ಸಿದ್ದರಾಮಯ್ಯನವರ ಸರ್ಕಾರದಲ್ಲಿ ಎಂತೆಂಥ ಸಚಿವರಿದ್ದಾರೆ. ಯಾವುದರ ಬಗ್ಗೆಯೂ ಅರಿವಿಲ್ಲದೆ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿ ಕರ್ನಾಟಕಕ್ಕೆ ಮಾಡಿದ ಅವಮಾನ. ಸಾರ್ವಜನಿಕವಾಗಿ ಏನು ಮಾತನಾಡಬೇಕು ಎಂಬ ಅರಿವೇ ಅವರಿಗಿಲ್ಲ. ಈ ರೀತಿಯ ಅಸಂಬದ್ಧ ಹೇಳಿಕೆ ನೀಡಿದರೆ ಕರ್ನಾಟಕದ ಮರ್ಯಾದೆ ಹೋಗುತ್ತದೆ. ಇವರಿಗೆಲ್ಲ ಪುನಶ್ಚೇತನ ಶಿಬಿರದ ಅಗತ್ಯವಿದೆ: ಪ್ರತಾಪ್ ಸಿಂಹ
ಮೈಸೂರು(ಜೂ.22): ಕೇಂದ್ರ ಸರ್ಕಾರ ಗೃಹಜ್ಯೋತಿ ಯೋಜನೆಯ ಸರ್ವರ್ ಹ್ಯಾಕ್ ಮಾಡಿದೆ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಅಸಂಬದ್ಧವಾಗಿದೆ. ಇದರಿಂದ ರಾಜ್ಯದ ಜನ ತಲೆತಗ್ಗಿಸಬೇಕಾಗುತ್ತದೆ. ಇವರಿಗೆಲ್ಲ ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕು ಎಂಬ ಬಗ್ಗೆ ಪುನಶ್ಚೇತನ ಶಿಬಿರದ ಅಗತ್ಯವಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರ ಸರ್ಕಾರದಲ್ಲಿ ಎಂತೆಂಥ ಸಚಿವರಿದ್ದಾರೆ. ಯಾವುದರ ಬಗ್ಗೆಯೂ ಅರಿವಿಲ್ಲದೆ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿ ಕರ್ನಾಟಕಕ್ಕೆ ಮಾಡಿದ ಅವಮಾನ. ಸಾರ್ವಜನಿಕವಾಗಿ ಏನು ಮಾತನಾಡಬೇಕು ಎಂಬ ಅರಿವೇ ಅವರಿಗಿಲ್ಲ. ಈ ರೀತಿಯ ಅಸಂಬದ್ಧ ಹೇಳಿಕೆ ನೀಡಿದರೆ ಕರ್ನಾಟಕದ ಮರ್ಯಾದೆ ಹೋಗುತ್ತದೆ. ಇವರಿಗೆಲ್ಲ ಪುನಶ್ಚೇತನ ಶಿಬಿರದ ಅಗತ್ಯವಿದೆ ಎಂದರು. ಸತೀಶ್ ಜಾರಕಿಹೊಳಿ ನಮ್ಮ ರಾಜ್ಯ ಸರ್ಕಾರದ ಪ್ರತಿನಿಧಿ. ಹ್ಯಾಕ್‌ಗೆ ಸಂಬಂಧಿಸಿ ಈ ರೀತಿಯ ಹೇಳಿಕೆ ನೀಡಿ ಮುಜುಗರಕ್ಕೆ ಒಳಗಾಗುವುದು ಬೇಡ ಎಂದು ಕಿವಿಮಾತು ಹೇಳಿದರು.
undefined
ಸಚಿವ ಎಂ.ಬಿ.ಪಾಟೀಲ್‌ಗೆ ಸಿಕ್ಕಿರೋ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ: ಪ್ರತಾಪ್ ಸಿಂಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಅನುಭವ ಇದೆ. ಆದಷ್ಟುಬೇಗ ಮೊದಲ ಬಾರಿಗೆ ಗೆದ್ದ ಶಾಸಕರಿಗೆ, ಹಿರಿಯ ಶಾಸಕರಿಗೆ, ಗೊತ್ತಿಲ್ಲದವರಿಗೆ ಪುನಶ್ಚೇತನ ಕಾರ್ಯಕ್ರಮ ಆಯೋಜಿಸಬೇಕಾದ ಅಗತ್ಯವಿದೆ. ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು, ಹೇಗೆ ಕೆಲಸ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಲು ಹೇಳಿ ಎಂದರು.