Union Budget 2024: ಸುಭದ್ರ ಭಾರತದ ಜನಪ್ರಿಯ ಬಜೆಟ್, ನಳಿನ್ ಕುಮಾರ್ ಕಟೀಲ್

By Kannadaprabha News  |  First Published Feb 2, 2024, 2:00 AM IST

ಈ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗದ ಅನುಕೂಲಕ್ಕಾಗಿ ವಿಶೇಷ ಒತ್ತು ನೀಡಲಾಗಿದೆ. ಸಾಮಾಜಿಕ ನ್ಯಾಯವನ್ನು ಬಿಂಬಿಸುವ ಬಜೆಟ್ ಆಗಿದ್ದು, ಪ್ರವಾಸೋದ್ಯಮ, ಮೀನುಗಾರಿಕೆ, ರೈಲ್ವೆ ಮತ್ತು ಕೃಷಿಗೆ ಆದ್ಯತೆ ನೀಡಲಾಗಿದೆ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್‌ 


ಮಂಗಳೂರು(ಫೆ.02):  ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಆತ್ಮನಿರ್ಭರ ಭಾರತವನ್ನು ಪ್ರತಿಬಿಂಬಿಸಿದ ಬಜೆಟ್. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದರೂ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಅಭಿವೃದ್ಧಿಯ ಚಿಂತನೆ, ಸುಭದ್ರ ಭಾರತದ ದೃಷ್ಟಿಕೋನ ಇರಿಸಿ ಮಂಡಿಸಲಾದ ಜನಪ್ರಿಯ ಬಜೆಟ್ ಆಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್‌ ಪ್ರತಿಕ್ರಿಯಿಸಿದ್ದಾರೆ.

ಈ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗದ ಅನುಕೂಲಕ್ಕಾಗಿ ವಿಶೇಷ ಒತ್ತು ನೀಡಲಾಗಿದೆ. ಸಾಮಾಜಿಕ ನ್ಯಾಯವನ್ನು ಬಿಂಬಿಸುವ ಬಜೆಟ್ ಆಗಿದ್ದು, ಪ್ರವಾಸೋದ್ಯಮ, ಮೀನುಗಾರಿಕೆ, ರೈಲ್ವೆ ಮತ್ತು ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

Tap to resize

Latest Videos

ಚುನಾವಣೆ ಹೊಸ್ತಿಲಲ್ಲಿ ಮೋದಿ ಸರ್ಕಾರ ಹೊಸ ಘೋಷಣೆ ಮಾಡಿಲ್ಲ ಯಾಕೆ? ಬಜೆಟ್ ವಿಶ್ಲೇಷಣೆ!

ಒಟ್ಟಿನಲ್ಲಿ ವಿತ್ತೀಯ ಶಿಸ್ತಿನ ಬಜೆಟ್ ಆಗಿದ್ದು, ಈ ಮೂಲಕ ಕೇಂದ್ರ ಸರ್ಕಾರದ ಸ್ಥೈರ್ಯವನ್ನು ಬಿಂಬಿಸಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

click me!