ಅಂತೆ-ಕಂತೆಗಳಿಗೆ ತೆರೆ: ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಅಧಿಕೃತ ಮುಹೂರ್ತ ಫಿಕ್ಸ್

By Suvarna NewsFirst Published Feb 20, 2021, 4:15 PM IST
Highlights

ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆಗೆ ಇದೀಗ ಅಧಿಕೃತ ದಿನಾಂಕ ನಿಗದಿಯಾಗಿದೆ. 

ಬೆಂಗಳೂರು, (ಫೆ.20): ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಂತ ಶಾಸಕ ಶರತ್ ಬಚ್ಚೇಗೌಡ ಅವರು, ಕಾಂಗ್ರೆಸ್ ಸೇರ್ಪಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. 

ಇದೇ ಫೆಬ್ರವರಿ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಮೂಲಕ ಶರತ್ ಬಚ್ಚೇಗೌಡ ಈ ವಾರ, ಮುಂದಿನ ವಾರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಅಂತೆ ಕಂತೆಗಳಿಗೆ ಈಗ ತೆರೆ ಬಿದ್ದಿದೆ. 

ಮಧುಬಂಗಾರಪ್ಪ ಬೆನ್ನಲ್ಲೇ ಮತ್ತೋರ್ವ ಶಾಸಕ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಕಾಂಗ್ರೆಸ್ ವರಿಷ್ಠರ ಭೇಟಿಯ ಬಳಿಕ, ಅಂತಿಮ ನಿರ್ಧಾರ ಈಗ ಹೊರ ಬಿದ್ದಿದ್ದು, ಫೆಬ್ರವರಿ 25ರಂದು ಕೆಪಿಸಿಸಿ ಕಚೇರಿಯಲ್ಲಿ ಶರತ್ ಬಚ್ಚೇಗೌಡ ಅಧಿಕೃತವಾಗಿ ಕಾಂಗ್ರೆಸ್ ಸದಸ್ಯ ಸ್ವೀಕರಿಸಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷತ ಇತರೆ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

ಕರ್ನಾಟಕ ಬಿಜೆಪಿ ಸಂಸದ ಪುತ್ರ ಕಾಂಗ್ರೆಸ್‌ನತ್ತ: ಅನಿವಾರ್ಯ ಎಂದ ತಂದೆ ...

ಇನ್ನು ಪುತ್ರ ಕಾಂಗ್ರೆಸ್ ಸೇರ್ಪಡೆಗೆ ತಂದೆ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರು ಪರೋಕ್ಷವಾಗಿ ಸಹ ಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸೇರುವುದು ಅನಿವಾರ್ಯವಾಗಿದೆ ಎಂದು ಸಮರ್ಥಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಶರತ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ವಿರುದ್ಧ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಸೋತಿದ್ದರು. ಆದರೆ ರಾಜ್ಯದಲ್ಲಿ ಉಂಟಾದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿತ್ತು. 

ಈ ಸಂದರ್ಭದಲ್ಲಿ ಮತ್ತೆ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದ ಶರತ್​​ಗೆ ಅದು ಸಾಧ್ಯವಾಗಿರಲಿಲ್ಲ. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್ ಅವರನ್ನ ಸೋಲಿಸಿ ಗೆಲುವು ದಾಖಲಿಸಿದ್ದರು.ಇದೀಗ ಅನಿವಾರ್ಯವಾಗಿ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

click me!