ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ, 25 ಸಂಸದರು ರಾಜ್ಯದ ಜೊತೆಯಿದ್ದೇವೆ: ತೇಜಸ್ವಿ ಸೂರ್ಯ

Published : Sep 30, 2023, 04:00 AM IST
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ, 25 ಸಂಸದರು ರಾಜ್ಯದ ಜೊತೆಯಿದ್ದೇವೆ: ತೇಜಸ್ವಿ ಸೂರ್ಯ

ಸಾರಾಂಶ

ಕಾವೇರಿ ನದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು 25 ಸಂಸದರು ರಾಜ್ಯದ ಜತೆಗಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು 25 ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ.

ಬೆಂಗಳೂರು (ಸೆ.30): ಕಾವೇರಿ ನದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು 25 ಸಂಸದರು ರಾಜ್ಯದ ಜತೆಗಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು 25 ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಿಂದೆ, ಈಗ ಮತ್ತು ಮುಂದೆಯೂ ಕರ್ನಾಟಕದ ಜೊತೆಗಿದೆ. ರಾಜ್ಯದ 25 ಸಂಸದರು ಸಹ ರಾಜ್ಯದ ನೆಲ, ಜಲದ ಪರವಾಗಿದ್ದಾರೆ ಎಂದು ತಿಳಿಸಿದರು.

ಸುಪ್ರೀ ಕೋರ್ಟ್‌ನಲ್ಲಿ ಕಾವೇರಿ ನೀರಿನ ಆದೇಶವನ್ನು ಪರಿವರ್ತಿಸಲು 2018ರಲ್ಲಿ ಕೋರಲಾಗಿತ್ತು. ಅದಕ್ಕಾಗಿ ಪ್ರಮಾಣಪತ್ರ ಸಲ್ಲಿಸಲಾಗಿತ್ತು. ಪರಿಣಾಮ ಸುಪ್ರೀಂಕೋರ್ಟ್ ಆದೇಶ ಮಾರ್ಪಾಡು ಮಾಡಿ 14.75 ಟಿಎಂಸಿ ಹೆಚ್ಚು ನೀರು ರಾಜ್ಯಕ್ಕೆ ದೊರುವಂತಾಯಿತು. ಇದರಲ್ಲಿ ಮಾಜಿ ಸಚಿವ ದಿವಂಗತ ಅನಂತ್‌ಕುಮಾರ ಅವರ ಪಾತ್ರ ಪ್ರಮುಖವಾಗಿತ್ತು. ನೀರಿನಲ್ಲಿ ರಾಜಕೀಯ ಮಾಡುತ್ತಿಲ್ಲ. ರಾಜ್ಯಕ್ಕೆ ನಮ್ಮ ಬದ್ಧತೆ ಇದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 24, 25ನೇ ಸಭೆಯಲ್ಲಿ ರಾಜ್ಯದ ಪರವಾಗಿ ಸಂಸದರು ನಿಂತಿದ್ದಾರೆ ಎಂದರು.

ರಾಜಕೀಯ ಹಿತಕ್ಕಾಗಿ ತಮಿಳುನಾಡಿಗೆ ನೀರು, ಈಗ ಪ್ರಧಾನಿ ಮಧ್ಯ ಪ್ರವೇಶಿಸಲಿ ಎನ್ನುವುದು ಎಷ್ಟು ಸರಿ: ಚಕ್ರವತಿ ಸೂಲಿಬೆಲೆ

ಕೇಂದ್ರ ಸಚಿವರಾದ ಪಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಸಂಸದರು ಕೇಂದ್ರ ಸಚಿವ ಗಜೇಂದ್ರಸಿಂಗ್‌ ಶೆಖಾವತ್‌ ಅವರನ್ನು ಭೇಟಿ ಮಾಡಿದ್ದೇವೆ. ಆದರೆ, ರಾಜ್ಯ ಸರ್ಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹವಾಗಿದೆ. ರಾಜ್ಯ ಸರ್ಕಾರದ ನಿಲುವನ್ನು ಸತತವಾಗಿ ನಾವು ಸಮರ್ಥಿಸಿದ್ದೇವೆ. ರಾಜ್ಯದಲ್ಲಿ ನೀರಿನ ಕೊರತೆ ಬಗ್ಗೆ ಮಾತನಾಡಿದ್ದೇವೆ. ರಾಜ್ಯದ ಪರವಾಗಿ ಕೇಂದ್ರದ ಅಧಿಕಾರಿಗಳು ವಾದ ಮಾಡಿಲ್ಲ ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರು ದಾಖಲೆ ನೀಡಲಿ ಎಂದು ಸವಾಲೆಸೆದ ಅವರು, ನೀರು, ನಾಡಿನ ನುಡಿ, ಭಾಷೆ ವಿಚಾರದಲ್ಲಿ ಬಿಜೆಪಿ, ಕಾಂಗ್ರೆಸ್‌ ಬೇರೆ ಬೇರೆಯಲ್ಲ. ನಾವು ನಾಡಿನ ನ್ಯಾಯದ ಪರ ಇರಬೇಕು. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ನುಡಿದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯಗೆ ಪ್ರಯಾಸ: ಜನಾರ್ದನ ರೆಡ್ಡಿ

ರಾಜ್ಯದ ಕಾಂಗ್ರೆಸ್‌ ಸರ್ಕಾರ ತನ್ನ ವೈಫಲ್ಯ ಮರೆಮಾಚಿ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತಿದೆ. ನೆಲ, ಜಲದಂತಹ ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಪ್ರಯತ್ನ ಮಾಡಬೇಕಿದೆ. ಶೇ.60ರಷ್ಟು ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳ ಪ್ರದೇಶದಲ್ಲಿ 32 ತಾಲೂಕುಗಳು ತೀವ್ರ ಬರಪೀಡಿತ ಎಂದು ಪ್ರಕಟಿಸಲಾಗಿದೆ. ಜಲ ವರ್ಷದಲ್ಲಿ ಜುಲೈ ಮುಕ್ತಾಯದವರೆಗೆ 106 ಟಿಎಂಸಿ ಬೇಕು. ಆದರೆ, 52 ಟಿಎಂಸಿ ನೀರಿದೆ. ರಾಜ್ಯದಲ್ಲಿ ಮುಂಗಾರು ಸಂಪೂರ್ಣ ವಿಫಲವಾಗಿದ್ದು, ತಮಿಳುನಾಡಿಗೆ ಮುಂಗಾರು, ಹಿಂಗಾರಿನಲ್ಲೂ ಮಳೆ ಬೀಳುತ್ತದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಮೋಹನ್‌, ರಾಜ್ಯಸಭಾ ಸದಸ್ಯ ನಾರಾಯಣ್‌, ಶಾಸಕರಾದ ಎಸ್‌.ಮುನಿರಾಜು, ಸಿ.ಕೆ.ರಾಮಮೂರ್ತಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ