‌ ಪ್ರಶ್ನಿಸಿದರು.

ಗ್ಯಾರಂಟಿಗಳಿಂದ ರಾಜ್ಯ ಅಭಿವೃದ್ಧಿಯಾಗದು. ಸುದೀರ್ಘ 60 ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್‌ನಿಂದ ಹಳ್ಳಿ ಹಳ್ಳಿಗಳಲ್ಲಿ ಶಾಲೆ, ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗಿಲ್ಲ. ರೈಲ್ವೆ ಇಲಾಖೆಯಲ್ಲೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಆದರೆ ಮೋದಿ ಪ್ರಧಾನಿಯಾದ ಮೇಲೆ ಎಲ್ಲವೂ ಬದಲಾಗಿದೆ. ಜನತೆ ಮೋದಿ ಅವರ ಮೇಲೆ ವಿಶ್ವಾಸವಿರಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳು ವೇಗ ಪಡೆದಿವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

India News Live : ಇಂದೇ ಚುನಾವಣೆ ನಡೆದರೆ ಎನ್‌ಡಿಎಗೆ 326 ಸೀಟು; ಮೋದಿಗೇ ಮತ್ತೆ ಅಧಿಕಾರ!
ಸಿದ್ದು ಮನೆಗೆ ಬಿಜಿಪಿ ನಾಯಕರ ಭೇಟಿ, ಕುತೂಹಲಕ್ಕೆ ಕಾರಣವಾಗುತ್ತಿರುವ ರಾಜಕೀಯ ಬೆಳವಣಿಗೆ